ಹಾಸನದಲ್ಲಿ ಜನವರಿ ೨೦ರಂದು ಭೀಮಾ ಕೋರೆಂಗಾವ್ ವಿಜಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಅದರ ಪೂರ್ವಭಾವಿಯಾಗಿ ಜ. ೧೪ರಂದು ಬೆಳಿಗ್ಗೆ ೧೧ ಗಂಟೆಗೆ ಬೈಕ್ ರ್ಯಾಲಿಯನ್ನು ಆಯೋಜಿಸಲಾಗಿದ್ದು, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ರ್ಯಾಲಿಗೆ ಅಧಿಕೃತ ಚಾಲನೆ ನೀಡಲಿದ್ದಾರೆ. ಭೀಮಾ ಕೋರೆಂಗಾವ್ ವಿಜಯೋತ್ಸವಕ್ಕೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೊಮ್ಮಗ ಭೀಮ್ ರಾವ್ ಅಂಬೇಡ್ಕರ್ ಅವರು ಆಗಮಿಸಲಿರುವ ಹಿನ್ನೆಲೆಯಲ್ಲಿ, ಸಮುದಾಯದ ಜನರಲ್ಲಿ ಸಾಮಾಜಿಕ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಬೈಕ್ ರ್ಯಾಲಿಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಭೀಮಾ ಕೋರೆಂಗಾವ್ ವಿಜಯೋತ್ಸವದ ಅಂಗವಾಗಿ ನಗರದ ಅಂಬೇಡ್ಕರ್ ಪ್ರತಿಮೆ ಬಳಿ ಜನವರಿ ೧೪ರಂದು ಬುಧವಾರ ಹಾಸನ ನಗರದಲ್ಲಿ ಬೈಕ್ ರ್ಯಾಲಿ ಏರ್ಪಡಿಸಲಾಗಿದೆ ಎಂದು ದಲಿತ ಹಿರಿಯ ಮುಖಂಡ ಎಚ್.ಕೆ. ಸಂದೇಶ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಜಿಲ್ಲಾ ಕೇಂದ್ರ ಹಾಸನದಲ್ಲಿ ಜನವರಿ ೨೦ರಂದು ಭೀಮಾ ಕೋರೆಂಗಾವ್ ವಿಜಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಅದರ ಪೂರ್ವಭಾವಿಯಾಗಿ ಜ. ೧೪ರಂದು ಬೆಳಿಗ್ಗೆ ೧೧ ಗಂಟೆಗೆ ಬೈಕ್ ರ್ಯಾಲಿಯನ್ನು ಆಯೋಜಿಸಲಾಗಿದ್ದು, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ರ್ಯಾಲಿಗೆ ಅಧಿಕೃತ ಚಾಲನೆ ನೀಡಲಿದ್ದಾರೆ. ಭೀಮಾ ಕೋರೆಂಗಾವ್ ವಿಜಯೋತ್ಸವಕ್ಕೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೊಮ್ಮಗ ಭೀಮ್ ರಾವ್ ಅಂಬೇಡ್ಕರ್ ಅವರು ಆಗಮಿಸಲಿರುವ ಹಿನ್ನೆಲೆಯಲ್ಲಿ, ಸಮುದಾಯದ ಜನರಲ್ಲಿ ಸಾಮಾಜಿಕ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಬೈಕ್ ರ್ಯಾಲಿಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ರ್ಯಾಲಿಯು ನಗರದ ಅಂಬೇಡ್ಕರ್‌ ಪ್ರತಿಮೆ ಬಳಿ ಆರಂಭವಾಗಿ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಪುನಃ ಅಂಬೇಡ್ಕರ್ ಪ್ರತಿಮೆ ಬಳಿಯೇ ಮುಕ್ತಾಯಗೊಳ್ಳಲಿದೆ ಎಂದು ವಿವರಿಸಿದರು.

ಬೈಕ್ ರ್ಯಾಲಿಯಲ್ಲಿ ಸಮುದಾಯದ ಮುಖಂಡರು, ಯುವಕರು ಹಾಗೂ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು. ಜೊತೆಗೆ, ಎಲ್ಲಾ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಬೆಳಿಗ್ಗೆಯೇ ಆಗಮಿಸಬೇಕಾಗಿ ಮನವಿ ಮಾಡಿದರು.ಪತ್ರಿಕಾಗೋಷ್ಠಿಯಲ್ಲಿ ದಲಿತ ಮುಖಂಡರಾದ ಮಣಿಕಂಠ, ಗುಡ್ಡೇನಹಳ್ಳಿ ರಂಗಸ್ವಾಮಿ, ಚೌಡಹಳ್ಳಿ ಜಗದೀಶ್, ಗೋವಿಂದರಾಜು, ಹರೀಶ್ ಉಡುವಾರೆ ಸೇರಿದಂತೆ ಇತರರು ಉಪಸ್ಥಿತರಿದ್ದರು.