ಬೈಕ್ ಸವಾರರು ಹೆಲ್ಮೆಟ್ ಧರಿಸಿ ಜೀವ ಉಳಿಸಿಕೊಳ್ಳಿ: ಇನ್ಸ್‌ಪೆಕ್ಟರ್‌

| Published : Aug 13 2024, 12:53 AM IST

ಸಾರಾಂಶ

ಪಟ್ಟಣ ವ್ಯಾಪ್ತಿಯ ವಿವೇಕಾನಂದ ಶಾಲೆಯ ಮುಂಭಾಗ ಸರ್ಕಲ್‌ನಲ್ಲಿ ಇನ್ಸ್‌ಪೆಕ್ಟರ್ ಶಶಿಕುಮಾರ್ ದ್ವಿಚಕ್ರ ವಾಹನ ಸವಾರರಿಗೆ ಸಂಚಾರ ಮತ್ತು ರಸ್ತೆ ಸುರಕ್ಷತೆ ಜಾಗೃತಿ ಅಭಿಯಾನ ಕಾರ್ಯಕ್ರಮದ ಹಿನ್ನೆಲೆ ಹೆಲ್ಮೆಟ್ ಇಲ್ಲದೆ ಸವಾರಿ ಮಾಡುತ್ತಿದ್ದ ಬಗ್ಗೆ ಸ್ಥಳದಲ್ಲಿಯೇ ವಾಹನಗಳನ್ನು ವಶಕ್ಕೆ ಪಡೆದು ಅರಿವು ಮೂಡಿಸುವ ಮೂಲಕ ಅಭಿಯಾನ ನಡೆಸಿದರು.

ಕನ್ನಡಪ್ರಭ ವಾರ್ತೆ ಹನೂರು

ಪಟ್ಟಣ ವ್ಯಾಪ್ತಿಯ ವಿವೇಕಾನಂದ ಶಾಲೆಯ ಮುಂಭಾಗ ಸರ್ಕಲ್‌ನಲ್ಲಿ ಇನ್ಸ್‌ಪೆಕ್ಟರ್ ಶಶಿಕುಮಾರ್ ದ್ವಿಚಕ್ರ ವಾಹನ ಸವಾರರಿಗೆ ಸಂಚಾರ ಮತ್ತು ರಸ್ತೆ ಸುರಕ್ಷತೆ ಜಾಗೃತಿ ಅಭಿಯಾನ ಕಾರ್ಯಕ್ರಮದ ಪ್ರಯುಕ್ತ ನೂರಾರು ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಇಲ್ಲದೆ ಸವಾರಿ ಮಾಡುತ್ತಿದ್ದ ಬಗ್ಗೆ ಸ್ಥಳದಲ್ಲಿಯೇ ವಾಹನಗಳನ್ನು ವಶಕ್ಕೆ ಪಡೆದು ಅರಿವು ಮೂಡಿಸುವ ಮೂಲಕ ಅಭಿಯಾನ ನಡೆಸಿದರು.

ಸಂಚಾರ ರಸ್ತೆ ಸುರಕ್ಷತೆ ಎಚ್ಚರವಹಿಸಿ: ಪಟ್ಟಣದಲ್ಲಿ ನೂರಾರು ವಾಹನ ಸವಾರರು ಹೆಲ್ಮೆಟ್ ಧರಿಸದೆ ಸಂಚರಿಸುತ್ತಿದ್ದ ಬಗ್ಗೆ ಸೋಮವಾರ ಇನ್ಸ್‌ಪೆಕ್ಟರ್ ಶಶಿಕುಮಾರ್ ವಾಹನ ಸವಾರರ ವಾಹನಗಳನ್ನು ತಡೆದು ಹೆಲ್ಮೆಟ್ ಧರಿಸಿ ಜೀವ ರಕ್ಷಿಸಿಕೊಳ್ಳಿ. ಜೊತೆಗೆ ರಸ್ತೆ ಸಂಚಾರ ಮತ್ತು ಸುರಕ್ಷತೆಯ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಳ್ಳುವ ಮೂಲಕ ದ್ವಿಚಕ್ರ ವಾಹನ ಚಾಲನೆ ಮಾಡುವ ವೇಳೆ ಅಪಘಾತ ಸಂಭವಿಸಿದರೆ ಮೊದಲು ತಲೆಗೆ ಪೆಟ್ಟಾಗಲಿದೆ ಹೀಗಾಗಿ ಪ್ರತಿಯೊಬ್ಬರು ಸಂಚಾರ ನಿಯಮ ಸುರಕ್ಷತೆ ಬಗ್ಗೆ ತಿಳಿದುಕೊಂಡು ದ್ವಿಚಕ್ರ ವಾಹನ ನಡೆಸುವ ವೇಳೆ ತಪ್ಪದೇ ಹೆಲ್ಮೆಟ್ ಧರಿಸಬೇಕು. ಹಿಂಬದಿ ಸವಾರರು ಹೆಲ್ಮೆಟ್ ಧರಿಸುವ ಮೂಲಕ ಕಡ್ಡಾಯವಾಗಿ ಕಾನೂನು ನಿಯಮ ಪಾಲಿಸಬೇಕು. ಇಲ್ಲದಿದ್ದರೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಮೂಲಕ ಸರ್ಕಾರದ ನಿಯಮದಂತೆ ದಂಡ ವಿಧಿಸಲಾಗುವುದು ಎಂದು ತಿಳಿಸಿದರು.ಮಾದೇಶ್ವರ ಬೆಟ್ಟದಲ್ಲೂ ಸಂಚಾರ ರಸ್ತೆ ಸುರಕ್ಷತೆ ಅಭಿಯಾನ:

ರಸ್ತೆ ಸುರಕ್ಷತೆ ದ್ವಿಚಕ್ರ ವಾಹನ ಸವಾರರು ಶ್ರೀ ಕ್ಷೇತ್ರಕ್ಕೆ ಬರುವ ವೇಳೆ ಮತ್ತು ಇಲ್ಲಿಂದ ತೆರಳುವ ವೇಳೆ ಪ್ರತಿಯೊಬ್ಬರು ಹೆಲ್ಮೆಟ್ ಧರಿಸಿ. ಇಲ್ಲದಿದ್ದರೆ ಸರ್ಕಾರದ ನಿಯಮ ಪ್ರಕಾರ ಪೊಲೀಸ್ ಇಲಾಖೆ ಹೆಚ್ಚಿನ ದಂಡ ವಿಧಿಸುವ ಮೂಲಕ ಕ್ರಮ ಕೈಗೊಳ್ಳಲಾಗುವುದು ಎಂದು ರಸ್ತೆ ಸಂಚಾರ ಮತ್ತು ಸುರಕ್ಷತೆಯ ಬಗ್ಗೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಇನ್ಸ್‌ಪೆಕ್ಟರ್ ಜಗದೀಶ್, ಸಿಬ್ಬಂದಿ ವರ್ಗದವರು ದ್ವಿಚಕ್ರ ವಾಹನ ಸವಾರರಿಗೆ ಅಭಿಯಾನ ಮೂಲಕ ತಿಳಿಸಿಕೊಟ್ಟರು.