ಬೈಕ್ ಕಳ್ಳನ ಬಂಧನ, 2.80 ಲಕ್ಷದ 17 ಬೈಕ್‌ ವಶ

| Published : Apr 22 2024, 02:18 AM IST

ಸಾರಾಂಶ

ವಿಜಯಪುರ: ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬಬಲೇಶ್ವರ ಪಟ್ಟಣದಲ್ಲಿ ನಡೆದಿದೆ. ಬಬಲೇಶ್ವರ ತಾಲೂಕಿನ ದೇವರಗೆಣ್ಣೂರ ಗ್ರಾಮದಲ್ಲಿ ಬೈಕ್ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದ ಗೊಲ್ಲಾಳ ಭೀಮಶಿ ಹಂಚಿನಾಳ ಬಂಧಿತ ಆರೋಪಿ. ಈತನಿಂದ ₹ 2.80 ಲಕ್ಷ ಮೌಲ್ಯದ 17 ಬೈಕ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಪುರ: ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬಬಲೇಶ್ವರ ಪಟ್ಟಣದಲ್ಲಿ ನಡೆದಿದೆ. ಬಬಲೇಶ್ವರ ತಾಲೂಕಿನ ದೇವರಗೆಣ್ಣೂರ ಗ್ರಾಮದಲ್ಲಿ ಬೈಕ್ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದ ಗೊಲ್ಲಾಳ ಭೀಮಶಿ ಹಂಚಿನಾಳ ಬಂಧಿತ ಆರೋಪಿ. ಈತನಿಂದ ₹ 2.80 ಲಕ್ಷ ಮೌಲ್ಯದ 17 ಬೈಕ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಶ್ಲಾಘಿಸಿದ್ದಾರೆ.