ವಿಜಯಪುರ: ಬೈಕ್ ಗೆ ಲಾರಿ ಡಿಕ್ಕಿಯಾಗಿ ಶಿಕ್ಷಕ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ತೊರವಿ ಬಳಿ ಭಾನುವಾರ ಸಂಜೆ ಜರುಗಿದೆ.
ಕನ್ನಡಪ್ರಭ ವಾರ್ತೆ ವಿಜಯಪುರ
ಬೈಕ್ ಗೆ ಲಾರಿ ಡಿಕ್ಕಿಯಾಗಿ ಶಿಕ್ಷಕ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ತೊರವಿ ಬಳಿ ಭಾನುವಾರ ಸಂಜೆ ಜರುಗಿದೆ. ಖತಿಜಾಪುರ ಎಚ್.ಪಿ.ಎಸ್ ಸರ್ಕಾರಿ ಶಾಲೆ ಶಿಕ್ಷಕಿ ಅಂಬಿಕಾ ಪೂಜೇರಿ (34) ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರಾಗಿದ್ದ ಅವರ ಪತಿ ಗುರಲಿಂಗ ಹುಣಶ್ಯಾಳ (37) ಮೃತರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ವಿಜಯಪುರ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.