ಸಾರಾಂಶ
ಅಂಬಲಪಾಡಿ ಬಿಲ್ಲವ ಸೇವಾ ಸಂಘ, ಶ್ರೀ ವಿಠೋಬ ಭಜನಾ ಮಂದಿರದ ವತಿಯಿಂದ 79ನೇ ಸ್ವಾತಂತ್ರ್ಯ ದಿನವನ್ನು ಸಂಘದ ವಠಾರದಲ್ಲಿ ಆಚರಿಸಲಾಯಿತು. ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಧ್ವಜಾರೋಹಣ ನೆರವೇರಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಇಲ್ಲಿನ ಅಂಬಲಪಾಡಿ ಬಿಲ್ಲವ ಸೇವಾ ಸಂಘ, ಶ್ರೀ ವಿಠೋಬ ಭಜನಾ ಮಂದಿರದ ವತಿಯಿಂದ 79ನೇ ಸ್ವಾತಂತ್ರ್ಯ ದಿನವನ್ನು ಸಂಘದ ವಠಾರದಲ್ಲಿ ಆಚರಿಸಲಾಯಿತು. ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ಸೇನಾನಿಗಳನ್ನು ನೆನೆದು, ಭಾರತದ ಪ್ರಗತಿಯನ್ನು ವಿಶ್ಲೇಷಿಸಿ ಮಾತನಾಡಿ ಶುಭ ಹಾರೈಸಿದರು. ಈ ಸಂದರ್ಭ ಸಂಘದ ನಿಯೋಜಿತ ಅಧ್ಯಕ್ಷ ಶಿವದಾಸ್ ಪಿ., ಉಪಾಧ್ಯಕ್ಷ ಎ.ಮುದ್ದಣ್ಣ ಪೂಜಾರಿ, ಪ್ರಧಾನ ಕಾರ್ಯದರ್ಶಿ ರಾಜೇಶ್, ಜೊತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ವಿನಯ್ ಕುಮಾರ್, ಆಡಳಿತ ಸಮಿತಿಯ ಸದಸ್ಯರುಗಳಾದ ರಮೇಶ್ ಕೋಟ್ಯಾನ್, ಅವಿನಾಶ್ ಪೂಜಾರಿ, ಭಾಸ್ಕರ ಕೋಟ್ಯಾನ್, ಜನಾರ್ದನ ಪೂಜಾರಿ, ನಿತಿನ್ ಕುಮಾರ್, ಮಹಿಳಾ ಘಟಕದ ಸಂಚಾಲಕಿ ಗೋದಾವರಿ ಎಮ್. ಸುವರ್ಣ, ಸಹ ಸಂಚಾಲಕಿ ದೇವಕಿ ಕೆ. ಕೋಟ್ಯಾನ್, ಪ್ರಮುಖರಾದ ಶಂಕರ ಪೂಜಾರಿ, ಆನಂದ ಕೋಟ್ಯಾನ್, ವಿಜಯಲಕ್ಷ್ಮಿ ಎಸ್. ಕುಮಾರ್, ಕೇಶವ ಜತ್ತನ್, ಮಹೇಶ್ ಕುಮಾರ್ ಯೋಗಿನಿ ಕೆ. ಜತ್ತನ್, ಪ್ರಖ್ಯಾತ್ ಎಸ್. ಕುಮಾರ್, ಅದಿತಿ ಹಾಗೂ ವಿದ್ಯಾರ್ಥಿಗಳು ಇದ್ದರು.