ಹಕ್ಕಿಜ್ವರ: ಸಂತೆ ನಿಷೇಧ ‌ಜಿಲ್ಲಾಧಿಕಾರಿ ವಿವೇಚನೆಗೆ

| Published : Mar 04 2025, 12:35 AM IST

ಹಕ್ಕಿಜ್ವರ: ಸಂತೆ ನಿಷೇಧ ‌ಜಿಲ್ಲಾಧಿಕಾರಿ ವಿವೇಚನೆಗೆ
Share this Article
  • FB
  • TW
  • Linkdin
  • Email

ಸಾರಾಂಶ

ಹಕ್ಕಿ ಜ್ವರವು ಎಚ್5ಎನ್1 ವೈರಸ್ ನಿಂದ ಹರಡುವ ರೋಗವಾಗಿದ್ದು, ಇದು ಟರ್ಕಿ ಕೋಳಿ, ಕೋಳಿ, ಗಿನಿ ಕೋಳಿ, ಬಾತುಕೋಳಿ, ಗೀಜಗ ಮುಂತಾದ ಹಕ್ಕಿಗಳಲ್ಲಿ ಬರುವ ಸಾಂಕ್ರಾಮಿಕ ಖಾಯಿಲೆಯಾಗಿದೆ. ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ. ಕೆಲವೊಮ್ಮೆ ರೋಗಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಗಡಿ ಜಿಲ್ಲೆಗಳಾದ ಚಿಕ್ಕಬಳ್ಳಾಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ನಾಟಿ ಕೋಳಿಗಳಲ್ಲಿ ‌ಹಕ್ಕಿ‌ ಜ್ವರ ಕಂಡು ಬಂದಿರುವ ಹಿನ್ನೆಲೆಯಲ್ಲಿ ಈ ಗಡಿ ಜಿಲ್ಲೆಗಳಲ್ಲಿ ಕೋಳಿ ಹಾಗೂ ಜಾನುವಾರು ಸಂತೆಗಳ ನಿಷೇಧ ‌ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಡಲಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯ ಇಲಾಖೆಯ ಆಯುಕ್ತೆ ಶ್ರೀರೂಪಾ ತಿಳಿಸಿದರು.

ಕೋಳಿಗಳಲ್ಲಿ ಹಕ್ಕಿ ಜ್ವರ ಕಂಡು ಬಂದಿರುವ ತಾಲೂಕಿನ ವರದಹಳ್ಳಿ ಗ್ರಾಮಕ್ಕೆ ಸೋಮವಾರ ಭೇಟಿ ನೀಡಿ, ಅಧಿಕಾರಿಗಳು ‌ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಹಕ್ಕಿಜ್ವರ ಸಾಂಕ್ರಾಮಿಕ:

ಹಕ್ಕಿ ಜ್ವರವು ಎಚ್5ಎನ್1 ವೈರಸ್ ನಿಂದ ಹರಡುವ ರೋಗವಾಗಿದ್ದು, ಇದು ಟರ್ಕಿ ಕೋಳಿ, ಕೋಳಿ, ಗಿನಿ ಕೋಳಿ, ಬಾತುಕೋಳಿ, ಗೀಜಗ ಮುಂತಾದ ಹಕ್ಕಿಗಳಲ್ಲಿ ಬರುವ ಸಾಂಕ್ರಾಮಿಕ ಖಾಯಿಲೆಯಾಗಿದೆ. ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ. ಕೆಲವೊಮ್ಮೆ ರೋಗಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ ಎಂದರು.

ಮನುಷ್ಯರಲ್ಲಿ ರೋಗ ಕಂಡು ಬಂದಿಲ್ಲ

ಇದುವರೆಗೆ ಕೋಳಿಗಳಲ್ಲಿ ಮಾತ್ರ ಜ್ವರ ಕಂಡುಬಂದಿದೆ. ಮನುಷ್ಯರಿಗೆ ಜ್ವರ ಬಂದಿರೋ ಯಾವುದೇ ಪ್ರಕರಣ ದಾಖಲಾಗಿಲ್ಲ. ರೋಗ ಪೀಡಿತ ಕೋಳಿ ಅಥವಾ ಹಕ್ಕಿಯ ಮಾಂಸವನ್ನು ಸರಿಯಾಗಿ ಬೇಯಿಸದೆ ತಿನ್ನುವುದರಿಂದ ಹಾಗೂ ಸೋಂಕಿರುವ ಕೋಳಿ ಅಥವಾ ಹಕ್ಕಿಯ ಹಸಿ ಮೊಟ್ಟೆಗಳನ್ನು ಸೇವಿಸುವುದರಿಂದ ಹಾಗೂ ಕೋಳಿಗಳ ಹಿಕ್ಕೆಗಳು,ತ್ಯಾಜ್ಯಗಳು ಮನುಷ್ಯರು ಕುಡಿಯುವ ನೀರಿನೊಂದಿಗೆ ಬೆರೆತು ಕಲುಷಿತಗೊಂಡಾಗ ಈ ಖಾಯಿಲೆ ಹರಡುತ್ತದೆ ಎಂದರು.

ಈ ವೇಳೆ ಪಶುಪಾಲನಾ ಮತ್ತು ಪಶುವೈದ್ಯ ಇಲಾಖೆಯ ಡಾ.ರಂಗಪ್ಪ, ಮತ್ತು ಸಿಬ್ಬಂಧಿ ಇದ್ದರು.

.