ಜನನ-ಮರಣ ಮಾಹಿತಿ ನಿಖರವಾಗಿರಲಿ: ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ

| Published : Jul 10 2025, 12:49 AM IST

ಜನನ-ಮರಣ ಮಾಹಿತಿ ನಿಖರವಾಗಿರಲಿ: ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ
Share this Article
  • FB
  • TW
  • Linkdin
  • Email

ಸಾರಾಂಶ

ಬದುಕಿರುವ ಪ್ರತಿಯೊಬ್ಬ ವ್ಯಕ್ತಿಗೆ ಜನನ ಪ್ರಮಾಣ ಪತ್ರ ಅಗತ್ಯವಾಗಿದೆ. ಮರಣದ ನಂತರ ಕುಟುಂಬದವರಿಗೆ ಮರಣ ಪ್ರಮಾಣಪತ್ರ ಉಪಯುಕ್ತ ದಾಖಲೆಯಾಗಿದ್ದು, ಈ ಪ್ರಮಾಣ ಪತ್ರಗಳು ಜನರಿಗೆ ಸಕಾಲದಲ್ಲಿ ಸಿಗುವಂತಾಗಬೇಕು.

ಕೊಪ್ಪಳ:

ಜನನ-ಮರಣ ಮಾಹಿತಿ ನಿಖರವಾಗಿ ಸಂಗ್ರಹಿಸುವ ಜತೆಗೆ ತಂತ್ರಾಶದಲ್ಲಿ ನೋಂದಣಿಯಾಗುವಂತೆ ನೋಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಜನನ-ಮರಣ ನೋಂದಣಿ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬದುಕಿರುವ ಪ್ರತಿಯೊಬ್ಬ ವ್ಯಕ್ತಿಗೆ ಜನನ ಪ್ರಮಾಣ ಪತ್ರ ಅಗತ್ಯವಾಗಿದೆ. ಮರಣದ ನಂತರ ಕುಟುಂಬದವರಿಗೆ ಮರಣ ಪ್ರಮಾಣಪತ್ರ ಉಪಯುಕ್ತ ದಾಖಲೆಯಾಗಿದ್ದು, ಈ ಪ್ರಮಾಣ ಪತ್ರಗಳು ಜನರಿಗೆ ಸಕಾಲದಲ್ಲಿ ಸಿಗುವಂತಾಗಬೇಕು. ಜನನ ಮತ್ತು ಮರಣ ನೋಂದಣಿಯನ್ನು ಗ್ರಾಮ ಲೆಕ್ಕಿಗರು, ವೈದ್ಯಾಧಿಕಾರಿಗಳು ಹಾಗೂ ನಗರಸಭೆ ಪೌರಾಯುಕ್ತರು ಸರಿಯಾಗಿ ನಿರ್ವಹಿಸಬೇಕು. ನೋಂದಣಿ ವೇಳೆ ಸೂಕ್ತ ಪರಿಶೀಲನೆ ಕೈಗೊಂಡು ಅದರ ವರದಿ ಸಲ್ಲಿಸಬೇಕು. ವಿಳಂಬ ನೋಂದಣಿ ಘಟನೆ ತಡೆಯಬೇಕು. ಯಾವುದೇ ದಾಖಲಾತಿ ಬಾಕಿ ಉಳಿಯದಂತೆ ಶೇ.100ರಷ್ಟು ನೋಂದಣಿಯಾಗುವಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಸಾಂಖ್ಯಿಕ ಅಧಿಕಾರಿ ಸುಧಾಕರ ಅ. ಮಾನೆ ಮಾತನಾಡಿ, ಜನನ-ಮರಣ ಮತ್ತು ನಿರ್ಜೀವ ಜನನಗಳ ನೋಂದಣಿ ಕಡ್ಡಾಯವಾಗಿದೆ. 21 ದಿನದೊಳಗೆ ಯಾವುದೇ ಶುಲ್ಕವಿಲ್ಲದೆ ನೋಂದಣಿ ಮಾಡಲಾಗುವುದು. ಹೆಚ್ಚುವರಿ ಪ್ರಮಾಣ ಪತ್ರ ಶುಲ್ಕವು ₹ 50 ಇದ್ದು ವಿಳಂಬ ನೋಂದಣಿಗೆ 21ರಿಂದ 30 ದಿನದ ವರೆಗೆ ₹ 20, 30 ದಿನಗಳ ನಂತರ ಒಂದು ವರ್ಷದ ವರೆಗೆ ₹ 50 ಶುಲ್ಕವಿದೆ. ಜಿಲ್ಲೆಯಲ್ಲಿ 731 ನೋಂದಣಿ ಘಟಕಗಳಿವೆ ಎಂದು ಹೇಳಿದರು.

ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆ ಇಇ ಬಸವರಾಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟಪ್ಪನವರ, ಸಹಾಯಕ ಸಾಂಖ್ಯಿಕ ಅಧಿಕಾರಿಗಳಾದ ಕಾಮಾಕ್ಷಿ ಹಾಗೂ ಪ್ರವೀಣ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಯ ಸಮಾಲೋಚಕ ದತ್ತು ಪ್ರಸಾದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.