ಸಾರಾಂಶ
ಸಚಿವ ಈಶ್ವರ ಖಂಡ್ರೆ ಸಮಾರಂಭ ಉದ್ಘಾಟನೆ
ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರುರಂಭಾಪುರಿ ಪೀಠದ 120ನೇ ಜಗದ್ಗುರುಗಳಾಗಿ ಶ್ರೀಪೀಠ ಅಲಂಕರಿಸಿದ್ದ ಲಿಂ. ಶ್ರೀ ರಂಭಾಪುರಿ ಪ್ರಸನ್ನ ರೇಣುಕ ವೀರ ರುದ್ರ ಮುನಿದೇವ ಶಿವಾಚಾರ್ಯ ಭಗವತ್ಪಾದರ ಜನ್ಮ ಶತಮಾನೋತ್ಸವವನ್ನು ಡಿ.15ರ ಭಾನುವಾರ ಆಯೋಜಿಸ ಲಾಗಿದೆ ಎಂದು ಶ್ರೀಪೀಠದ ಪ್ರಕಟಣೆ ತಿಳಿಸಿದೆ.ರಂಭಾಪುರಿ ಪೀಠದ ಶ್ರೀ ರುದ್ರಮುನೀಶ್ವರ ಸಮುದಾಯ ಭವನದಲ್ಲಿ ನಡೆಯುವ ಸಮಾರಂಭದ ಸಾನ್ನಿಧ್ಯವನ್ನು ಬಾಳೆ ಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹಾಗೂ ಶ್ರೀ ಕೇದಾರ ಭೀಮಾಶಂಕರಲಿಂಗ ಜಗದ್ಗುರು ವಹಿಸುವರು. ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಸಮಾರಂಭ ಉದ್ಘಾಟಿಸಲಿದ್ದು, ಧರ್ಮ ಚೇತನ ಕೃತಿಯನ್ನು ಮಾಜಿ ಸಂಸದ ಗೌಡಗಾಂವ ಹಿರೇಮಠದ ಡಾ.ಜಯಸಿದ್ಧೇಶ್ವರ ಶಿವಾಚಾರ್ಯರು, ಬಾಳ ಹೊಂಗಿರಣ ಕೃತಿಯನ್ನು ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯರು ಹಾಗೂ ರಂಭಾಪುರಿ ಬೆಳಗು ವಿಶೇಷಾಂಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಬಿಡುಗಡೆಗೊಳಿಸುವರು. ಸಿಯುಪಿಎ ಮತ್ತು ಪಿಇಟಿಎ ಇಂಡಿಯಾ ಸಂಸ್ಥೆ ದಾನ ನೀಡಿದ ಯಾಂತ್ರಿಕ ಆನೆ ಸಮರ್ಪಣೆ ಈ ಸಂದರ್ಭದಲ್ಲಿ ನಡೆಯಲಿದೆ.ಸಮಾರಂಭದಲ್ಲಿ ಶಾಸಕ ಟಿ.ಡಿ.ರಾಜೇಗೌಡ, ಮಾಜಿ ಸಚಿವ ಡಿ.ಎನ್.ಜೀವರಾಜ್, ಬೆಂಗಳೂರಿನ ಶ್ರೀ ಜಗದ್ಗುರು ರೇಣುಕಾಚಾರ್ಯ ವಿದ್ಯಾ ಸಂಸ್ಥೆ ಅಧ್ಯಕ್ಷ ಯು.ಎಂ.ಬಸವರಾಜ್ ಭಾಗವಹಿಸುವರು. ಅ.ಭಾ.ವೀ. ಶಿವಾಚಾರ್ಯ ಸಂಸ್ಥೆ ಗೌರವಾಧ್ಯಕ್ಷ ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿ ನೇತೃತ್ವ ವಹಿಸುವರು. ಬಂಕಾಪುರ ಅರಳೆಲೆ ಹಿರೇಮಠದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿ ನುಡಿ ನಮನ ಸಲ್ಲಿಸುವರು.ಇದೇ ಸಂದರ್ಭದಲ್ಲಿ ರಂಭಾಪುರಿ ಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್. ಬಾಳನಗೌಡ ಅವರಿಗೆ ಜನ್ಮ ಅಮೃತ ಮಹೋತ್ಸವ ಅಂಗವಾಗಿ ಗೌರವ ಗುರುರಕ್ಷೆ ನಡೆಯಲಿದೆ. ಮಳಲಿ ಸಂಸ್ಥಾನ ಮಠದ ಡಾ.ನಾಗಭೂಷಣ ಶಿವಾಚಾರ್ಯ ಸ್ವಾಮಿ, ಶಿವಮೊಗ್ಗ ಶ್ರೀ ಜಗದ್ಗುರು ಪಂಚಾಚಾರ್ಯ ಐಟಿಐ ಸಂಸ್ಥಾಪಕರಾದ ವಿಘ್ನೇಶ್ವರಯ್ಯ ಸೋಲಾಪುರ, ಇಂದಿರಾ, ಕೂಡ್ಲಿಗೆರೆಯ ಜಲಜಾಕ್ಷಮ್ಮ, ಸವಣೂರಿನ ಡಾ. ಗುರುಪಾದಯ್ಯ ವೀ. ಸಾಲಿಮಠ ಅವರಿಗೆ ವಿಶೇಷ ಗುರುರಕ್ಷೆಯನ್ನು ಶ್ರೀ ರಂಭಾಪುರಿ ಜಗದ್ಗುರು ಅನುಗ್ರಹಿಸುವರು. ಅಂದು ಬೆಳಿಗ್ಗೆ ಜಗದ್ಗುರು ರೇಣುಕಾಚಾರ್ಯರು, ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ, ಶ್ರೀ ಚೌಡೇಶ್ವರಿ ಹಾಗೂ ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ರುದ್ರಾಭಿಷೇಕ-ಅಷ್ಟೋತ್ತರ ಮಹಾಮಂಗಲ ನಡೆಯಲಿದೆ. ಲಿಂ.ಶ್ರೀಮದ್ ರಂಭಾಪುರಿ ವೀರ ರುದ್ರಮುನಿದೇವ ಜಗದ್ಗುರುಗಳ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಪುಷ್ಪಾಲಂಕಾರ ಭಕ್ತಿ ಸಮರ್ಪಣೆ ನಡೆಯುವುದು ಎಂದು ತಿಳಿಸಲಾಗಿದೆ.೧೦ಬಿಹೆಚ್‌ಆರ್ ೧: ಲಿಂ.ಶ್ರೀ ವೀರರುದ್ರಮುನಿ ಶಿವಾಚಾರ್ಯರು