ಮಾಜಿ ಶಾಸಕರಾದ ಪ್ರೀತಂ ಜೆ.ಗೌಡ ಅವರ ೪೫ನೇ ವರ್ಷದ ಹುಟ್ಟುಹಬ್ಬ ಆಚರಣೆಯನ್ನು ಅದ್ದೂರಿಯಾಗಿ ನೆರವೇರಿಸಲಾಯಿತು. ತೆರೆದ ವಾಹನದಲ್ಲಿ ಮೆರವಣಿಗೆ ಜೊತೆಗೆ ಬೃಹತ್ ಗಾತ್ರದ ಸೇಬಿನ ಹಾರ ಹಾಕುವ ಮೂಲಕ ತಮ್ಮ ನೆಚ್ಚಿನ ನಾಯಕರಿಗೆ ಹುಟ್ಟು ಹಬ್ಬದ ಶುಭಾಶಯಗಳು ಕೋರಿದರು. ಕೇಕ್ ಕತ್ತರಿಸಿ ಎಲ್ಲರಿಗೂ ಸಿಹಿತಿನಿಸಿದ ಪ್ರೀತಂ ಜೆ ಗೌಡರು ನಿಮ್ಮ ಪ್ರೀತಿ ಅಭಿಮಾನ ಇದೇ ರೀತಿ ನನ್ನ ಮೇಲೆ ಇರಲಿ ದೇವರ ಆಶೀರ್ವಾದ ಇದ್ದರೆ ಮುಂದಿನ ದಿನಗಳಲ್ಲಿ ರಾಜಕೀಯ ಭವಿಷ್ಯದಲ್ಲಿ ಉತ್ತಮ ಸ್ಥಾನ ಸಿಗಲಿದೆ ಎಂದರು. ನಂತರ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಪ್ರೀತಂ ಜೆ.ಗೌಡ ಅವರ ೪೫ನೇ ವರ್ಷದ ಹುಟ್ಟುಹಬ್ಬ ಆಚರಣೆಯನ್ನು ಅದ್ದೂರಿಯಾಗಿ ನೆರವೇರಿಸಲಾಯಿತು.ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಸಿ. ಆರ್. ಚಿದಾನಂದ್ ಅವರ ನೇತೃತ್ವದಲ್ಲಿ ಪಟ್ಟಣದ ೪೦ ಅಡಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ನಂತರ ಪಟ್ಟಣಕ್ಕೆ ಆಗಮಿಸಿದ ಪ್ರೀತಂ ಜೆ ಗೌಡರನ್ನು ಬಿಜೆಪಿ ಕಾರ್ಯಕರ್ತರು ಹಾಗೂ ಚಿದಾನಂದ ಅಭಿಮಾನಿ ಬಳಗದ ಕಾರ್ಯಕರ್ತರು ತೆರೆದ ವಾಹನದಲ್ಲಿ ಮೆರವಣಿಗೆ ಜೊತೆಗೆ ಬೃಹತ್ ಗಾತ್ರದ ಸೇಬಿನ ಹಾರ ಹಾಕುವ ಮೂಲಕ ತಮ್ಮ ನೆಚ್ಚಿನ ನಾಯಕರಿಗೆ ಹುಟ್ಟು ಹಬ್ಬದ ಶುಭಾಶಯಗಳು ಕೋರಿದರು. ಕೇಕ್ ಕತ್ತರಿಸಿ ಎಲ್ಲರಿಗೂ ಸಿಹಿತಿನಿಸಿದ ಪ್ರೀತಂ ಜೆ ಗೌಡರು ನಿಮ್ಮ ಪ್ರೀತಿ ಅಭಿಮಾನ ಇದೇ ರೀತಿ ನನ್ನ ಮೇಲೆ ಇರಲಿ ದೇವರ ಆಶೀರ್ವಾದ ಇದ್ದರೆ ಮುಂದಿನ ದಿನಗಳಲ್ಲಿ ರಾಜಕೀಯ ಭವಿಷ್ಯದಲ್ಲಿ ಉತ್ತಮ ಸ್ಥಾನ ಸಿಗಲಿದೆ ಎಂದರು. ನಂತರ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡ ಸಿ. ಆರ್. ಚಿದಾನಂದ್, ಟಿವಿಎಸ್ ಶಶಿಧರ್, ಬಿಜೆಪಿ ಕುಮಾರ್, ಪುರಸಭಾ ಮಾಜಿ ಅಧ್ಯಕ್ಷ ನಾಗರಾಜ್, ರೂಪೇಶ್, ನಂಜುಂಡಮೈಮ್, ಗುಂಡಶೆಟ್ಟಿಹಳ್ಳಿ ಮಂಜುನಾಥ್, ಕೆರೆ ಬೀದಿ ಜಗದೀಶ್, ಆನಂದ್, ಧರಣೇಶ್, ನಾಗೇಶ್ ಎಂ, ಜಯರಾಮ್ ಮಾರೇನಹಳ್ಳಿ, ಶ್ರೀಹರಿಗೌಡ ಮತ್ತಿತರಿದ್ದರು.