ಸಾರಾಂಶ
ನೂರಾರು ಮುಖಂಡರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ನಂತರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿದರು.
ಕನ್ನಡಪ್ರಭ ವಾರ್ತೆ ಮಳವಳ್ಳಿ
ಶಾಸಕ ಪಿ.ಎಂ.ನರೇಂದ್ರಸ್ವಾಮಿ ಜನ್ಮದಿನಾಚರಣೆ ಅಂಗವಾಗಿ ಶನಿವಾರ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟ್ಟಣದ ಹೊರವಲಯದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.ನೂರಾರು ಮುಖಂಡರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ನಂತರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ ಮಾತನಾಡಿ, ತೀವ್ರ ಬರಗಾಲ ಹಿನ್ನೆಲೆಯಲ್ಲಿ ಶಾಸಕರ ಸೂಚನೆಯಂತೆ ಜನ್ಮದಿನವನ್ನು ಸರಳವಾಗಿ ಆಚರಣೆ ಮಾಡಲಾಗಿದೆ. ಶಾಲೆಗಳು ಆರಂಭವಾದ ನಂತರ ಶಾಲಾ ಮಕ್ಕಳಿಗೆ ನೋಟ್ ಬುಕ್ ಸೇರಿ ಶೈಕ್ಷಣಿಕ ಸಾಮಾಗ್ರಿಗಳ ವಿತರಣೆ ಮಾಡಲಾಗುವುದು. ಮುಂದಿನ ದಿನಗಳಲ್ಲಿ ರಾಜಕೀಯವಾಗಿ ಅವರು ಉನ್ನತ ಸ್ಥಾನಕ್ಕೆ ಏರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು ಹಾಗೂ ಬ್ಲಾಕ್ ಕಾಂಗ್ರೆಸ್ ನಿಟಕಪೂರ್ವ ಅಧ್ಯಕ್ಷ ಕೆ.ಜೆ.ದೇವರಾಜು ಮಾತನಾಡಿದರು.
ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ಎಂ.ಬಿ.ಮಲ್ಲಯ್ಯ, ಶಿವಮಾದೇಗೌಡ, ಪುರಸಭೆ ಸದಸ್ಯರಾದ ಎಂ.ಎನ್.ಶಿವಸ್ವಾಮಿ, ಎಂ.ಆರ್.ರಾಜಶೇಖರ್, ಪ್ರಮೀಳಾ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ಕೆ.ಕೃಷ್ಣಮೂರ್ತಿ, ಶಿವಮೂರ್ತಿ, ಜಿ.ಪಂ.ಮಾಜಿ ಸದಸ್ಯ ಆರ್.ಎನ್.ವಿಶ್ವಾಸ್, ತಾಪಂ ಮಾಜಿ ಅಧ್ಯಕ್ಷ ಕುಂದೂರು ಪ್ರಕಾಶ್, ಮಾಜಿ ಉಪಾಧ್ಯಕ್ಷ ಸಿ.ಮಾಧು, ಎಪಿಎಂಸಿ ಮಾಜಿ ಅಧ್ಯಕ್ಷ ಮುಟ್ಟನಹಳ್ಳಿ ಅಂಬರೀಶ್, ಮಾಜಿ ಸದಸ್ಯ ದಿಲೀಪ್ ಕುಮಾರ್(ವಿಶ್ವ), ಟಿಎಪಿಸಿಎಂಎಸ್ ನಿರ್ದೇಶಕರಾದ ಕೆ.ಎಸ್.ದ್ಯಾಪೇಗೌಡ, ಎಂ.ಲಿಂಗರಾಜು, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಪ್ರಸನ್ನ, ಮುಖಂಡರಾದ ರೋಹಿತ್ ಗೌಡ(ದೀಪು), ವಕೀಲ ಜಗದೀಶ್, ಜಯರಾಜು, ಕೃಷ್ಣೇಗೌಡ, ಸಾಹಳ್ಳಿ ಶಶಿ, ಶಿವಕುಮಾರ್, ಪ್ರಭುಲಿಂಗು, ಮುತ್ತುರಾಜು, ಪ್ರಸಾದ್, ದೇವರಾಜು, ಚೇತನ್ ನಾಯಕ್, ರಮೇಶ್, ಗಂಗರಾಜೇ ಅರಸು, ರವೀಂದ್ರ ಕುಮಾರ್, ಕೃಷ್ಣ, ವೇದಮೂರ್ತಿ, ಬಸವರಾಜು, ರಮೇಶ್, ಚೌಡಯ್ಯ, ಅಖಿಲ್, ಶಾಂತರಾಜು ಇದ್ದರು.