ಸಾರಾಂಶ
ಫಲಾನುಭವಿಗಳ ಸಂಪರ್ಕ ಅಭಿಯಾನದ ಸಭೆ ಉದ್ಘಾಟಿಸಿದ ಮಾಜಿ ಸಚಿವ
ಕನ್ನಡಪ್ರಭ ವಾರ್ತೆ ಹಿರೇಕೆರೂರುಭಾರತ ದೇಶವನ್ನು ಉನ್ನತ ಮಟಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಕೊಂಡೊಯ್ಯುತ್ತಿದ್ದಾರೆ. ಆದ್ದರಿಂದ ಪ್ರತಿಯೊಂದು ಬೂತ್‌ಗಳ ಮನೆ ಮನೆಗೆ ಬಿಜೆಪಿ ಕಾರ್ಯಕರ್ತರು ಭೇಟಿ ನಿಡಿ ಚುನಾವಣೆ ತಂತ್ರ ರೂಪಿಸಬೇಕು. ಬೂತ್ ಮಟ್ಟದ ಕಾರ್ಯಕರ್ತರು ಪಕ್ಷ ನೀಡುವ ಎಲ್ಲ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಮೋದಿಯವರಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ಪಟ್ಟಣದ ತಮ್ಮ ನಿವಾಸದ ಸಭಾಂಗಣದಲ್ಲಿ ಗುರುವಾರ ಬಿಜೆಪಿ ಹಿರೇಕೆರೂರು ಮಂಡಲದ ವತಿಯಿಂದ ಆಯೋಜಿಸಿದ್ದ ಫಲಾನುಭವಿಗಳ ಸಂಪರ್ಕ ಅಭಿಯಾನದ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎರಡು ಅವಧಿಯಲ್ಲಿ ನೀಡಿದ ಜನಪರ ಯೋಜನೆಗಳು ಹಾಗೂ ಸಾಧನೆಗಳನ್ನು ಜನತೆಗೆ ತಿಳಿಸುವ ಕಾರ್ಯ ಮಾಡಬೇಕು. ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಪಕ್ಷ ಸಂಘಟನೆಯಲ್ಲಿ ಬೂತ್ ಮಟ್ಟದ ಪದಾಧಿಕಾರಿಗಳ ಜವಾಬ್ದಾರಿ ಅತೀ ಮುಖ್ಯವಾಗಿದ್ದು, ಪಕ್ಷ ಸೂಚಿಸುವ ಎಲ್ಲ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಿ ಪಕ್ಷ ಸಂಘಟನೆಗೆ ಒತ್ತು ನೀಡಬೇಕು. ಈ ಮೂಲಕ ಬಿಜೆಪಿಯನ್ನು ಬೂತ್ ಮಟ್ಟದಲ್ಲಿ ಮತ್ತಷ್ಟು ಬಲಿಷ್ಟಗೊಳಿಸಿ ಪಕ್ಷ ಬಲವರ್ಧನೆಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಮಾತನಾಡಿ, ದೇಶ ರಕ್ಷಣೆ ಹಾಗೂ ಅಭಿವೃದ್ಧಿ ಮಾಡುವ ನರೇಂದ್ರ ಮೋದಿ ಅವರನ್ನು ಮೊಗದೊಮ್ಮೆ ಪ್ರಧಾನ ಮಂತ್ರಿ ಮಾಡಬೇಕು. ಈ ನಿಟ್ಟಿನಲ್ಲಿ ಪಕ್ಷ ಸಂಘಟನೆ, ಕೇಂದ್ರ ಸರ್ಕಾರದ ಸಾಧನೆಗಳನ್ನು ಜನತೆಗೆ ಮನವರಿಕೆ ಮಾಡುವ ಕಾರ್ಯ ಮಾಡಬೇಕು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಸಾಮಾಜಿಕ, ಆರ್ಥಿಕ, ಮೂಲಸೌಕರ್ಯ, ರಕ್ಷಣೆ, ವಿದೇಶಾಂಗ ಕ್ಷೇತ್ರಗಳಲ್ಲಿ ಅನೇಕ ರೀತಿಯ ಬದಲಾವಣೆ, ಯೋಜನೆಗಳನ್ನು ತರುವ ಮೂಲಕ ಭಾರತವನ್ನು ಅಭಿವೃದ್ಧಿ ಪಥದತ್ತ ಸಾಗಿಸಿದ್ದಾರೆ. ಪಕ್ಷ ಸೂಚಿಸುವ ಎಲ್ಲ ಕೆಲಸ ಕಾರ್ಯಗಳನ್ನು ಚಾಚು ತಪ್ಪದೇ ಮಾಡುವ ಮೂಲಕ ಬಿಜೆಪಿಯನ್ನು ಮತ್ತಷ್ಟು ಗಟ್ಟಿಗೊಳಿಸಬೇಕು ಎಂದರು.ಹಾವೇರಿ ಮಹಿಳಾ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷೆ ಸೃಷ್ಠಿ ಪಾಟೀಲ, ಜಿಲ್ಲಾ ಸಂಚಾಲಕ ಶಿವರಾಜ ಸಜ್ಜನ್, ಸಹಾ ಸಂಚಾಲಕ ಶಿವಲಿಂಗಣ್ಣ ತಲುರು, ಬಿಜೆಪಿ ಮಂಡಲ ಅಧ್ಯಕ್ಷ ಶಿವಕುಮಾರ ತಿಪ್ಪಶೆಟ್ಟಿ, ಕೆಸಿಸಿ ಬ್ಯಾಂಕ್ ನಿರ್ದೇಶಕ ಲಿಂಗರಾಜ ಚಪ್ಪರದಳ್ಳಿ, ಮುಖಂಡರಾದ ಎನ್.ಎಂ. ಈಟೇರ್, ಎಸ್.ಎಸ್. ಪಾಟೀಲ, ಆರ್.ಎನ್. ಗಂಗೋಳ, ರವಿಶಂಕರ ಬಾಳಿಕಾಯಿ, ಆನಂದಪ್ಪ ಹಾದಿಮನಿ, ಜೆ.ಪಿ. ಪ್ರಕಾಶ, ಗೀತಾ ದಂಡಗೀಹಳ್ಳಿ, ಮಂಜುಳಾ ಬಾಳಿಕಾಯಿ, ಮನೋಹರ್ ವಡ್ಡಿನಕ್ಕಟ್ಟಿ, ದೇವರಾಜ ನಾಗಣ್ಣನವರ, ದುರಗೇಶ ತಿರಕಪ್ಪನವರ್, ಬಸಮ್ಮ ಅಬಲೂರ ಸೇರಿದಂತೆ ಬೂತ್ ಸಂಚಾಲಕರು, ಶಕ್ತಿಕೇಂದ್ರದ ಪ್ರಮುಖರು, ಮಹಾಶಕ್ತಿ ಕೇಂದ್ರದ ಪ್ರಮುಖರು, ಮೋರ್ಚಾಗಳ ಅದ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಮಂಡಲ ಹಾಗೂ ಬೂತ್ ಮಟ್ಟದ ಪದಾಧಿಕಾರಿಗಳು ಇದ್ದರು.