ಸಾರಾಂಶ
ಚಿಕ್ಕಮಗಳೂರು: ಕಾಡು ಕೋಣಗಳ ಹಿಂಡು ಕಾಫಿ ತೋಟದೊಳಗೆ ನುಗ್ಗಿ ಅಪಾರ ಹಾನಿ ಉಂಟು ಮಾಡಿರುವ ಘಟನೆ ಕಳಸ ತಾಲೂಕಿನ ತೋಟದೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗೊರಸುಡಿಗೆ ಗ್ರಾಮದಲ್ಲಿ ನಡೆದಿದೆ.
ಚಿಕ್ಕಮಗಳೂರು: ಕಾಡು ಕೋಣಗಳ ಹಿಂಡು ಕಾಫಿ ತೋಟದೊಳಗೆ ನುಗ್ಗಿ ಅಪಾರ ಹಾನಿ ಉಂಟು ಮಾಡಿರುವ ಘಟನೆ ಕಳಸ ತಾಲೂಕಿನ ತೋಟದೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗೊರಸುಡಿಗೆ ಗ್ರಾಮದಲ್ಲಿ ನಡೆದಿದೆ.
ಕಾಡು ಕೋಣಗಳ ಹಾವಳಿ ದಿನೇ ದಿನೇ ಈ ಭಾಗದಲ್ಲಿ ಹೆಚ್ಚಾಗುತ್ತಿದೆ. ಇದರಿಂದ ಕಾಫಿ, ಅಡಿಕೆ ಹಾಗೂ ಬಾಳೆ ತೋಟ ಗಳಿಗೆ ಹಾನಿಯಾಗುತ್ತಿದೆ. ತೋಟಗಳಲ್ಲಿ ಕೆಲಸ ಮಾಡಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ. ಪ್ರತಿ ದಿನ ಈ ರೀತಿಯ ದೃಶ್ಯ ತೋಟಗಳಲ್ಲಿ ಕಂಡು ಬರುತ್ತಿದ್ದು, ಅರಣ್ಯ ಇಲಾಖೆಯವರು ಕೂಡಲೇ ಕಾಡು ಕೋಣಗಳನ್ನು ಹಿಮ್ಮೆಟ್ಟಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.