ಸಾರಾಂಶ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆ ಖಂಡಿಸಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೋಮವಾರ ಬಿಸಿರೋಡಿನಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.
ಕನ್ನಡಪ್ರಭ ವಾರ್ತೆ ಬಂಟ್ವಾಳ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ಸಂಚು ರೂಪಿಸಿದೆ. ಬಿಜೆಪಿಗರು ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ, ಕಾಂಗ್ರೆಸ್ ಸರಕಾರವನ್ನು ಅಸ್ಥಿರ ಮಾಡುವುದೇ ಬಿಜೆಪಿಯ ಉದ್ದೇಶ ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆ ಖಂಡಿಸಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೋಮವಾರ ಬಿಸಿರೋಡಿನಲ್ಲಿ ನಡೆದ ಬೃಹತ್ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಬಿಜೆಪಿ ರಾಜ್ಯಪಾಲರ ಮೂಲಕ ಸರ್ಕಾರ ಅತಂತ್ರಗೊಳಿಸಲು ಮುಂದಾಗಿದೆ ಎಂದು ಆರೋಪಿಸಿದ ಅವರು, ಬಿಜೆಪಿ ಪಾದಯಾತ್ರೆ ಹೆಚ್ಚು ಪರಿಣಾಮ ಬೀರಿಲ್ಲ, ಮೈಸೂರು ಪಾದಯಾತ್ರೆ ಪೂರ್ವನಿಯೋಜಿತ ಕೃತ್ಯವಾಗಿದೆ ಎಂದರು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ ರಾಜಭವನ ಬಿಜೆಪಿ ಕಚೇರಿಯಾಗಿದೆ ಎಂದು ಆರೋಪಿಸಿದರು.
ಕೈಕಂಬ ಪೊಳಲಿ ದ್ವಾರದಿಂದ ಬಿ.ಸಿ.ರೋಡಿನವರೆಗೆ ಪಾದಯಾತ್ರೆ ಮೂಲಕ ಆಗಮಿಸಿದ ಪ್ರತಿಭಟನಕಾರರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟಯರ್ ಹೊತ್ತಿಸಿ ಆಕ್ರೋಶ ವ್ಯಕ್ತಪಡಿಸಿದರುಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್, ಚಂದ್ರಶೇಖರ ಭಂಡಾರಿ, ಪಕ್ಷದ ಪ್ರಮುಖರಾದ ಜಿ.ಎ. ಬಾವಾ, ಅಶ್ವನಿ ಕುಮಾರ್ ರೈ, ಚಂದ್ರಪ್ರಕಾಶ್ ಶೆಟ್ಟಿ, ಪಿಯೂಸ್ ಎಲ್. ರೋಡ್ರಿಗಸ್, ಪದ್ಮಶೇಖರ್ ಜೈನ್, ಬೇಬಿ ಕುಂದರ್, ಮಾಯಿಲಪ್ಪ ಸಾಲ್ಯಾನ್, ದೇವಪ್ಪ ಕುಲಾಲ್, ಪಂಜಿಕಲ್ಲು, ಕೆ. ಸಂಜೀವ ಪೂಜಾರಿ, ಮಲ್ಲಿಕಾ ಶೆಟ್ಟಿ, ಜಯಂತಿ ವಿ. ಪೂಜಾರಿ,
ಲವಿನಾ ವಿಲ್ಮಾ ಮೋರಸ್, ಐಡಾ ಸುರೇಶ್, ಧನಲಕ್ಷ್ಮೀ, ಮಧುಸೂದನ್ ಶೆಣೈ, ವೆಂಕಪ್ಪ ಪೂಜಾರಿ, ಮನೋಹರ ನೇರಂಬೋಳು, ಅಬ್ಬಾಸ್ ಅಲಿ, ಚಿತ್ತರಂಜನ್ ಶೆಟ್ಟಿ,ಸುಭಾಶ್ಚಂದ್ರ ಶೆಟ್ಟಿ, ಸುದರ್ಶನ್ ಜೈನ್, ಮಹಮ್ಮದ್ ಶರೀಫ್, ಜೆಸಿಂತ ಡಿಸೋಜಾ,
ಡಾ. ರಘು, ಸದಾಶಿವ ಬಂಗೇರ, ಜೋಸ್ಪಿನ್ ಡಿಸೋಜಾ, ನಾರಾಯಣ ನಾಯ್ಕ್ ಮತ್ತಿತರರು ಹಾಜರಿದ್ದರು.