ಕಾಂಗ್ರೆಸ್‌, ಬಿಜೆಪಿಗರ ಮಧ್ಯೆ ಘರ್ಷಣೆ

| Published : May 04 2024, 12:31 AM IST

ಸಾರಾಂಶ

ಕಲಬುರಗಿ ಜಿಲ್ಲೆ ಹುಣಸಗಿ ತಾಲೂಕಿನ ಕೊಡೇಕಲ್ ಹೋಬಳಿಯ ರಾಯನಪಾಳ್ಯ ಗ್ರಾಮದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಘರ್ಷಣೆ ನಡೆದಿದ್ದು, ಎರಡೂ ಪಕ್ಷಗಳ ಕಾರ್ಯಕರ್ತರಿಗೆ ಗಾಯಗಳಾಗಿವೆ.

- ಹುಣಸಗಿಯಲ್ಲಿ ಕಲ್ಲು ತೂರಾಟಕನ್ನಡಪ್ರಭ ವಾರ್ತೆ ಹುಣಸಗಿ

ಕಲಬುರಗಿ ಜಿಲ್ಲೆ ಹುಣಸಗಿ ತಾಲೂಕಿನ ಕೊಡೇಕಲ್ ಹೋಬಳಿಯ ರಾಯನಪಾಳ್ಯ ಗ್ರಾಮದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಘರ್ಷಣೆ ನಡೆದಿದ್ದು, ಎರಡೂ ಪಕ್ಷಗಳ ಕಾರ್ಯಕರ್ತರಿಗೆ ಗಾಯಗಳಾಗಿವೆ.

ಮತಯಾಚನೆಗೆ ಕೆಲವರು ಅಡ್ಡಿ ಪಡಿಸಿದ್ದರಿಂದ ಚಕಮಕಿ ನಡೆದು, ಪರಸ್ಪರ ಕಲ್ಲು ತೂರಾಟ ನಡೆಯಿತು. ಈ ವೇಳೆ, ಕೆಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸುರಪುರ, ಹುಣಸಗಿ ಹಾಗೂ ರಾಜನಕೋಳೂರ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಕುರಿತು ಕೆಂಭಾವಿ ಪೊಲೀಸ್‌ ಠಾಣೆಯಲ್ಲಿ ದೂರು, ಪ್ರತಿ ದೂರು ದಾಖಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ.

ರಾಯನಪಾಳ್ಯದಲ್ಲಿ ಪೊಲೀಸ್‌ ಬಂದೋಬಸ್ತ್‌ ಹುಣಸಗಿ: ಸುರಪುರ ಮತಕ್ಷೇತ್ರದ ರಾಯನಪಾಳ್ಯ ಗ್ರಾಮದಲ್ಲಿ ಗುರುವಾರ ರಾತ್ರಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಪರಸ್ಪರ ಕಲ್ಲು ತೂರಾಟವಾದ ಘಟನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಪೊಲೀಸ್‌ ಬಂದೋಬಸ್ತ್‌ ಹಾಕಲಾಗಿದ್ದು, ಗ್ರಾಮದಲ್ಲಿ ಮೌನ ಆವರಿಸಿದೆ.

ಪರಿಸ್ಥಿತಿ ತಿಳಿಗೊಳಿಸಲು ಹಾಗೂ ಶಾಂತಿ ಸುವ್ಯವಸ್ಥೆ ಕಲ್ಪಿಸಲು ಜಿಲ್ಲಾ ಪೊಲೀಸ್ ಇಲಾಖೆಯು ಕೆಎಸ್‌ಆರ್‌ಪಿ ಪಡೆ ಸೇರಿದಂತೆ ಸೂಕ್ತ ಪೊಲೀಸ್ ಭದ್ರತೆ ನಿಯೋಜಿಸಿದೆ. ಜಿಲ್ಲಾಡಳಿತ ಗ್ರಾಮದಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.-

3ವೈಡಿಆರ್12:

ಘರ್ಷಣೆ ಹಿನ್ನೆಲೆಯಲ್ಲಿ ಹುಣಸಗಿ ತಾಲೂಕಿನ ರಾಯನಪಾಳ್ಯ ಗ್ರಾಮದಲ್ಲಿ ಕೆಎಸ್‌ಆರ್‌ಪಿ ತುಕಡಿ ಬೀಡು ಬಿಟ್ಟಿರುವುದು.