ಬಡವರ ಕಲ್ಯಾಣಕ್ಕಾಗಿ ಮನರೇಗಾ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿತ್ತು. ಇದರಿಂದ ದೇಶದ ಕೋಟ್ಯಂತರ ಬಡವರಿಗೆ ನೆರವಾಗಿದೆ. ಈ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ಪರೋಕ್ಷವಾಗಿ ರದ್ದುಪಡಿಸಿದ್ದು ಮಾತ್ರವಲ್ಲದೆ ದೇಶದ ಬಡವರ ಮೇಲೆ ದಾಳಿ ನಡೆಸಿದೆ. ದೇಶದ ಕಟ್ಟ ಕಡೆಯ ವ್ಯಕ್ತಿಗೂ ಅನ್ಯಾಯ ಮಾಡಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಆರೋಪಿಸಿದ್ದಾರೆ.
ಕನ್ನಡಪ್ರಭ ವಾರ್ತೆ ವಿರಾಜಪೇಟೆ
ಬಡವರ ಕಲ್ಯಾಣಕ್ಕಾಗಿ ಮನರೇಗಾ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿತ್ತು. ಇದರಿಂದ ದೇಶದ ಕೋಟ್ಯಂತರ ಬಡವರಿಗೆ ನೆರವಾಗಿದೆ. ಈ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ಪರೋಕ್ಷವಾಗಿ ರದ್ದುಪಡಿಸಿದ್ದು ಮಾತ್ರವಲ್ಲದೆ ದೇಶದ ಬಡವರ ಮೇಲೆ ದಾಳಿ ನಡೆಸಿದೆ. ದೇಶದ ಕಟ್ಟಡ ಕಡೆಯ ವ್ಯಕ್ತಿಗೂ ಅನ್ಯಾಯ ಮಾಡಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಆರೋಪಿಸಿದ್ದಾರೆ.ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ ಬದಲಿಸಿರುವುದನ್ನು ಖಂಡಿಸಿ ಹಾಗೂ ಕಾಯ್ದೆ ಮರು ಜಾರಿಗೆ ಆಗ್ರಹಿಸಿ ಸೋಮವಾರ ಕಾವೇರಿ ಕಾಲೇಜು ಸಮೀಪ ದಿಂದ ಮನ್ ರೇಗಾ ಬಚಾವ್ ಸಂಗ್ರಾಮದ ಪಾದಯಾತ್ರೆಗೆ ಚಾಲನೆ ನೀಡಿ ಪಾದಯಾತ್ರೆಯಲ್ಲಿ ಸಾಗಿಬಂದು ವಿರಾಜಪೇಟೆ ಕಾರು ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನಾ ಸಭೆ ಉದ್ದೇಶಿಸಿ ಅವರು ಮಾತನಾಡಿದರು.
ಕೇಂದ್ರದ ಬಿಜೆಪಿ ಸರ್ಕಾರ ನರೇಗಾ ಯೋಜನೆಗೆ ಕತ್ತರಿ ಹಾಕುವ ಮೂಲಕ ಮಹಾತ್ಮಾ ಗಾಂಧಿ ಹೆಸರನ್ನು ಅಳಿಸಿದ್ದು ಮಾತ್ರವಲ್ಲದೆ ದೇಶದ ಕಟ್ಟಕಡೆಯ ವ್ಯಕ್ತಿಗೂ ಅನ್ಯಾಯ ಮಾಡಿದೆ. ಜಿಲ್ಲೆಗೆ ಇದುವರೆಗೆ ನರೇಗಾ ಯೋಜನೆಯ ಮೂಲಕ ರು.೨೬೦ ಕೋಟಿ ಕೂಲಿ ನೀಡಲಾಗಿದೆ. ಕೇಂದ್ರದ ಹೊಸ ಕಾನೂನಿನ ಪ್ರಕಾರ ಮುಂದಿನ ದಿನಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಿಂದ ಯಾವುದೇ ಕೂಲಿ, ಕಾಮಗಾರಿ ನಡೆಯುವುದು ಸಾಧ್ಯವಿಲ್ಲ. ಕೇಂದ್ರದ ನಿರ್ಧಾರದ ವಿರುದ್ಧ ಪಕ್ಷಾತೀತವಾಗಿ ದೇಶಾದ್ಯಂತ ಹೋರಾಟ ನಡೆಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಬಡವರ ಪರ ಕಾಂಗ್ರೆಸ್ ಮಾತ್ರ ಎಂಬುದನ್ನು ದೇಶದ ಜನತೆ ಅರ್ಥಮಾಡಿಕೊಂಡಿದ್ದಾರೆ ಎಂದು ಶಾಸಕರು ಹೇಳಿದರು.ನರೇಗಾ ಯೋಜನೆಯಿಂದ ಗ್ರಾಮೀಣ ಪ್ರದೇಶದಲ್ಲಿನ ಹಿಂದುಳಿದವರಿಗೆ ಅನುಕೂಲವಾಗುತ್ತಿತ್ತು. ಇದೀಗ ಇದನ್ನು ಕೇಂದ್ರ ರ ಕಿತ್ತುಕೊಂಡು ಜನತೆಗೆ ಅನ್ಯಾಯವೆಸಗಿದೆ. ಈ ಮೊದಲಿದ್ದ ಯೋಜನೆಯನ್ನೆ ಸರ್ಕಾರ ಮತ್ತೆ ಜಾರಿಗೊಳಿಸಬೇಕು. ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ. ಯೋಜನೆಗೆ ಕೇಂದ್ರ ರ‍್ಕಾರದಿಂದ ಶೇ ೯೦ ರಷ್ಟು ಅನುದಾನ ಬರುತ್ತಿತ್ತು. ಇದೀಗ ಅನುದಾನವಿಲ್ಲದಂತಾಗಿದೆ. ದೇಶದ ಸಂವಿಧಾನದ ಮೇಲೆ ನಂಬಿಕೆಯಿಲ್ಲದ ಕೇಂದ್ರದ ಬಿ.ಜೆ.ಪಿ ರ‍್ಕಾರ ಸಂವಿಧಾನವನ್ನು ಹಾಳುಗೆಡವಿದೆ ಎಂದು ಆರೋಪಿಸಿದರು.
ಕೇಂದ್ರ ಬಿಜೆಪಿ ಸರ್ಕಾರ ಗ್ರಾಮ ಮಟ್ಟದಲ್ಲಿ ಕೃಷಿಕರಿಗೆ ಉಪಯೋಗವಾಗುವಂತಹ ಮನರೇಗಾ ಯೋಜನೆ ಬದಲಿಸಿ ಕೃಷಿಕರಿಗೆ ದ್ರೋಹ ಮಾಡುತ್ತಿದೆ. ಪ್ರಧಾನಿ ಮೋದಿಯವರ ಜನಪ್ರಿಯತೆ ಕುಸಿಯುತ್ತಿದೆ. ಸರ್ವಾಧಿಕಾರಿ ಧೋರಣೆಯಿಂದ ಜನರು ಬೇಸತ್ತಿದ್ದು ಇಡಿ, ಚುನಾವಣಾ ಆಯೋಗ, ಸಿಬಿಐ ಸೇರಿದಂತೆ ಎಲ್ಲ ಸಂವಿಧಾನಿಕ ಸಂಸ್ಥೆಗಳನ್ನು ಕೇಂದ್ರ ದುರುಪಯೋಗಪಡಿಸಿಕೊಳ್ಳುತ್ತಿದೆ. ಚಿನ್ನ, ಬೆಳ್ಳಿ, ದಿನಸಿ ವಸ್ತುಗಳ ಬೆಲೆ ಏರಿಕೆಯಿಂದ ಜನ ಸಾಮಾನ್ಯರಿಗೆ ಬದುಕಲು ಅಸಾಧ್ಯ ಸ್ಥಿತಿಯಿದೆ. ಕೇಂದ್ರ ಸರಕಾರ ಬಡವರ ದಾರಿ ತಪ್ಪಿಸುತ್ತಿದೆ. ಇಂತಹ ಕೆಟ್ಟ ರಾಜಕಾರಣ ಮಾಡುವವರ ವಿರುದ್ದ ನಾವಿಂದು ಪ್ರತಿಭಟಿಸಬೇಕಿದೆ ಎಂದರು.ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಮಾತನಾಡಿ ಕಾಂಗ್ರೆಸ್ ಸರ್ಕಾರ ಜನತೆಗೆ ಉಪಯೋಗವಾಗುವ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಆದರೆ ಈ ಹಿಂದೆ ಕಾಂಗ್ರೆಸ್ ಜಾರಿಗೊಳಿಸಿದ ಜನಪಯೋಗಿ ಯೋಜನೆಗಳನ್ನು ಇದೀಗ ಬಿಜೆಪಿ ಸರ್ಕಾರ ಹಾಳುಗೆಡವುತ್ತಿರುವುದು ದುರದೃಷ್ಟಕರ ಎಂದರು.ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ, ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿದರು. ವಿರಾಜಪೇಟೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪ್ರಚಾರ ಸಮಿತಿ ಅಧ್ಯಕ್ಷ ಎಸ್.ಎಚ್ ಮತಿನ್, ಪುರಸಭೆ ಮಾಜಿ ಸದಸ್ಯರಾದ ರಾಜೇಶ್ ಪದ್ಮನಾಭ, ಮಹಮ್ಮದ್ ರಾಫಿ,ಅಲ್ಪಸಂಖ್ಯತರ ಘಟಕದ ಅಧ್ಯಕ್ಷ ಹನೀಫ್, ಕೊಳುಮಂಡ ರಫಿಕ್, ವಕ್ತಾರ ತೆನ್ನಿರ ಮೈನಾ, ಪುರಸಭೆ ಮಾಜಿ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಜಗದೀಶ್ ಕಾಣತಂಡ, ಪಟ್ಟಡ ರಕ್ಷಿತ್, ಶಬೀರ್ ಮತ್ತಿತರರಿದ್ದರು.