ಸಾರಾಂಶ
ಹುಬ್ಬಳ್ಳಿ ಧಾರವಾಡದಲ್ಲಿ ಬಿಜೆಪಿ ಬಲಿಷ್ಠವಾಗಿದ್ದು, ಅದೇ ರೀತಿ ಲೋಕಸಭಾ ಕ್ಷೇತ್ರದಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಬಲಿಷ್ಠ ಪಡೆಯನ್ನು ಹೊಂದಿದೆ ಎಂದು ಬಿಜೆಪಿ ವೀಕ್ಷಕ ರವಿ ಸುಬ್ರಹ್ಮಣ್ಯ ಹೇಳಿದರು.
ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ದೇಶದ ಹಿರಿಯ ನಾಗರಿಕರು, ಮಹಿಳೆಯರು ಪ್ರತಿಯೊಬ್ಬರು ಸಹ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರನ್ನು ಕಾಣಬೇಕೆಂದು ಬಯಸಿದ್ದಾರೆ. ಈ ಬಾರಿಯೂ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಬೆಂಗಳೂರು ಬಸವನಗುಡಿಯ ಶಾಸಕ ಹಾಗೂ ಬಿಜೆಪಿ ವೀಕ್ಷಕ ರವಿ ಸುಬ್ರಹ್ಮಣ್ಯ ಹೇಳಿದರು.ಶನಿವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಹಮ್ಮಿಕೊಂಡಿದ್ದ ಧಾರವಾಡ ಲೋಕಸಭಾ ಕ್ಷೇತ್ರದ ಪ್ರಮುಖ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ಮಾತನಾಡಿದರು.
ಹುಬ್ಬಳ್ಳಿ ಧಾರವಾಡದಲ್ಲಿ ಬಿಜೆಪಿ ಬಲಿಷ್ಠವಾಗಿದ್ದು, ಅದೇ ರೀತಿ ಲೋಕಸಭಾ ಕ್ಷೇತ್ರದಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಬಲಿಷ್ಠ ಪಡೆಯನ್ನು ಹೊಂದಿದ್ದು, ನಮ್ಮ ಪಕ್ಷದ ಕಾರ್ಯ ಸೂಚಿಯಂತೆ ನಗರಕ್ಕೆ ಆಗಮಿಸಿದ್ದೇನೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಬಲ ಸ್ಪರ್ಧೆ ನೀಡಬಲ್ಲ ವಿರೋಧ ಪಕ್ಷದ ಅಭ್ಯರ್ಥಿಯೇ ಇಲ್ಲದಂತಾಗಿದೆ ಎಂದರು.ಸಭೆಯ ನಂತರ ಕ್ಷೇತ್ರದ ಪ್ರಮುಖರ ಅಭಿಪ್ರಾಯಗಳನ್ನು ಸಂಗ್ರಹಿಸಿದರು. ಈ ವೇಳೆ ವಿಧಾನಸಭೆಯ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಶಾಸಕ ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ, ವಿಪ ಸದಸ್ಯ ಎಸ್.ವಿ. ಸಂಕನೂರ, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಸೀಮಾ ಮಸೂತಿ, ಅಶೋಕ್ ಕಾಟವೆ, ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಎಂ. ನಾಗರಾಜ್, ಡಾ. ಕ್ರಾಂತಿಕಿರಣ್ ಸೇರಿದಂತೆ ಹಲವರಿದ್ದರು.