ಭಾರತ ವಿಶ್ವಗುರುವಾಗಲು ಮೋದಿ ಗೆಲ್ಲಿಸಿ

| Published : Feb 02 2024, 01:01 AM IST

ಸಾರಾಂಶ

2023ರ ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆಯಾಗಿರಬಹುದು ಆದರೆ, 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿ ದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವಂತೆ ಮಾಡಲು ಕಾರ್ಯಕರ್ತರು ಶಪತ ಮಾಡಬೇಕು ಎಂದು ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ರಾಮದುರ್ಗ

ಭಾರತ ವಿಶ್ವಗುರುವಾಗಲು ನರೇಂದ್ರ ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಕಾರ್ಯಕರ್ತರೆಲ್ಲ ಒಂದಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಬೆಳಗಾವಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುಭಾಸ ಪಾಟೀಲ ಹೇಳಿದರು.

ಬುಧವವಾರ ಪಟ್ಟಣದ ನೇಕಾರ ಪೇಟೆಯಲ್ಲಿ ಮೋದಿ ಮತ್ತೊಮ್ಮೆ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಚುನಾವಣೆಯಲ್ಲಿ ಅಭ್ಯರ್ಥಿ ಯಾರೇ ಆದರೂ ನಮ್ಮ ಗುರಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವುದಾಗಿರಬೇಕು. 2023ರ ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆಯಾಗಿರಬಹುದು ಆದರೆ, 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿ ದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವಂತೆ ಮಾಡಲು ಕಾರ್ಯಕರ್ತರು ಶಪತ ಮಾಡಬೇಕು ಎಂದು ಕರೆ ನೀಡಿದರು.

ರಾಮದುರ್ಗ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣೆಯಲ್ಲಿ ಮೊದಲಿನಿಂದಲೂ ಬಿಜೆಪಿ ಅಭ್ಯರ್ಥಿಗೆ ಹೆಚ್ಚಿನ ಮತ ನೀಡಿ ದಾಖಲೆ ಬರೆದಿದೆ. ಮಾಜಿ ಸಂಸದ ದಿ.ಸುರೇಶ ಅಂಗಡಿಯವರ ನೆಚ್ಚಿನ ಕ್ಷೇತ್ರ ರಾಮದುರ್ಗವಾಗಿತ್ತು. ಈ ಚುನಾವಣೆಯಲ್ಲೂ ಹೆಚ್ಚಿನ ಮತ ಬಿಜೆಪಿ ಅಭ್ಯರ್ಥಿಗೆ ದೊರೆಯುವಂತೆ ಕಾರ್ಯಕರ್ತರು ಶ್ರಮಿಸಬೇಕು. ಮೋದಿಯವರ 9 ವರ್ಷಗಳ ಅಭಿವೃದ್ಧಿಯನ್ನು ಪ್ರತಿ ಮನೆಗೂ ತಲುಪಿಸಬೇಕು ಎಂದು ಹೇಳಿದರು.ಈ ವೇಳೆ ಬೆಳಗಾವಿ ವಿಭಾಗದ ಸಂಘಟನಾ ಕಾರ್ಯದರ್ಶಿ ಜಿ. ಪ್ರಕಾಶ, ಬಿಜೆಪಿ ಮಂಡಲ ಅಧ್ಯಕ್ಷ ರಾಜೇಶ ಬೀಳಗಿ, ಮುಖಂಡ ಡಾ. ಕೆ. ವಿ. ಪಾಟೀಲ, ಶ್ರೀದೇವಿ ಮಾದನ್ನವರ, ಶಂಕರ ಹುರಕಡ್ಲಿ, ಮಾರುತಿ ಕೊಪ್ಪದ, ಬಸವರಾಜ ಸೋಮಗೊಂಡ, ಬಸವರಾಜ ಮಾದನ್ನವರ, ಜಾನಪ್ಪ ಹಕಾಟಿ, ರವಿಸೂರ್ಯ, ಶಂಕರ ಬೆನ್ನೂರ, ನಾಗರಾಜ ಕಟ್ಟಿಮನಿ, ಶ್ರೀಧರ ಮುದ್ದಿ, ಮಲ್ಲಿಕಾರ್ಜುನ ಭಾವಿಕಟ್ಟಿ ಸೇರಿದಂತೆ ಹಲವರಿದ್ದರು.