ಮಹಾರಾಷ್ಟ್ರದ ಪಾಲಿಕೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು ಬೃಹತ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಇಂಡಿ ಬಿಜೆಪಿ ಮಂಡಲ ವತಿಯಿಂದ ನಗರದ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ಕನ್ನಡಪ್ರಭ ವಾರ್ತೆ ಇಂಡಿ

ಮಹಾರಾಷ್ಟ್ರದ ಪಾಲಿಕೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು ಬೃಹತ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಇಂಡಿ ಬಿಜೆಪಿ ಮಂಡಲ ವತಿಯಿಂದ ನಗರದ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ಬಿಜೆಪಿ ಮುಖಂಡರಾದ ಅನೀಲ ಜಮಾದಾರ, ಮಲ್ಲಿಕಾರ್ಜುನ ಕಿವಡೆ, ಬಿ.ಎಸ್.ಪಾಟೀಲ, ಕಾಸುಗೌಡ ಬಿರಾದಾರ, ಮಂಡಲ ಅಧ್ಯಕ್ಷ ಹಣಮಂತ್ರಾಯಗೌಡ ಪಾಟೀಲ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಮಹಾರಾಷ್ಟ್ರ ಜನತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬಹುಮತದೊಂದಿಗೆ ಗೆಲ್ಲಿಸುವುದರ ಮೂಲಕ ಕೇಂದ್ರ ಸರ್ಕಾರದ ಅಭಿವೃದ್ಧಿ ಕೆಲಸಗಳಿಗೆ ಬೆಂಬಲಿಸಿದ್ದಾರೆ ಎಂದರು.ಈ ವೇಳೆ ಬಿ.ಎಸ್.ಪಾಟೀಲ, ಸಿದ್ದು ಮಂಗಳವಾಡೆ, ಸೋಮು ನಿಂಬರಗಿಮಠ, ಸಿದ್ದಪ್ಪ ಗುನ್ನಾಪುರ, ಶಾಂತು ಕಂಬಾರ, ಸಂತೋಷಗೌಡ ಪಾಟೀಲ, ಬಾಳು ಮುಳಜಿ, ಮಹೇಶ ಹೂಗಾರ, ಮಲ್ಲು ವಾಲಿಕಾರ, ಈರಣ್ಣಗೌಡ ಪಾಟೀಲ, ನಾಗೇಶ್ ಹೆಗಡ್ಯಾಳ, ಮಂಜುನಾಥ್ ದೇವರ, ಪುಟ್ಟುಗೌಡ ಪಾಟೀಲ, ವಿಜುಗೌಡ ಪಾಟೀಲ, ರಾಜಕುಮಾರ್ ಎರಗಲ್, ವಿಜು ರಾಠೋಡ , ಆದಿತ್ಯ ಸಿಂಧೆ, ಎಂ.ಪಿ.ಬೊರಾಮಣಿ ಮುಂತಾದವರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.