ಹಿರೇಕೆರೂರು: ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಸರ್ವಜ್ಞ ವೃತ್ತದಲ್ಲಿ ಮಾಜಿ ಸಚಿವ ಬಿ.ಸಿ. ಪಾಟೀಲ ನೇತೃತ್ವದಲ್ಲಿ ಕಾರ್ಯಕರ್ತರು, ಮುಖಂಡರು ವಿಜಯೋತ್ಸವ ಆಚರಿಸಿದರು.ಈ ವೇಳೆ ಮಾತನಾಡಿದ ಮಾಜಿ ಸಚಿವ ಬಿ.ಸಿ. ಪಾಟೀಲ, ಪ್ರಧಾನಮಂತ್ರಿ ನರೇಂದ್ರ ಮೋದಿಜೀಯವರ ಕಾರ್ಯವೈಖರಿಗೆ ಜನ ಬೆಂಬಲ ಸೂಚಿಸಿದ್ದಾರೆ. ಪಶ್ಚಿಮ ಬಂಗಾಳ ಅಸ್ಸಾಂ ಹಾಗೂ ಪುದುಚೇರಿಯಲ್ಲಿ ಬಿಜೆಪಿ ಜಯ ಸಾಧಿಸಿದ್ದು, ಕಾರ್ಯಕರ್ತರಲ್ಲಿ ಹುಮ್ಮಸ್ಸು ಇಮ್ಮಡಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಆಡಳಿತ, ಆರ್ಥಿಕ ಹಾಗೂ ವಿದೇಶಾಂಗ ನೀತಿಗಳು ದೇಶದ ಜನತೆಗೆ ಮೆಚ್ಚುಗೆಗೆ ಪಾತ್ರವಾಗಿರುವುದು ಹಾಗೂ ಬಿಜೆಪಿ ತತ್ವ ಸಿದ್ಧಾಂತಗಳು, ಜನಮಾನಸಕ್ಕೆ ಹತ್ತಿರವಾಗಿರುವುದು ಈ ಫಲಿತಾಂಶದಿಂದ ಸ್ಪಷ್ಟವಾಗಿದೆ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಸಂಜೀವಯ್ಯ ಕಬ್ಬಿಣಕಂತಿಮಠ, ಜಿ.ಪಿ. ಪ್ರಕಾಶ, ರವಿಶಂಕರ ಬಾಳಿಕಾಯಿ, ಗುರುಶಾಂತ ಎತ್ತಿನಹಳ್ಳಿ, ಹರೀಶ ಕಲಾಲ್, ಶಿವಕುಮಾರ ತಿಪ್ಪಶೆಟ್ಟಿ, ಜಗದೀಶ ದೊಡ್ಡಗೌಡ್ರ, ಆನಂದಪ್ಪ ಹಾದಿಮನಿ, ಪುಟ್ಟನಗೌಡ ಪಾಟೀಲ, ಚನ್ನೇಶ ದಿವೀಗಿಹಳ್ಳಿ, ಬಸವರಾಜ ಭರಮಗೌಡ್ರ, ಮಂಜು ಹೊಸಗೌಡ್ರ, ಜಿಲಾನಿ ಬಳಿಗಾರ, ಬಸವರಾಜ ಬಿದರಿ, ಸಿ.ಎಸ್. ಚಳಗೇರಿ, ಸತೀಶ ಕೋರಿಗೌಡ್ರ, ಈರಣ್ಣ ಚಿಟ್ಟೂರ, ಹೊನ್ನಪ್ಪ ಸಾಲಿ, ರಮೇಶ ಮೇಗಳಮನಿ, ಯಸೋದರ್ ಸಾಬಲೂರು, ನಾಗರಾಜ ಮಳೂರು, ಪ್ರವೀಣ ತಳವಾರ ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕರ್ತರಿದ್ದರು ಹಾಜರಿದ್ದರು.
ಪಂಚರಾಜ್ಯ ಚುನಾವಣೆಯಲ್ಲಿ ಜಯಭೇರಿ, ಬಿಜೆಪಿ ವಿಜಯೋತ್ಸವ
ಪಶ್ಚಿಮ ಬಂಗಾಳ ಅಸ್ಸಾಂ ಹಾಗೂ ಪುದುಚೇರಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಹಿರೇಕೆರೂರು ಪಟ್ಟಣದ ಸರ್ವಜ್ಞ ವೃತ್ತದಲ್ಲಿ ಮಾಜಿ ಸಚಿವ ಬಿ.ಸಿ. ಪಾಟೀಲ ನೇತೃತ್ವದಲ್ಲಿ ಕಾರ್ಯಕರ್ತರು, ಮುಖಂಡರು ವಿಜಯೋತ್ಸವ ಆಚರಿಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.