ಸಾರಾಂಶ
ಕನ್ನಡಪ್ರಭ ವಾರ್ತೆ ತುಮಕೂರುರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ, ದಲಿತ ವಿರೋಧಿ, ಭ್ರಷ್ಟಾಚಾರದ ವಿರುದ್ಧ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಖಂಡನಾ ನಿರ್ಣಯ ಕೈಗೊಂಡಿತು. ಸತತ ಮೂರನೇ ಬಾರಿ ಪ್ರಧಾನಿಯಾದ ನರೇಂದ್ರ ಮೋದಿ ತುಮಕೂರು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿ, ಕೇಂದ್ರ ಸಚಿವರಾಗಿರುವ ವಿ.ಸೋಮಣ್ಣ, ಚಿತ್ರದುರ್ಗ ಕ್ಷೇತ್ರದ ಸಂಸದ ಗೋವಿಂದ ಕಾರಜೋಳ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಮಂಜುನಾಥ್ ಅವರನ್ನು ಅಭಿನಂದಿಸಿ ಅಭಿನಂದನಾ ನಿರ್ಣಯ ಮಂಡಿಸಿತು.ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ಕಾರ್ಯಕಾರಿಣಿಯನ್ನು ಮಾಜಿ ಸಂಸದ ಜಿ.ಎಸ್ ಬಸವರಾಜು ಉದ್ಘಾಟಿಸಿ ಶನಿವಾರ ಮಾತನಾಡಿದರು. ನಮ್ಮ ಜಿಲ್ಲೆ ವ್ಯಾಪ್ತಿಯ ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ಗೆಲುವು ಪಡೆದಿದ್ದು, ಈ ಗೆಲುವಿಗೆ ನಮ್ಮಲ್ಲಿರುವ ಒಗ್ಗಟ್ಟು, ಹೋರಾಟ, ಬದ್ಧತೆ ಕಾರಣ. ಮುಂಬರುವ ಚುನಾವಣೆಗಳಲ್ಲೂ ಇದೇ ಬದ್ಧತೆ ಪ್ರದರ್ಶಿಸಿ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಮನವಿ ಮಾಡಿದರು.ಗ್ರಾಮಾಂತರ ಕ್ಷೇತ್ರ ಶಾಸಕ ಬಿ.ಸುರೇಶ್‌ಗೌಡರು ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ, ದಲಿತ ವಿರೋಧಿ, ಭ್ರಷ್ಟಾಚಾರ, ಅಭಿವೃದ್ಧಿ ಆಡಳಿತದ ವಿರುದ್ಧ ಖಂಡನಾ ನಿರ್ಣಯ ಮಂಡಿಸಿದರು. ಜಿಲ್ಲೆಯ ಜನರ ಜೀವನಾಡಿಯಾದ ಹೇಮಾವತಿ ನೀರನ್ನು ಪೈಪ್‌ಲೈನ್ ಮೂಲಕ ಅವೈಜ್ಞಾನಿಕವಾಗಿ ಮಾಗಡಿ ತಾಲೂಕಿಗೆ ತೆಗೆದುಕೊಂಡು ಹೋಗುವ, ಜಿಲ್ಲೆಯ ಜನರಿಗೆ ಅನ್ಯಾಯ ಮಾಡುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿದರು.
ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರಗಳ ಹಗರಣದಲ್ಲಿ ಮುಳುಗಿದೆ. ಪರಿಶಿಷ್ಟ ಪಂಗಡ ಸಮುದಾಯದ ಅಭಿವೃದ್ಧಿಗೆ ಬಳಕೆ ಆಗಬೇಕಾಗಿದ್ದ ಮಹರ್ಷಿ ವಾಲ್ಮೀಕಿ ನಿಗಮದ ₹ 187 ಕೊಟಿ ಬೇನಾಮಿ ಖಾತೆಗಳಿಗೆ ವರ್ಗಾವಣೆ ಮಾಡಿ ಬಡವರ ಹಣವನ್ನು ಲೂಟಿ ಮಾಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಸುಮಾರು ₹5 ಸಾವಿರ ಕೋಟಿ ದೊಡ್ಡ ಹಗರಣ ನಡೆದಿದೆ. ಪರಿಶಿಷ್ಟ ಜಾತಿಯ ಅಭ್ಯುದಯಕ್ಕಾಗಿ ಮೀಸಲಾಗಿದ್ದ ಸುಮಾರು ₹25 ಸಾವಿರ ಕೋಟಿ ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ಬಳಿಸಿಕೊಂಡು ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದಲಿತ ವಿರೋಧಿ ಸರ್ಕಾರ, ಭ್ರಷ್ಟಾಚಾರದ ಸರ್ಕಾರ. ಇಂತಹ ಕಾಂಗ್ರೆಸ್ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಖಂಡನಾ ನಿರ್ಣಯ ಮಂಡಿಸಿದರು.ಮುಂಡರಾದ ಸಾಗರನಹಳ್ಳಿ ವಿಜಯಕುಮಾರ್ ಹಾಗೂ ಎಸ್.ಟಿ.ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್ ಖಂಡನಾ ನಿರ್ಣಯವನ್ನು ಅನುಮೋದನೆ ಮಾಡಿದರು.ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವೈ.ಎಚ್.ಹುಚ್ಚಯ್ಯ ಮಾತನಾಡಿ, ಕೊಬ್ಬರಿ ಖರೀದಿ ಪ್ರಮಾಣ ಹೆಚ್ಚಳ, ರೈಲ್ವೆ ಮೇಲುಸೇತುವೆಗಳ ನಿರ್ಮಾಣಕ್ಕೆ ₹ 350 ಕೊಟಿ ಅನುಮೋದನೆ ದೊರೆಯಲು ಸೋಮಣ್ಣ ಕಾರಣರಾಗಿದ್ದಕ್ಕೆ ಅಭಿನಂದನಾ ನಿರ್ಣಯ ಮಂಡಿಸಿದರು. ಮುಖಂಡರಾದ ಎಚ್.ಟಿ.ಭೈರಪ್ಪ ಹಾಗೂ ಶಂಕರಪ್ಪ ಅನುಮೋದನೆ ಮಾಡಿದರು.ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಮಾತನಾಡಿ, ಜಿಪಂ, ತಾಪಂ ಚುನಾವಣೆಗಳಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಿ ಪಕ್ಷವನ್ನು ಗೆಲ್ಲಿಸಬೇಕು. ಜು. 30 ರವರೆಗೆ ಮಂಡಲ ಕಾರ್ಯಕಾರಿಣಿಗಳನ್ನು ನಡೆಸಬೇಕು. ಆಗಸ್ಟ್ 15ರಿಂದ 30ರವರೆಗೆ ಬೂತ್ ಚಲೋ ಕಾರ್ಯಕ್ರಮ ನಡೆಯಲಿದೆ ಎಂದರು.ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಸುರೇಶ್‌ಗೌಡ, ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಬ್ಯಾಟರಂಗೇಗೌಡ, ಮಾಜಿ ಪ್ರಧಾನ ಕಾರ್ಯದರ್ಶಿ ಎಸ್.ಶಿವಪ್ರಸಾದ್, ರಾಜ್ಯ ಬಿಜೆಪಿ ಕಾರ್ಯದರ್ಶಿ ಅಂಬಿಕಾ ಹುಲಿನಾಯ್ಕರ್, ರಾಜ್ಯ ಬಿಜೆಪಿ ಎಸ್.ಟಿ. ಮೋರ್ಚಾ ಉಪಾಧಕ್ಷ ಅನಿಲ್‌ಕುಮಾರ್, ಜಿಲ್ಲಾ ಬಿಜೆಪಿ ಹಿರಿಯ ಉಪಾಧ್ಯಕ್ಷ ವೈ.ಎಚ್.ಹುಚ್ಚಯ್ಯ, ಶಂಕರಪ್ಪ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಂಗರಾಜು, ಸಂದೀಪ್‌ಗೌಡ, ಹಾಲೇಗೌಡ, ಕಾರ್ಯದರ್ಶಿ ಹೆಚ್.ಎಂ.ರವೀಶಯ್ಯ ಭಾಗವಹಿಸಿದ್ದರು.