ತಾಳಿಕೋಟೆ: ಕಾಂಗ್ರೆಸ್‌ನಲ್ಲಿ ಕಳೆದ ೩೦ರಿಂದ ೩೫ ವರ್ಷಗಳ ಕಾಲ ಹಗಲಿರುಳು ಶ್ರಮಿಸಿ ಪಕ್ಷದ ಸಂಘಟನೆ ಹಾಗೂ ಬೆಳವಣಿಗೆಗೆ ಸೇವೆ ಸಲ್ಲಿಸಿದರೂ ಸೂಕ್ತ ಮಾನ್ಯತೆ ದೊರೆಯದ ಹಿನ್ನೆಲೆಯಲ್ಲಿ ಬೇಸರಗೊಂಡಿರುವ ಕೈ ಮುಖಂಡ ಸುರೇಶಬಾಬುಗೌಡ ಬಿರಾದಾರ (ಫೀರಾಪೂರ) ಅವರು ಬಿಜೆಪಿಯತ್ತ ಮುಖ ಮಾಡಿದ್ದಾರೆ ಎಂದು ಅವರು ಬೆಂಬಲಿಗರು ತಿಳಿಸಿದ್ದಾರೆ.

ಶನಿವಾರ ಫೀರಾಪುರ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದೆ. ಕಾರ್ಯಕರ್ತರೆಲ್ಲರೂ ಒಗ್ಗಟ್ಟಿನಿಂದ ಬಾಬುಗೌಡ ಫೀರಾಪೂರ ಅವರು ಬಿಜೆಪಿ ಸೇರ್ಪಡೆಯಾಗಬೇಕು ಎಂಬ ನಿರ್ಣಯ ಕೈಗೊಂಡಿದ್ದಾರೆ ಎನ್ನಲಾಗಿದೆ. ದೀರ್ಘಕಾಲ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದರೂ ನಿರೀಕ್ಷಿತ ಗೌರವ ಹಾಗೂ ಮನ್ನಣೆ ದೊರೆಯದಿರುವುದರಿಂದ ಸುರೇಶಬಾಬುಗೌಡ ಅವರು ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಪಕ್ಷದ ಕಾರ್ಯಕರ್ತರು, ಅವರ ಅಭಿಮಾನಿಗಳು ಅವರ ಬೆಂಬಲಕ್ಕೆ ನಿಂತು ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.ಕಾಂಗ್ರೇಸ್ ಪಕ್ಷದ ಸಂಘಟನೆಗಾಗಿ ಕಳೆದ 35 ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದವರಿಗೆ ಬೆಲೆ ಸಿಗದ್ದರಿಂದ ಸಾವಿರಾರು ಕಾರ್ಯಕರ್ತರೊಂದಿಗೆ ಬಿಜೆಪಿಗೆ ಸೇರ್ಪಡೆಗೊಳ್ಳಲು ನಿರ್ಧರಿಸಿದ್ದೇವೆ ಎಂದು ಕಾಂಗ್ರೆಸ್ ಮುಖಂಡರಾದ ತಿಪ್ಪಣ್ಣ ಆದ್ವಾನಿ, ಎಚ್.ಬಿ.ಬಿರಾದಾರ, ಬಸನಗೌಡ ಬಸರಡ್ಡಿ, ಹೂವಿನ ಹಿಪ್ಪರಗಿ ಬ್ಲಾಕ್ ಕಾಂಗ್ರೆಸ್ ಕುಶಲಕಾರ್ಮಿಗಳ ವಿಭಾಗ ಅಧ್ಯಕ್ಷ ಹಾಜಿಮಲಂಗ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಗಜಬೀರ್ ಮುಲ್ಲಾ ಅವರು ತಿಳಿಸಿದ್ದಾರೆ.