ಸಾರಾಂಶ
ಕಾಂಗ್ರೆಸ್ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ರಾಜ್ಯಪಾಲರ ವಿರುದ್ಧ ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನಿಯೋಗ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೋಮವಾರ ಸಂಜೆ ಮನವಿ ಸಲ್ಲಿಸಿದೆ.
ಕನ್ನಡಪ್ರಭ ವಾರ್ತೆ ಮಂಗಳೂರು
ಕಾಂಗ್ರೆಸ್ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ರಾಜ್ಯಪಾಲರ ವಿರುದ್ಧ ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನಿಯೋಗ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೋಮವಾರ ಸಂಜೆ ಮನವಿ ಸಲ್ಲಿಸಿದೆ.‘ರಾಜ್ಯಪಾಲರನ್ನು ರಾಷ್ಟ್ರಪತಿ ಅವರು ವಾಪಸ್ ಕರೆಸಿಕೊಳ್ಳಬೇಕು. ಇಲ್ಲವಾದರೆ ಬಾಂಗ್ಲಾ ದೇಶದ ಪ್ರಧಾನ ಮಂತ್ರಿಗೆ ಬಂದ ಪರಿಸ್ಥಿತಿ ರಾಜ್ಯಪಾಲರ ಕಚೇರಿಗೂ ಬರಲಿದೆ. ಗವರ್ನರ್ ಕಚೇರಿಗೆ ಮುತ್ತಿಗೆ ಹಾಕುತ್ತೇವೆ’ ಎಂದು ಹೇಳಿಕೆ ನೀಡಿದ್ದಾರೆ. ಐವನ್ ಅವರ ಸಂವಿಧಾನ ಬಾಹಿರ, ಉದ್ರೇಕಕಾರಿ ಭಾಷಣದ ಬಳಿಕ ಚಲಿಸುತ್ತಿದ್ದ ಬಸ್ ಹಾಗೂ ಸಾರ್ವಜನಿಕ ಸ್ವತ್ತುಗಳಿಗೆ ಕಲ್ಲು ತೂರಾಟ ನಡೆಸಿ ಗಲಭೆ ಎಬ್ಬಿಸಲಾಗಿದೆ. ಈ ಹಿನ್ನೆಲೆಯಲ್ಲಿ ಐವನ್ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.ನಿಯೋಗದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ. ಭರತ್ ಶೆಟ್ಟಿ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ಕಿಶೋರ್ ಬೊಟ್ಯಾಡಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷ ಮಂಜುಳಾ ರಾವ್, ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಪ್ರಮುಖರಾದ ಪೂಜಾ ಪೈ, ರಮೇಶ್ ಕಂಡೆಟ್ಟು, ಭರತ್‌ರಾಜ್ ಕೃಷ್ಣಾಪುರ ಇದ್ದರು.