ಅನುದಾನ, ಅಭಿವೃದ್ಧಿ ಕಾರ್ಯಗಳ ವಿವರಣೆ ನೀಡುವಂತೆ ಬಿಜೆಪಿ ಆಗ್ರಹ

| Published : Feb 12 2024, 01:31 AM IST

ಸಾರಾಂಶ

ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಅಭಿವೃದ್ಧಿ ಕಾರ್ಯಗಳು ಆರಂಭವಾಗಿಲ್ಲ. ಮತದಾರರಿಗೆ ಅಭಿವೃದ್ಧಿಯ ಕುರಿತು ಮಾಹಿತಿ ಒದಗಿಸುವುದು ನಿಮ್ಮ ಕರ್ತವ್ಯವಾಗಿದೆ. ಕೂಡಲೇ ವಿವಿಧ 15 ಪ್ರಶ್ನೆಗಳಿಗೆ ಉತ್ತರ ನೀಡಬೇಕೆಂದು ಸಚಿವ ರಹೀಂಖಾನ್‌ಗೆ ಮನವಿ ಪತ್ರ ನೀಡಿ ಬಿಜೆಪಿಯಿಂದ ಒತ್ತಾಯ.

ಕನ್ನಡಪ್ರಭ ವಾರ್ತೆ ಬೀದರ್‌

ಬಿಜೆಪಿ ವತಿಯಿಂದ ಮತದಾರರಿಗೆ ಉತ್ತರಿಸಿ ಅಭಿಯಾನದಡಿಯಲ್ಲಿ ಶನಿವಾರ ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ನೇತೃತ್ವದಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್‌ಗೆ ಚಿದ್ರಿ ಬಳಿಯ ಅವರ ಕಚೇರಿಗೆ ತೆರಳಿ ಮತದಾರರ 15 ಪ್ರಶ್ನೆಗಳಿಗೆ ಉತ್ತರ ನೀಡಬೇಕೆಂದು ಪತ್ರದ ಮೂಲಕ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಹುಡಗಿ ಮಾತನಾಡಿ, ಸಚಿವರಾದ ರಹೀಂಖಾನ್‌ಗೆ ಬೀದರ್‌ ಉತ್ತರ ಕ್ಷೇತ್ರದ ಶಾಸಕರಾಗಿ ಒಂದು ವರ್ಷ ಪೂರೈಸುವ ಹೊಸ್ತಿಲಲ್ಲಿದ್ದೀರಿ. ಆದರೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಅಭಿವೃದ್ಧಿ ಕಾರ್ಯಗಳು ಆರಂಭವಾಗಿಲ್ಲ. ಮತ ನೀಡಿದ ಮತದಾರರಿಗೆ ಕ್ಷೇತ್ರದ ಅಭಿವೃದ್ಧಿಯ ಕುರಿತು ಮಾಹಿತಿ ಒದಗಿಸುವುದು ನಿಮ್ಮ ಕರ್ತವ್ಯವಾಗಿದೆ. ಕೂಡಲೇ ವಿವಿಧ 15 ಪ್ರಶ್ನೆಗಳಿಗೆ ಉತ್ತರ ನೀಡಬೇಕೆಂದು ಸಚಿವರ ಆಪ್ತ ಸಹಾಯಕನಿಗೆ ಪತ್ರ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ ಮಲ್ಕಾಪುರೆ, ಬೀದರ್‌ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪ ಔರಾದೆ, ಬುಡಾ ಮಾಜಿ ಅಧ್ಯಕ್ಷ ಬಾಬು ವಾಲಿ, ಕಲಬುರಗಿ ವಿಭಾಗೀಯ ಸಂಘಟನಾ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ, ಕುಶಾಲ ಪಾಟೀಲ ಗಾದಗಿ, ಮಹೇಶ ಪಾಲಂ, ರಾಜಕುಮಾರ ಚಿದ್ರಿ , ಮಹೇಶ್ವರ ಸ್ವಾಮಿ, ಹಣುಮಂತ ಬುಳ್ಳಾ, ಸಂಗಮೇಶ ನಾಸಿಗರ, ರಾಜೇಂದ್ರ ಪುಜಾರಿ, ನಿತಿನ್ ನವಲ್ಕೆರೆ, ರಾಜಶೇಖರ ನಾಗಮೂರ್ತಿ, ಅಶೋಕ ಹೊಕ್ರಾಣೆ, ಜೈಕುಮಾರ ಕಾಂಗೆ, ನರೇಶ ಗೌಳಿ, ಬಸವರಾಜ ಜೋಜನಾ, ರಾಜುಕುಮಾರ ಪಾಟೀಲ ನೆಮತಾಬಾದ, ಗಣೇಶ ಭೋಸಲೆ, ರೋಷನ್ ವರ್ಮಾ, ವೀರೇಶ ಸ್ವಾಮಿ, ಶ್ರೀನಿವಾಸ ಚೌದರಿ ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.