ಸಾರಾಂಶ
ಮೈಸೂರಿನ ಮುಡಾದಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಪಿ.ಕುಮಾರ್ ಕನಕಪುರದಲ್ಲಿ ಆಗ್ರಹಿಸಿದರು.
ಕನಕಪುರ: ಮೈಸೂರಿನ ಮುಡಾದಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಪಿ.ಕುಮಾರ್ ಆಗ್ರಹಿಸಿದರು.
ನಗರದ ಚನ್ನಬಸಪ್ಪ ವೃತ್ತದಿಂದ ತಾಲೂಕು ಬಿಜೆಪಿ ಕಾರ್ಯಕರ್ತರೊಂದಿಗೆ ಮೈಸೂರಿನ ಮುಡಾ ಕಚೇರಿ ಮುತ್ತಿಗೆ ಹಾಕಲು ತೆರಳುತ್ತಿದ್ದ ವೇಳೆ ನಗರ ಆರಕ್ಷಕ ಸಿಬ್ಬಂದಿ ಅವರನ್ನು ಬಂಧಿಸಿ ಕರೆದೊಯ್ಯವಾಗ ಸುದ್ದಿಗಾರರೊಂದಿಗೆ ಮಾತನಾಡಿದರು.ಅತ್ಯಂತ ಪ್ರಮಾಣಿಕ, ಸರಳ ಹಾಗೂ ಹಿಂದುಳಿದ ವರ್ಗಗಳ ಪರಮೋಚ್ಚ ನಾಯಕ ಎಂದು ತಮ್ಮನ್ನು ಬಿಂಬಿಸಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದಿಂದಲೇ ಕೋಟ್ಯಂತರ ರುಪಾಯಿ ಭ್ರಷ್ಟಾಚಾರ ನಡೆದಿದ್ದರೂ ನನಗೂ ಅದಕ್ಕೂ ಸಂಬಂಧವಿಲ್ಲ ಎಂಬಂತೆ ಸರ್ಕಾರವೇ ನಮ್ಮ ಕುಟುಂಬಕ್ಕೆ ಪರಿಹಾರವಾಗಿ 62 ಕೋಟಿ ರು. ಹಣ ನೀಡಬೇಕೆಂಬ ಅವರ ಧೋರಣೆ ಖಂಡನೀಯ. ಹೋರಾಡುವ ನಮ್ಮನ್ನು ಬಂಧಿಸಿರುವುದು ಅವರ ರಾಜಕೀಯ ದಿವಾಳಿತನ ತೋರಿಸುತ್ತಿದೆ. ಈ ಹಗರಣದ ನೈತಿಕ ಹೊಣೆ ಹೊತ್ತು ಈ ಕೂಡಲೇ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ನಗರ ಮಂಡಲ ಅಧ್ಯಕ್ಷ ಕೆ.ಎಂ.ಮಂಜುನಾಥ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಶಿವಮುತ್ತು, ಯುವ ಮೋರ್ಚಾ ಅಧ್ಯಕ್ಷ ಸುನಿಲ್, ಪ್ರಧಾನ ಕಾರ್ಯದರ್ಶಿ ಮಧುಸೂದನ್, ಜಿಲ್ಲಾ ಉಪಾಧ್ಯಕ್ಷ ಕೋಟೆ ರಾಜೇಶ್, ನಗರ ಘಟಕದ ಪ್ರದೇಶ ಕಾರ್ಯದರ್ಶಿಗಳಾದ ಗೋಪಾಲ್, ಆಟೋ ಕುಮಾರ್, ಮಹಿಳಾ ಮೋರ್ಚಾದ ಪ್ರಮೀಳಾ, ಮುಖಂಡ ಕೃಷ್ಣಪ್ಪ ಸೇರಿ ನೂರಾರು ಕಾರ್ಯಕರ್ತರು ಹಾರಿದ್ದರು.