ಅಸೈಗೋಳಿಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆ

| Published : Oct 14 2024, 01:20 AM IST

ಸಾರಾಂಶ

ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಪಕ್ಷ ಸಂಘಟನೆಯ ಹಲವಾರು ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿರುವ ಸಮರ್ಥ ಅಭ್ಯರ್ಥಿಯನ್ನೇ ಬಿಜೆಪಿ ಕಣಕ್ಕೆ ಇಳಿಸಿದೆ ಎಂದರು.

ಕನ್ನಡಪ್ರಭ ವಾರ್ತೆ ಮಂಗಳೂರು

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್‌ ಉಪಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ ಅಸೈಗೋಳಿ ಬಂಟರ ಭವನದಲ್ಲಿ ನಡೆಯಿತು.

ಸಂಸದ ಕ್ಯಾ.ಬ್ರಿಜೇಶ್ ಚೌಟ ಮಾತನಾಡಿ, ಯುವ ನಾಯಕನಿಗೆ, ಅತ್ಯಂತ ಹಿಂದುಳಿದ ಜಾತಿಯ ಕಾರ್ಯಕರ್ತನಿಗೆ ಪಕ್ಷ ಟಿಕೆಟ್ ನೀಡಿದೆ. ಎಲ್ಲರೂ ಸೇರಿ ಕಿಶೋರ್ ಕುಮಾರ್ ಪುತ್ತೂರು ಅವರ ಗೆಲುವಿಗಾಗಿ ಶ್ರಮಿಸೋಣ ಎಂದರು.

ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಪಕ್ಷ ಸಂಘಟನೆಯ ಹಲವಾರು ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿರುವ ಸಮರ್ಥ ಅಭ್ಯರ್ಥಿಯನ್ನೇ ಬಿಜೆಪಿ ಕಣಕ್ಕೆ ಇಳಿಸಿದೆ ಎಂದರು.

ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ಚುನಾವಣಾ ಜಿಲ್ಲಾ ಸಂಚಾಲಕ ಕ್ಯಾ. ಗಣೇಶ್ ಕಾರ್ಣಿಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವಾರ್, ಪ್ರೇಮಾನಂದ ಶೆಟ್ಟಿ, ಮಂಡಲ ಅಧ್ಯಕ್ಷ ಜಗದೀಶ್ ಆಳ್ವ, ಬಂಟ್ವಾಳ ಚುನಾವಣಾ ಪ್ರಚಾರದ ಸಂಚಾಲಕ ದೇವದಾಸ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯೆ ಧನಲಕ್ಷ್ಮಿ ಗಟ್ಟಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.