ಹಾಲು ಮತ್ತದರ ಉತ್ಪನ್ನ, ಬಸ್‌ ದರ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ವತಿಯಿಂದ ಧಾರವಾಡದಲ್ಲಿ ಶುಕ್ರವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ಧಾರವಾಡ:

ಹಾಲು ಮತ್ತದರ ಉತ್ಪನ್ನ, ಬಸ್‌ ದರ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ವತಿಯಿಂದ ನಗರದಲ್ಲಿ ಶುಕ್ರವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ನಗರದ ಹಳೇಬಸ್ ನಿಲ್ದಾಣ ಹತ್ತಿರದ ಮಹಾರಾಣಾ ಪ್ರತಾಪ್ ಸಿಂಹ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪಕ್ಷದ ಮುಖಂಡರು, ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಘೋಷಣೆ ಕೂಗಿದರು.

ಈ ವೇಳೆ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ರಾಜ್ಯ ಸರ್ಕಾರ ಬೆಲೆ ಏರಿಸುವ ಮೂಲಕ ಬಡ, ಮಧ್ಯಮ ವರ್ಗದ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ರಾಜ್ಯದ ಅಭಿವೃದ್ಧಿಯ ಕಡೆಗೆ ಗಮನಹರಿಸದೇ ಬರೀ ಜನರ ಹಣ ಲೂಟಿ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ಜನಸಾಮಾನ್ಯರು ಬಳಸುವ ವಸ್ತುಗಳ ಬೆಲೆ ಏರಿಕೆ ಆಗುತ್ತಿದೆ. ಜತೆಗೆ ಸರ್ಕಾರ ತನ್ನ ಜವಾಬ್ದಾರಿ ಮರೆತು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ, ಇನ್ನು ಕೆಲವೇ ದಿನಗಳಲ್ಲಿ ಮತ್ತೊಮ್ಮೆ ಮುದ್ರಾಂಕ ಶುಲ್ಕ ಹೆಚ್ಚಳ ಮಾಡುವ ಆಲೋಚನೆ ಸರ್ಕಾರದ್ದಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಮೇಯರಗಳಾದ ಶಿವು ಹಿರೇಮಠ, ಜ್ಯೋತಿ ಪಾಟೀಲ, ಪಾಲಿಕೆ ಸದಸ್ಯರಾದ ಮಂಜುನಾಥ ಬಟ್ಟೆಣ್ಣವರ, ನೀಲಮ್ಮ ಅರವಾಳದ, ಚಂದ್ರಕಲಾ ಕೊಟಬಾಗಿ, ಸುರೇಶ ಬೇದರೆ, ಶಂಕರ ಶೆಳಕೆ, ವಿಜಯಾನಂದ ಶೆಟ್ಟಿ, ಬಸವರಾಜ ಗರಗ, ಸಂಜಯ ಕಪಟಕರ, ಚಂದ್ರಶೇಖರ ಮನಗುಂಡಿ, ರಾಜೇಶ ಕೋಟೆಣ್ಣವರ, ಮಂಜುನಾಥ ಮಲ್ಲಿಗವಾಡ, ರೂಪ ಚೌಧರಿ, ಮಾಲತಿ ಹುಲಕೋಟಿ, ಶಕ್ತಿ ಹಿರೇಮಠ, ಅಮಿತ್‌ ಪಾಟೀಲ, ಎಸ್.ಎನ್. ಮಹಾಜನಶೇಟ್, ಪ್ರಮೋದ ಕಾರಕೂನ, ಸುನೀಲ ಮೋರೆ, ಕರೆಪ್ಪ ಸುಣಗಾರ, ದೇವರಾಜ ಶಹಪೂರ, ಬಸವರಾಜ ರುದ್ರಾಪೂರ, ಮಕ್ತುಂ ಲಷ್ಕರಿ, ನಾಗರಾಜ ನಾಯಕ ಇತರರಿದ್ದರುಅಳ್ನಾವರ:

ರಾಜ್ಯದಲ್ಲಿ ಹಾಲು ಮತ್ತು ಬಸ್ ದರ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಪಟ್ಟಣದಲ್ಲಿ ಶುಕ್ರವಾರ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ಗ್ಯಾರಂಟಿ ಯೋಜನೆಯ ಹೆಸರಿನಲ್ಲಿ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಆರ್ಥಿಕತೆ ಸರಿದೂಗಿಸಿಕೊಳ್ಳಲು ರಾಜ್ಯದ ಜನರ ಮೇಲೆ ಬೆಲೆ ಏರಿಕೆಯ ಹೊರೆ ಹೊರೆಸಲಾಗುತ್ತಿದೆ. ಬಡವರು, ಕೂಲಿಕಾರರು, ಕಾರ್ಮಿಕರು ಇದರಿಂದ ಸಾಕಷ್ಟು ತೊಂದರೆಗೆ ಒಳಗಾಗಿದ್ದು ಉಪಜೀವನ ಸಾಗಿಸುವುದು ಮತ್ತಷ್ಟು ದುರ್ಲಬಲವಾಗಿದೆ. ಕಳೆದ ವರ್ಷವಷ್ಟೇ ಬಸ್ ದರವನ್ನು ಏರಿಕೆ ಮಾಡಿದ್ದ ರಾಜ್ಯ ಸರ್ಕಾರ ಈಗ ಪುನಃ ಏರಿಕೆ ಮಾಡಿದ್ದು ಖಂಡನೀಯ ಎಂದರು.ರಾಜ್ಯದಲ್ಲಿ ಬರ ಎದುರಾಗಿದೆ. ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಿದ್ದಾರೆ. ಈ ಮಧ್ಯೆ ಜನರಿಗೆ ಹೊರೆಯಾಗುವಂತೆ ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡಿರುವುದು ದುರದೃಷ್ಟಕರ ಸಂಗತಿ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳೆಲ್ಲವೂ ಕುಂಠಿತವಾಗಿದ್ದು ರಸ್ತೆಗಳು ಸಂಚಾರಕ್ಕೆ ಬಾರದಂತಾಗಿವೆ. ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವಿನ ಸಮಸ್ಯೆ ಉಂಟಾಗಿದೆ. ಈ ಸಮಯದಲ್ಲಿ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ಬಿಜೆಪಿ ಮುಖಂಡರಾದ ಶಿವಾಜಿ ಡೊಳ್ಳಿನ, ನಾರಾಯಣ ಮೋರೆ, ಲಿಂಗರಾಜ ಮೂಲಿಮನಿ, ಲಖನ ಬರಗುಂಡಿ, ಪ್ರವೀಣ ಪವಾರ, ಸಂದೀಪ ಪಾಟೀಲ. ಪರಶುರಾಮ ರೇಡೆಕರ, ಸಚಿನ ಲಿಂಗನಮಠ, ಪರಶುರಾಮ ಪಾಲಕಾರ ಇದ್ದರು.