ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರಿನಲ್ಲಿ ಬಿಜೆಪಿ ದೂರು

| Published : Aug 20 2025, 02:00 AM IST

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರಿನಲ್ಲಿ ಬಿಜೆಪಿ ದೂರು
Share this Article
  • FB
  • TW
  • Linkdin
  • Email

ಸಾರಾಂಶ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವಹೇಳನ ಆರೋಪದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮಂಗಳವಾರ ಪುತ್ತೂರು ಬಿಜೆಪಿಯ ವತಿಯಿಂದ ಪುತ್ತೂರು ನಗರ ಠಾಣಾ ಪೊಲೀಸರಿಗೆ ದೂರು ನೀಡಲಾಗಿದೆ.

ಪುತ್ತೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ಬಗ್ಗೆ ಏಕವಚನದಲ್ಲಿ ಮಾತನಾಡಿರುವುದಲ್ಲದೆ ಹೆಣ್ಣು ಮಕ್ಕಳ ಬಗ್ಗೆ ಅವಮಾನ ರೀತಿಯಲ್ಲಿ ಮಾತನಾಡಿ ಗುಂಪು ಘರ್ಷಣೆಗೆ ಪ್ರಚೋದನೆ ನೀಡಿರುವ ಆರೋಪದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮಂಗಳವಾರ ಪುತ್ತೂರು ಬಿಜೆಪಿಯ ವತಿಯಿಂದ ಪುತ್ತೂರು ನಗರ ಠಾಣಾ ಪೊಲೀಸರಿಗೆ ದೂರು ನೀಡಲಾಗಿದೆ.

ಮಹೇಶ್ ತಿಮರೋಡಿ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಮಹಿಳೆಯರ ಮಾನಕ್ಕೆ ಧಕ್ಕೆ ಬರುವ ರೀತಿ ಮಾತನಾಡಿದ ಮತ್ತು ಡೀಲ್ ಮಾಡುವ ಮೂಲಕ ಬಿಜೆಪಿಯನ್ನು ಸೋಲಿಸಿದ್ದಾರೆಂದು ಹೇಳಿ ಪಕ್ಷದೊಳಗೆ ಘರ್ಷಣೆಗೆ ಪ್ರಚೋದನಾಕಾರಿಯಾಗಿ ಮಾತನಾಡಿದ್ದಾರೆ. ಇದರಿಂದ ಅಲ್ಲಲ್ಲಿ ಪಕ್ಷದೊಳಗೆ ಗುಂಪು ಘರ್ಷಣೆ ಆಗುವ ಸಾಧ್ಯತೆ ಇರುವುದರಿಂದ ಮಹೇಶ್ ತಿಮರೊಡ್ಡಿಯನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಆಗ್ರಹಿಸಲಾಗಿದೆ. ಮಾಜಿ ಶಾಸಕ ಸಂಜೀವ ಮಠಂದೂರು, ನಗರ ಸಭಾ ಅಧ್ಯಕ್ಷೆ ಲೀಲಾವತಿ, ಸದಸ್ಯರಾದ ಗೌರಿ ಬನ್ನೂರು, ಮನೋಹರ್ ಕಲ್ಲಾರೆ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಯುವ ಮೋರ್ಚಾ ಉಪಾಧ್ಯಕ್ಷ ಪವನ್ ಶೆಟ್ಟಿ ಕಂಬಳತ್ತಡ್ಡ, ಟೌನ್ ಬ್ಯಾಂಕ್ ಉಪಾಧ್ಯಕ್ಷ ಶ್ರೀಧರ ಗೌಡ ಕಣಜಾಲು, ನ್ಯಾಯವಾದಿ ಮಾಧವ ಪೂಜಾರಿ, ಗ್ರಾಮಾಂತರ ಮಂಡಲದ ಮಾಜಿ ಅಧ್ಯಕ್ಷ ಅಪ್ಪಯ್ಯ ಮಣಿಯಾಣಿ, ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಹರಿಶ್ ಬಿಜತ್ರೆ ಮತ್ತಿತರರು ಇದ್ದರು.