ಅಡಕೆ ಮಾನ ಮೌಲ್ಯ ಹರಾಜು ಹಾಕಿದ್ದೇ ಬಿಜೆಪಿ ಸರ್ಕಾರ: ಬಿ.ಎ.ರಮೇಶ್ ಹೆಗ್ಡೆ

| Published : Apr 12 2024, 01:06 AM IST

ಅಡಕೆ ಮಾನ ಮೌಲ್ಯ ಹರಾಜು ಹಾಕಿದ್ದೇ ಬಿಜೆಪಿ ಸರ್ಕಾರ: ಬಿ.ಎ.ರಮೇಶ್ ಹೆಗ್ಡೆ
Share this Article
  • FB
  • TW
  • Linkdin
  • Email

ಸಾರಾಂಶ

ಅಡಕೆ ಮಾನ ಹಾಗೂ ಮೌಲ್ಯ ಹರಾಜು ಹಾಕಿದ್ದೇ ಬಿಜೆಪಿ ಸರ್ಕಾರ ಎಂದು ಶಿವಮೊಗ್ಗ ಕೆಪಿಸಿಸಿ ವಕ್ತಾರ ಬಿ.ಎ.ರಮೇಶ್ ಹೆಗ್ಡೆ ಹೇಳಿದ್ದಾರೆ.

ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿ

ಕನ್ನಡಪ್ರಭ ವಾರ್ತೆ, ತರೀಕೆರೆ

ಅಡಕೆ ಮಾನ ಹಾಗೂ ಮೌಲ್ಯ ಹರಾಜು ಹಾಕಿದ್ದೇ ಬಿಜೆಪಿ ಸರ್ಕಾರ ಎಂದು ಶಿವಮೊಗ್ಗ ಕೆಪಿಸಿಸಿ ವಕ್ತಾರ ಬಿ.ಎ.ರಮೇಶ್ ಹೆಗ್ಡೆ ಹೇಳಿದ್ದಾರೆ.ಗುರುವಾರ ಪಟ್ಟಣದ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಭಾರತೀಯ ಹಿಂದೂ ಧಾರ್ಮಿಕ ಹಾಗೂ ಸಾಂಸ್ಕೃತಿಕ ಬದುಕಿನಲ್ಲಿ ಅಡಕೆ ಗೌರವ ಸ್ಥಾನವನ್ನು ಹೊಂದಿದೆ. ಔಷಧೀಯ ಗುಣ ಹೊಂದಿದೆ ಹಾಗೂ ಅಡಕೆ ಲಕ್ಷಾಂತರ ರೈತರ ಬದುಕಿನ ಬೆಳೆಯಾಗಿದೆ. ಅಡಕೆ ತಿಂದರೆ ಕ್ಯಾನ್ಸರ್ ಬರುತ್ತದೆ ಎಂದು ಹಣೆ ಪಟ್ಟಿ ಕಟ್ಟಿದ್ದೇ ಬಿಜೆಪಿ. 2001 ರಿಂದಲೇ ಅಡಕೆ ಮಾನವನ್ನು ಹರಾಜು ಮಾಡಿದ್ದಾರೆ ಬಿಜೆಪಿ ಯವರು ಎಂದು ಹೇಳಿದರು.ಚಿಕ್ಕಮಗಳೂರು ಜಿಲ್ಲೆಯಲ್ಲೇ ಹೆಚ್ಚು ಅಡಕೆ ಬೆಳೆಯೋದು, ಈಗಿನ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ತೀರ್ಥಹಳ್ಳಿ ಯಲ್ಲಿ ಅಡಕೆ ಬೆಳೆಗಾರರ ಸಭೆಗೆ ಬಂದಾಗ ಶಿವಮೊಗ್ಗದಲ್ಲಿ 500 ಕೋಟಿ ರು.ವೆಚ್ಚದ ಅಡಕೆ ಸಂಶೋಧನಾ ಕೇಂದ್ರ ಪ್ರಾರಂಭಿಸುವುದಾಗಿ ಕೊಟ್ಟ ಭರವಸೆ ಹುಸಿಯಾಗಿದೆ. ಭರ್ಮಾ ದೇಶದಿಂದ ನಿರಂತರವಾಗಿ ಅಡಕೆ ಕಳ್ಳ ಸಾಗಾಣಿಕೆಗೆಕೇಂದ್ರ ಸರ್ಕಾರ ಮುಕ್ತ ಅವಕಾಶ ಕಲ್ಪಿಸಿದೆ. ದೇಶೀಯ ಮಾರುಕಟ್ಟೆಯಲ್ಲಿ ನಮ್ಮ ದೇಶದ ಉತ್ತಮ ಗುಣಮಟ್ಟದ ಅಡಕೆಗೆ ಬೆಲೆ ಕುಸಿಯುವಂತೆ ಮಾಡಿದೆ ಎಂದು ಹೇಳಿದರು.ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅಡಕೆ ಬೆಳೆಗೆ ಆಶಾಕಿರಣ, ಅಡಕೆಗೆ ಬೆಲೆ ಹೆಚ್ಚು ಮಾಡಿದ್ದು ಜಯಪ್ರಕಾಶ್ ಹೆಗ್ಡೆ ಎಂದು ಹೇಳಿದರು. ಶಾಸಕ ಜಿ.ಎಚ್.ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಸಮಿತಿ ನಗರಾಧ್ಯಕ್ಷ ಟಿ.ಎಸ್,.ಪ್ರಕಾಶ್ ವರ್ಮ, ಅಜ್ಜಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಯಾನಂದ್ ಉಪಸ್ಥಿತರಿದ್ದರು.11ಕೆಟಿಆರ್.ಕೆ.4ಃ

ತರೀಕೆರೆಯಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ಕೆಪಿಸಿಸಿ ವಕ್ತಾರ ಬಿ.ಎ.ರಮೇಶ್ ಹೆಗ್ಡೆ ಮಾತನಾಡಿದರು. ಶಾಸಕ ಜಿ.ಎಚ್.ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಸಮಿತಿ ನಗರಾಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ, ಅಜ್ಜಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಯಾನಂದ್ ಇದ್ದರು.