ಮತಗಳ್ಳತನದ ಮೂಲಕ ಬಿಜೆಪಿ ದೇಶದ ಜನತೆಗೆ ದ್ರೋಹ ಎಸಗಿದೆ

| Published : Oct 27 2025, 12:00 AM IST

ಸಾರಾಂಶ

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆಸಿದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ದೇಶವ್ಯಾಪಿ ನಡೆಸುತ್ತಿರುವ ಸ್ಟಾಪ್ ವೋಟ್ ಚೋರಿ " ಅಭಿಯಾನಕ್ಕೆ ಬೆಂಬಲವಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಮಾಜಿ ಶಾಸಕ ಎಂ.ಎ. ಗೋಪಾಲಸ್ವಾಮಿ ೪೦ ಅಡಿ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಿದರು. ಪಟ್ಟಣದ ೨೩ ವಾರ್ಡ್‌ನಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದ್ದು ಸುಮಾರು ೩೦ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರ ಸಹಿ ಸಂಗ್ರಹಿಸಿ ಚುನಾವಣಾ ಆಯೋಗಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆಸಿದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ದೇಶವ್ಯಾಪಿ ನಡೆಸುತ್ತಿರುವ ಸ್ಟಾಪ್ ವೋಟ್ ಚೋರಿ " ಅಭಿಯಾನಕ್ಕೆ ಬೆಂಬಲವಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಮಾಜಿ ಶಾಸಕ ಎಂ.ಎ. ಗೋಪಾಲಸ್ವಾಮಿ ೪೦ ಅಡಿ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಿದರು.

ಬಳಿಕ ಮಾತನಾಡಿ ಮತದಾನ ದೇಶದ ಪ್ರಜೆಗಳ ಹಕ್ಕು. ಆದರೆ ಮತಗಳ್ಳತನದ ಮೂಲಕ ಬಿಜೆಪಿ ಈ ದೇಶದ ಜನತೆಗೆ ಅತಿ ದೊಡ್ಡ ದ್ರೋಹ ಎಸಗಿದೆ. ಇದರ ವಿರುದ್ಧ ನಾವೆಲ್ಲರೂ ಒಂದಾಗಿ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು. ಬಿಜೆಪಿ ಅಧಿಕಾರಕ್ಕಾಗಿ ಜನರ ಹಕ್ಕನ್ನು ಕಸಿಯುವ ದೇಶದ್ರೋಹದ ಕೆಲಸ ಮಾಡಿದೆ. ಇದರ ವಿರುದ್ಧ ಪ್ರತಿಯೊಬ್ಬ ಪ್ರಜೆಯೂ ಧ್ವನಿ ಎತ್ತ ಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ೨೨೪ ವಿಧಾನಸಭಾ ಕ್ಷೇತ್ರಗಳಲ್ಲೂ ಸಹಿಸಂಗ್ರಹ ಅಭಿಯಾನ ನಡೆಯುತ್ತಿದೆ. ಪಟ್ಟಣದ ೨೩ ವಾರ್ಡ್‌ನಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದ್ದು ಸುಮಾರು ೩೦ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರ ಸಹಿ ಸಂಗ್ರಹಿಸಿ ಚುನಾವಣಾ ಆಯೋಗಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು. ಜತೆಗೆ ಪಕ್ಷದ ನಾವೆಲ್ಲರೂ ಚುನಾವಣಾ ಪಾವಿತ್ರ್ಯತೆಯನ್ನು ಕಾಪಾಡಿಕೊಳ್ಳಬೇಕು. ಇಲ್ಲದಿದ್ದರೆ ಪ್ರಜಾಪ್ರಭುತ್ವ ಉಳಿ ಯಲು ಸಾಧ್ಯವಿಲ್ಲ. ಇದೇ ಕಾರಣಕ್ಕೆ ಮತಗಳ್ಳತನದ ನೀಡಲಾಗಿದೆ. ಮತದಾರರು ಈ ಅಕ್ರಮದ ಬಗ್ಗೆ ವಿರುದ್ಧ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ಎಚ್ಚರವಾಗಬೇಕು. ಮುಂದಿನ ಚುನಾವಣೆಗಳಲ್ಲಿ ಜನತಾ ನ್ಯಾಯಾಲಯವೇ ಈ ಅಕ್ರಮಕ್ಕೆ ಸರಿಯಾದ ಉತ್ತರ ನೀಡಬೇಕು ಎಂದರು. ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಣತಿ ಆನಂದ್, ಪುರಸಭಾ ಸದಸ್ಯ ಆದರ್ಶ್, ಸಿ.ಟಿ ಅಶೋಕ್ ಕುಮಾರ್‌, ರಾಷ್ಟ್ರೀಯ ಅಹಿಂದ ಸಂಘಟನೆ ಜಿಲ್ಲಾ ಉಪಾಧ್ಯಕ್ಷ ಜಬಿವುಲ್ಲಾ ಬೇಗ್, ಮಾಜಿ ಪುರಸಭಾ ಸದಸ್ಯರಾದ ಅಂಗಡಿ ಮಂಜಣ್ಣ, ಪರಶುರಾಮ್, ನಾಮಿನಿ ಸದಸ್ಯರಾದ ಬಾಬಣ್ಣ, ಇಮ್ರಾನ್, ರವಿಕುಮಾರ್, ಚಂದ್ರಶೇಖರ್, ರೋಹಿತ್, ಪ್ರೇಮ್‌ಕುಮಾರ್, ಸಚಿನ್ ಮತ್ತಿತರಿದ್ದರು.