ಸಿದ್ದರಾಮಯ್ಯನವರು ರಾಜ್ಯ ರಾಜಕೀಯ ಇತಿಹಾಸದಲ್ಲಿ ಬಸವಣ್ಣನವರ ಸಮಾನತೆ ತತ್ವ ಮೈಗೂಡಿಸಿಕೊಂಡು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ್ದ ದೇವರಾಜ ಅರಸುರವರ ನಂತರ ಸಿದ್ದರಾಮಯ್ಯ ಅವರು 2793 ದಿನಗಳನ್ನು ಸಿಎಂ ಆಗಿ ಪೂರೈಸುವ ಮೂಲಕ ದಾಖಲೆ ಸೃಷ್ಟಿಸಿರುವುದು ನಮ್ಮೆಲ್ಲರಿಗೆ ಹೆಮ್ಮೆ ತಂದಿದೆ.
ಹೊಸಕೋಟೆ: ರಾಜ್ಯದಲ್ಲಿ ಉತ್ತಮ ಆಡಳಿತ ನೀಡುವ ಮೂಲಕ ದೀರ್ಘಾವಧಿ ಮುಖ್ಯಮಂತ್ರಿ ಎಂಬ ಖ್ಯಾತಿ ಪಡೆದ ಸಿಎಂ ಸಿದ್ದರಾಮಯ್ಯ ಅವರನ್ನು ಟೀಕಿಸುವ ಹಕ್ಕು ಬಿಜೆಪಿಗರಿಗಿಲ್ಲ ಎಂದು ಕೆಪಿಸಿಸಿ ಕಾರ್ಯದರ್ಶಿ ಇಟ್ಟಸಂದ್ರ ಬಿ.ಗೋಪಾಲ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯನವರು ರಾಜ್ಯ ರಾಜಕೀಯ ಇತಿಹಾಸದಲ್ಲಿ ಬಸವಣ್ಣನವರ ಸಮಾನತೆ ತತ್ವ ಮೈಗೂಡಿಸಿಕೊಂಡು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ್ದ ದೇವರಾಜ ಅರಸುರವರ ನಂತರ ಸಿದ್ದರಾಮಯ್ಯ ಅವರು 2793 ದಿನಗಳನ್ನು ಸಿಎಂ ಆಗಿ ಪೂರೈಸುವ ಮೂಲಕ ದಾಖಲೆ ಸೃಷ್ಟಿಸಿರುವುದು ನಮ್ಮೆಲ್ಲರಿಗೆ ಹೆಮ್ಮೆ ತಂದಿದೆ. ಅವರು ಕಳೆದ 7 ವರ್ಷ 239 ದಿನಗಳಲ್ಲಿ ರಾಜ್ಯದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ನುಡಿದಂತೆ ನಡೆದು ಸರ್ವ ಜನಾಂಗದ ಪ್ರೀತಿಗೆ ಪಾತ್ರರಾಗಿದ್ದಾರೆ. ವಿರೋಧ ಪಕ್ಷಗಳು ಈ ಯೋಜನೆಗಳ ಬಗ್ಗೆ ಮೊದಲು ಟೀಕೆ ಮಾಡಿದ್ದವು. ಆದರೆ ಇದೇ ಯೋಜನೆಗಳನ್ನು ಮಾದರಿಯಾಗಿಟ್ಟುಕೊಂಡು ಬೇರೆ ಬೇರೆ ರಾಜ್ಯಗಳಲ್ಲಿ ಅನುಷ್ಠಾನ ಮಾಡುತ್ತಿದ್ದಾರೆ ಎಂದರು. ಆದ್ದರಿಂದ ಸಿಎಂ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ಇನ್ನಷ್ಟು ಸೇವೆ ಮಾಡುವ ಅವಕಾಶವನ್ನು ಭಗವಂತ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು.