ಸಾರಾಂಶ
ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಮಹದೇವಪುರ ಕ್ಷೇತ್ರದಲ್ಲಿ ದೊಡ್ಡಪ್ರಮಾಣದಲ್ಲಿ ಮತ ಕದಿಯುವ ಕೆಲಸ ಆಗಿದೆ.
ದೇವನಹಳ್ಳಿ: ಬಿಜೆಪಿಯವರು ಇಡೀ ರಾಷ್ಟ್ರದಲ್ಲಿ ಸುಮಾರು 70 ರಿಂದ 100 ಕ್ಷೇತ್ರದಲ್ಲಿ ಮತಕದಿಯುವ ಕೆಲಸ ಮಾಡಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಮಹದೇವಪುರ ಕ್ಷೇತ್ರದಲ್ಲಿ ದೊಡ್ಡಪ್ರಮಾಣದಲ್ಲಿ ಮತ ಕದಿಯುವ ಕೆಲಸ ಆಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.ಬಿಜೆಪಿಯ ಮತ ಕಳ್ಳತನ ವಿರುದ್ಧ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್‌ಗಾಂಧಿ ನೇತೃತ್ವದಲ್ಲಿ ಆ. 5 ರಂದು ಹಮ್ಮಿಕೊಂಡಿರುವ ಸಭೆಗೆ ಗ್ರಾಮಾಂತರ ಜಿಲ್ಲೆಯಿಂದ ತೆರಳು ದೇವನಹಳ್ಳಿ ತಾಲೂಕಿನ ಕನ್ನಮಂಗಲ ಸಮೀಪ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ನಂತರ ಮಾತನಾಡಿದರು.
ಆ. 5ರಂದು ಮತ ಕಳ್ಳತನದ ವಿರುದ್ಧ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರ ನೇತೃತ್ವದಲ್ಲಿ ನಡೆಯುವ ಸಭೆಗೆ ಗ್ರಾಮಾಂತರ ಜಿಲ್ಲೆಯಿಂದ ಹೆಚ್ಚಿನ ಮುಖಂಡರು ಕಾರ್ಯಕರ್ತರು ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.ಇದೇ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಸಿ.ಮಂಜುನಾಥ್, ದಿನ್ನೂರು ವೆಂಕಟೇಶ್, ಬಯಪ ಅಧ್ಯಕ್ಷ ಶಾಂತಕುಮಾರ್ ವಿ., ಯುವಘಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಆರ್.ನಾಗೇಶ್, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ರಾಜಣ್ಣ, ತಾಲೂಕು ಅಧ್ಯಕ್ಷ ಸಿ.ಜಗನ್ನಾಥ್, ಕೆಪಿಸಿಸಿ ಸದಸ್ಯ ಚಿನ್ನಪ್ಪ ಸೇರಿದಂತೆ ತಾಲೂಕಿನ ಗ್ರಾಪಂ ಅಧ್ಯಕ್ಷರು ಮುಖಂಡರು ಕಾರ್ಯಕರ್ತರು ಇದ್ದರು. ೦೩ ದೇವನಹಳ್ಳಿ ಚಿತ್ರಸುದ್ದಿ:೦೧ ಬಿಜೆಪಿಯ ಮತ ಕಳ್ಳತನ ವಿರುದ್ಧ ಆ. 5ರಂದು ಹಮ್ಮಿಕೊಂಡಿರುವ ಸಭೆಗೆ ತೆರಳುವ ಕುರಿತು ಚರ್ಚಿಸಲು ಕರೆಯಲಾಗಿದ್ದ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿದರು.