ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಒತ್ತಾಯಿಸಿದೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಡಿಕಾರಿ ಮಾಜಿ ಶಾಸಕ ಅಪ್ಪಚ್ಚು ರಂಜನ್, ಆರೋಪ ಬಂದ ತಕ್ಷಣವೇ ಸಿದ್ದರಾಮಯ್ಯ ರಾಜಿನಾಮೆ ನೀಡಿ ತನಿಖೆ ಎದುರಿಸಬೇಕಿತ್ತು. ಸಿದ್ದರಾಮಯ್ಯ ಹಿಂದೆ ಯಡಿಯೂರಪ್ಪಗೆ ಹೇಳಿದ ಮಾತು ಉಳಿಸಿಕೊಂಡು ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು. ಸಿದ್ದರಾಮಯ್ಯ ದೋಷಿ ಅಲ್ಲ ಎಂದು ಸಾಬೀತಾದರೆ ಮತ್ತೆ ಅಧಿಕಾರಕ್ಕೆ ಏರಲಿ ಎಂದ ರಂಜನ್, ಸಂಪುಟ ಸಭೆಯಲ್ಲಿ ಸಿಬಿಐ ಅಧಿಕಾರಕ್ಕೆ ತಡೆ ಒಡ್ಡಿರುವುದು ಸರಿಯಲ್ಲ. ಅವರು ತಪ್ಪನ್ನೇ ಮಾಡದಿದ್ರೆ ಲೋಕಾಯುಕ್ಕಕ್ಕೆ ಪೂರ್ಣ ಸ್ವಾತಂತ್ರ್ಯ ಕೊಟ್ಟು ತನಿಖೆ ಎದುರಿಸಲಿ. ಇಲ್ಲದಿದ್ದರೆ ಪ್ರಕರಣದ ತನಿಖೆ ಸಿಬಿಐಗೆ ವಹಿಸಿ ಎಂದು ಆಗ್ರಹಿಸಿದರು.
ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಮಾತನಾಡಿ, ಲೋಕಾಯುಕ್ತ ತನಿಖೆ ನಡೆಸುತ್ತಿರುವುದರಿಂದ ಸಿದ್ದರಾಮಯ್ಯ ಅವರಿಗೆ ತಾನು ತಪ್ಪು ಮಾಡಿಲ್ಲ ಎಂಬ ವಿಶ್ವಾಸದಲ್ಲಿದ್ದಾರೆ. ಅಷ್ಟೂ ಆತ್ಮವಿಶ್ವಾಸ ಇದ್ದರೆ ಪ್ರಕರಣವನ್ನು ನೇರವಾಗಿ ಸಿಬಿಐಗೆ ಕೊಟ್ಟು ತನಿಖೆಯನ್ನು ಎದುರಿಸಲಿ ಎಂದು ಒತ್ತಾಯಿಸಿದರು.ಕಾಂಗ್ರೆಸಿರು ರಾಜ್ಯಪಾಲನ್ನು ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಸಂವಿಧಾನದ ಮುಖ್ಯಸ್ಥರಿಗೇ ಹೀಗೆ ಮಾಡಿರುವುದು ಸರಿಯಲ್ಲ. ಪ್ರಜಾಪ್ರಭುತ್ವವನ್ನೆ ಬುಡಮೇಲು ಮಾಡಲು ಕಾಂಗ್ರೆಸ್ ಸರ್ಕಾರ ಹೊರಟಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿಜಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ ಮಾತನಾಡಿ, ಮೂಡಾ ಹಗರಣ ಆರೋಪ ಎದುರಿಸುತ್ತಿರುವ ಸಿದ್ದರಾಮಯ್ಯ ತಕ್ಷಣ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ತಪ್ಪೇ ಮಾಡಿಲ್ಲ ಅನ್ನುವವರಿಗೆ ತನಿಖೆ ಎದುರಿಸಲು ಯಾಕೆ ಇಷ್ಟೊಂದು ಅಂಜಿಕೆ. ಸಿದ್ದರಾಮಯ್ಯ ರಾಜೀನಾಮೆ ನೀಡುವ ವರೆಗೂ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದರು.ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಜಿಲ್ಲಾ ಉಪಾಧ್ಯಕ್ಷ ಕಾಂಗೀರ ಸತೀಶ್, ಮಾಧ್ಯಮ ಪ್ರಮುಖ್ ಸಚಿಲ್ ಕೃಷ್ಣನ್ ಸುದ್ದಿಗೋಷ್ಠಿಯಲ್ಲಿದ್ದರು.