ಬಿಜೆಪಿ ತತ್ವ, ಸಿದ್ಧಾಂತಗಳ ಮೇಲೆ ಕಟ್ಟಿದ ದೊಡ್ಡ ಪಕ್ಷ: ಎಸ್.ಪಿ.ಸ್ವಾಮಿ

| Published : Apr 07 2025, 12:34 AM IST

ಬಿಜೆಪಿ ತತ್ವ, ಸಿದ್ಧಾಂತಗಳ ಮೇಲೆ ಕಟ್ಟಿದ ದೊಡ್ಡ ಪಕ್ಷ: ಎಸ್.ಪಿ.ಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಕಾಂಗ್ರೆಸ್ ಪಕ್ಷದ ದುರಾಡಳಿತದ ನೀತಿಯಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿ ಬೇಸತ್ತಿರುವ ರಾಜ್ಯದ ಜನರು ಈಗ ಬಿಜೆಪಿ ಪರವಾಗಿ ಒಲವು ತೋರಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಏ.8ರಿಂದ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಜನಜಾಗೃತಿ ಯಾತ್ರೆ ಹಮ್ಮಿಕೊಂಡಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ಬಿಜೆಪಿ ಹಿರಿಯರ ಮಾರ್ಗದರ್ಶನ ಮತ್ತು ತತ್ವ, ಸಿದ್ಧಾಂತಗಳ ಮೇಲೆ ಕಟ್ಟಿದ ದೊಡ್ಡ ಪಕ್ಷವಾಗಿದೆ ಎಂದು ಮನ್ಮುಲ್ ನಿರ್ದೇಶಕ ನಿರ್ದೇಶಕ ಎಸ್‌.ಪಿ.ಸ್ವಾಮಿ ಭಾನುವಾರ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಸಂಸ್ಥಾಪನಾ ದಿನದ ಅಂಗವಾಗಿ ಶ್ಯಾಮ್ ಪ್ರಸಾದ್ ಮುಖರ್ಜಿ ಮತ್ತು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಬಿಜೆಪಿ ವಿಶ್ವದಲ್ಲಿ ಅತಿ ದೊಡ್ಡ ಪಕ್ಷವಾಗಿ ಬೆಳೆಯಲು ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಮತ್ತು ಶ್ಯಾಮ್ ಪ್ರಸಾದ್ ಮುಖರ್ಜಿ, ದೀನ್ ದಯಾಳ್ ಉಪಾಧ್ಯಾಯ ಹಾಗೂ ಅಟಲ್ ಬಿಹಾರಿ ಅವರಂತಹ ಘಟಾನುಘಟಿಗಳ ನಾಯಕತ್ವ ಪ್ರಮುಖ ಕಾರಣ ಎಂದು ಬಣ್ಣಿಸಿದರು.

ಕಾಂಗ್ರೆಸ್ ಪಕ್ಷದ ದುರಾಡಳಿತದ ನೀತಿಯಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿ ಬೇಸತ್ತಿರುವ ರಾಜ್ಯದ ಜನರು ಈಗ ಬಿಜೆಪಿ ಪರವಾಗಿ ಒಲವು ತೋರಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಏ.8ರಿಂದ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಜನಜಾಗೃತಿ ಯಾತ್ರೆ ಹಮ್ಮಿಕೊಂಡಿದೆ ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿವೇಕ್ ಪ್ರಧಾನ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಸದಸ್ಯ ಸಾದೊಳಲು ಕೃಷ್ಣೇಗೌಡ, ಬೋರಯ್ಯ, ಗೊರವನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಶಂಕರ್, ಎಪಿಎಂಸಿ ಮಾಜಿ ನಿರ್ದೇಶಕ ಚನ್ನಸಂದ್ರ ಲಿಂಗೇಗೌಡ, ಮುಖಂಡರಾದ ಜಿ.ಬಿ.ಕೃಷ್ಣ ಅಲಿಯಾಸ್ ಡಾಬಾ ಶೆಟ್ಟಿ, ಮುಖಂಡರಾದ ನಾಗೇಶ್, ಕುಮಾರ್, ಮನು ಕುಮಾರ್, ಮಮತಾ ರಾಂಕ, ರಂಜಿತಾ, ಗೆಜ್ಜಲಗೆರೆ ಯೋಗೇಶ್, ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.

ಇದೇ ವೇಳೆ ಶ್ರೀ ರಾಮನವಮಿ ಅಂಗವಾಗಿ ವಿಶೇಷ ಪೂಜಾಯೊಂದಿಗೆ ಪಕ್ಷದ ಕಾರ್ಯಕರ್ತರಿಗೆ ಪ್ರಸಾದ ರೂಪದಲ್ಲಿ ಮಜ್ಜಿಗೆ,ಪಾನಕ, ಕೋಸಂಬರಿ ವಿತರಣೆ ಮಾಡಲಾಯಿತು.