ಫಲಿತಾಂಶಕ್ಕೂ ಮೊದಲೇ ವಿಜಯೋತ್ಸವಕ್ಕೆ ಬಿಜೆಪಿ ಸಿದ್ಧತೆ

| Published : Jun 04 2024, 12:32 AM IST

ಫಲಿತಾಂಶಕ್ಕೂ ಮೊದಲೇ ವಿಜಯೋತ್ಸವಕ್ಕೆ ಬಿಜೆಪಿ ಸಿದ್ಧತೆ
Share this Article
  • FB
  • TW
  • Linkdin
  • Email

ಸಾರಾಂಶ

ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಘೋಷಣೆಯಾಗುವ ಮುನ್ನವೇ ಬೆಳಗಾವಿಯಲ್ಲಿ ಬಿಜೆಪಿ ಅದ್ಧೂರಿ ವಿಜಯೋತ್ಸವಕ್ಕೆ ಸಿದ್ಧತೆ ಮಾಡಿಕೊಂಡಿದೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಘೋಷಣೆಯಾಗುವ ಮುನ್ನವೇ ಬೆಳಗಾವಿಯಲ್ಲಿ ಬಿಜೆಪಿ ಅದ್ಧೂರಿ ವಿಜಯೋತ್ಸವಕ್ಕೆ ಸಿದ್ಧತೆ ಮಾಡಿಕೊಂಡಿದೆ.

ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವಕ್ಕೆ ಸಿದ್ಧತೆ ಮಾಡಿದ್ದಾರೆ. ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಗೆಲುವು ಪಕ್ಕಾ ಆಗಿದೆ. ಅದರಲ್ಲಿ ಯಾವುದೇ ಅನುಮಾನವೇ ಇಲ್ಲ ಎಂದು ಬಿಜೆಪಿ ಕಾರ್ಯಕರ್ತರು ವಿಜಯೋತ್ಸವಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ.ಶಾಸಕ ಅಭಯ ಪಾಟೀಲ ಅವರ ಕಚೇರಿ ಎದುರು ಪೆಂಡಾಲ್‌ ಹಾಕಲಾಗಿದ್ದು, ಕುಳಿತುಕೊಳ್ಳಲು ಆಸನದ ವ್ಯವಸ್ಥೆಯನ್ನೂ ಮಾಡಲಾಗಿದೆ. ಪಕ್ಷದ ಕಾರ್ಯಕರ್ತರು ಎಲ್ಲರೂ ಒಂದೇ ಕಡೆ ಕುಳಿತುಕೊಂಡು ವಿಜಯೋತ್ಸವ ಸಂಭ್ರಮವನ್ನು ಸವಿಯಲು ಹಾಗೂ ಚುನಾವಣಾ ಮತ ಫಲಿತಾಂಶವನ್ನು ವೀಕ್ಷಿಸುವ ಉದ್ದೇಶದಿಂದ ದೊಡ್ಡ ಗಾತ್ರದ ಎಲ್‌ಇಡಿ ಪರದೆ ಅಳವಡಿಸಲಾಗಿದೆ. ಬಿಜೆಪಿ ವಿಜಯೋತ್ಸವ ಆಚರಿಸಲು ಹಿನ್ನೆಲೆಯಲ್ಲಿ ಹಬ್ಬದ ವಾತಾವರಣ ನಿರ್ಮಿಸಲಾಗುತ್ತಿದ್ದು, ಕರಡಿ ಮಜಲು, ಡೋಲ್‌, ತಾಷಾ, ಝಾಂಜಪತಕ ತಂಡಗಳು ಆಗಮಿಸಿವೆ.

ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ದೊರೆಯಲಿದೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ. ಬೆಳಗಾವಿ ಮತ್ತು ಚಿಕ್ಕೋಡಿ ಈ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಬೆಳಗಾವಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ಗೆಲುವಿಗೆ ಬೆಳಗಾವಿ ದಕ್ಷಿಣ ಕ್ಷೇತ್ರ ಪ್ರಮುಖ ಪಾತ್ರ ವಹಿಸಲಿದೆ.

- ಅಭಯ ಪಾಟೀಲ,

ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ