ಸಾರಾಂಶ
ಸಂವಿಧಾನ ವಿವಿಧ ವರ್ಗಗಳಿಗೆ ಕೊಟ್ಟಿದ್ದ ಹಕ್ಕುಗಳ ತದ್ವಿರುದ್ಧ ದಿಕ್ಕಿನಲ್ಲಿ ಕೇಂದ್ರ ಸರ್ಕಾರ ಕಾನೂನುಗಳನ್ನು ರೂಪಿಸಿ ತನ್ನ ಕಾರ್ಪೋರೇಟ್ ಬಳಗವನ್ನು ಬೆಳೆಸಿ ಜನಸಾಮಾನ್ಯರನ್ನು ದೋಚಲಾಗುತ್ತಿದೆ. ಆದ್ದರಿಂದ ದೇಶ ಉಳಿಸುವ ಮಹಾ ಅಭಿಯಾನದ ಭಾಗವಾಗಿ ಏ. 26ರಂದು ದಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಎದ್ದೇಳು ಕರ್ನಾಟಕ ಮಹಾಅಭಿಯಾನದ ಜಿಲ್ಲಾ ಸಂಯೋಜಕ ಶರಣು ಕುಮಾರ ತಿಳಿಸಿದರು.
ಕನ್ನಡಪ್ರಭ ವಾರ್ತೆ ಮಸ್ಕಿ ಸಂವಿಧಾನ ವಿವಿಧ ವರ್ಗಗಳಿಗೆ ಕೊಟ್ಟಿದ್ದ ಹಕ್ಕುಗಳ ತದ್ವಿರುದ್ಧ ದಿಕ್ಕಿನಲ್ಲಿ ಕೇಂದ್ರ ಸರ್ಕಾರ ಕಾನೂನುಗಳನ್ನು ರೂಪಿಸಿ ತನ್ನ ಕಾರ್ಪೋರೇಟ್ ಬಳಗವನ್ನು ಬೆಳೆಸಿ ಜನಸಾಮಾನ್ಯರನ್ನು ದೋಚಲಾಗುತ್ತಿದೆ. ಆದ್ದರಿಂದ ದೇಶ ಉಳಿಸುವ ಮಹಾ ಅಭಿಯಾನದ ಭಾಗವಾಗಿ ಏ. 26ರಂದು ದಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಎದ್ದೇಳು ಕರ್ನಾಟಕ ಮಹಾಅಭಿಯಾನದ ಜಿಲ್ಲಾ ಸಂಯೋಜಕ ಶರಣು ಕುಮಾರ ತಿಳಿಸಿದರು.ಪಟ್ಟಣದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ದೇಶವನ್ನು ಧರ್ಮ ಮತ್ತು ಜಾತಿಗಳ ಆಧಾರದ ಮೇಲೆ ಛಿದ್ರಗೊಳಿಸಲಾಗುತ್ತಿದೆ. ಅಮಾಯಕರ ಬದುಕನ್ನು ಬಲಿ ತೆಗೆದುಕೊಳ್ಳಲಾಗುತ್ತಿದೆ. ಯುವಜನರನ್ನು ಧರ್ಮಾಂಧರನ್ನಾಗಿಸಿ ನೆತ್ತರ ರಾಜಕಾರಣವನ್ನು ಪ್ರಚೋದಿಸಲಾಗುತ್ತಿದೆ ಎಂದು ಆರೋಪಿಸಿದರು.
ಆದ್ದರಿಂದ ಜನರಲ್ಲಿ ಜಾಗೃತಿ ಮೂಡಿಸಿ ಸಂವಿಧಾನ ಉಳಿಸಲು ದಾವಣಗೆರೆಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಜಿಲ್ಲೆ ಹಾಗೂ ವಿವಿಧ ರಾಜ್ಯಗಳಿಂದ ವಿವಿಧ ಗಣ್ಯರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳಲಿದ್ದಾರೆ.ರಾಯಚೂರು ಜಿಲ್ಲೆಯಿಂದ 500ಕ್ಕೂ ಅಧಿಕ ಜನ ಪಾಲ್ಗೊಳ್ಳಲಿದ್ದಾರೆ. ದಾವಣಗೆರೆಯಲ್ಲಿ ಸುಮಾರು ಹತ್ತು ಸಾವಿರ ಕ್ಕೂ ಅಧಿಕ ಜನ ಸಮಾವೇಶ ದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಜಿಗ್ನೇಶ್ ಮೇವಾನಿ, ಅಂಬೇಡ್ಕರ್ ಅವರ ಮೊಮ್ಮಗ ಸೇರಿದಂತೆ ವಿವಿಧ ಗಣ್ಯರು ಆಗಮಿಸಲಿದ್ದಾರೆ.ಮುಖಂಡರಾದ ಖಾಜಾ ಅಸ್ಲಂ ಅಹ್ಮದ್,ಮಾರಪ್ಪ,ದೊಡ್ಡಪ್ಪ ಮುರಾರಿ,ಭೀಮಣ್ಣ, ದಾನಪ್ಪ ನಿಲೋಗಲ್, ರಮೇಶ್, ಅಬ್ದುಲ್ ಗನಿಸಾಬ್ ಇತರರಿದ್ದರು.