ಬಿಜೆಪಿ ಜಗತ್ತಿನ ಅತಿ ದೊಡ್ಡ ರಾಜಕೀಯ ಪಕ್ಷವಾಗಿದೆ-ಶಾಸಕ ಡಾ. ಲಮಾಣಿ

| Published : Apr 07 2025, 12:36 AM IST

ಸಾರಾಂಶ

ಜಗತ್ತಿನ ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿರುವ ಪಕ್ಷವಾಗಿ ಬಿಜೆಪಿ ಎದ್ದು ಕಾಣುವ ಅಂಶವಾಗಿದೆ. ಬಿಜೆಪಿ ದೇಶದ ಅಭಿವೃದ್ಧಿಗಾಗಿ ಹುಟ್ಟಿ ಹೆಮ್ಮರವಾಗಿ ಬೆಳೆದು ನಿಂತಿರುವುದು ಸಂತೋಷದ ಸಂಗತಿಯಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಲಕ್ಷ್ಮೇಶ್ವರ: ಜಗತ್ತಿನ ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿರುವ ಪಕ್ಷವಾಗಿ ಬಿಜೆಪಿ ಎದ್ದು ಕಾಣುವ ಅಂಶವಾಗಿದೆ. ಬಿಜೆಪಿ ದೇಶದ ಅಭಿವೃದ್ಧಿಗಾಗಿ ಹುಟ್ಟಿ ಹೆಮ್ಮರವಾಗಿ ಬೆಳೆದು ನಿಂತಿರುವುದು ಸಂತೋಷದ ಸಂಗತಿಯಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಬಿಜೆಪಿ ಸಂಸ್ಥಾಪನಾ ದಿನವಾದ ಅಂಗವಾಗಿ ಭಾನುವಾರ ಶಾಸಕ ಡಾ. ಚಂದ್ರು ಲಮಾಣಿ ಬಿಜೆಪಿ ಧ್ವಜವನ್ನು ಪಟ್ಟಣದ ಬಾಲಾಜಿ ಆಸ್ಪತ್ರೆಯ ಮುಂಭಾಗದಲ್ಲಿ ಹಾರಿಸಿ, ಸಂಸ್ಥಾಪನಾ ದಿನದ ಕುರಿತು ಮಾತನಾಡಿದರು.ಬಿಜೆಪಿ ಅನೇಕ ನೇತಾರರ ರಾಷ್ಟ್ರಹಿತದ ಚಿಂತನೆಯಿಂದಾಗಿ ರಚನೆಯಾದ ಬಿಜೆಪಿ ಹೆಮ್ಮರವಾಗಿ ಬೆಳೆದು, ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷವೆಂಬ ಖ್ಯಾತಿ ಪಡೆದಿದೆ. ಪಕ್ಷದ ಬಲವರ್ಧನೆಗೆ ಕೊಡುಗೆ ನೀಡಿರುವ ಸಮಸ್ತ ಮುಖಂಡರು, ಕಾರ್ಯಕರ್ತರು ಅಭಿನಂದನಾರ್ಹರು. ಬಿಜೆಪಿ ಕಟ್ಟಿ ಬೆಳೆಸಿದ ವಾಜಪೇಯಿ, ಅಡ್ವಾಣಿ, ಮುರಳಿ ಮನೋಹರ ಜೋಶಿ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಗೆ ತಮ್ಮದೆ ಆದ ಕೊಡುಗೆ ನೀಡಿದ್ದಾರೆ. ಬಿಜೆಪಿ ಬೆಳೆಸುವಲ್ಲಿ ಜನಸಾಮಾನ್ಯರ ಹಾಗೂ ಕಾರ್ಯಕರ್ತರ ಶ್ರಮ ಮಹತ್ತರವಾಗಿದೆ ಎಂದು ಹೇಳಿದರು. ಈ ವೇಳೆಗೆ ಶಿರಹಟ್ಟಿ ಮಂಡಲದ ಅಧ್ಯಕ್ಷ ಸುನೀಲ ಮಹಾಂತಶೆಟ್ಟರ, ಲಕ್ಷ್ಮೇಶ್ವರ ನಗರ ಘಟಕದ ಅಧ್ಯಕ್ಷ ನವೀನ ಬೆಳ್ಳಟ್ಟಿ, ಪಕ್ಷದ ಹಿರಿಯ ಮುಖಂಡ ಬಿ.ಡಿ. ಪಲ್ಲೇದ, ಪಕ್ಷದ ಹಿರಿಯ ಮುಖಂಡ ನಿಂಗಪ್ಪ ಬನ್ನಿ, ನೀಲಪ್ಪ ಹತ್ತಿ, ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಚಕ್ರಸಾಲಿ, ಮಂಡಲದ ಪ್ರಧಾನ ಕಾರ್ಯದರ್ಶಿ ಅನಿಲ ಮುಳಗುಂದ, ಸಂತೋಷ ಜಾವೂರ ಹಾಗೂ ಪಕ್ಷದ ಹಿರಿಯ ಮುಖಂಡರು, ವಿವಿಧ ಮೋರ್ಚಾದ, ಪ್ರಮುಖರ ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಇದ್ದರು.