ಬಿಜೆಪಿ ಚುನಾವಣಾ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿದೆ: ಮಂಜುನಾಥ್ ಗೌಡ

| Published : Nov 23 2025, 03:15 AM IST

ಬಿಜೆಪಿ ಚುನಾವಣಾ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿದೆ: ಮಂಜುನಾಥ್ ಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಇತ್ತೀಚೆಗೆ ನಡೆದ ಬಿಹಾರ ಚುನಾವಣೆಯಲ್ಲಿ ಬಿಜೆಪಿ ವ್ಯಾಪಕ ಅಕ್ರಮ ಎಸಗಿದೆ ಎಂದು ಆರೋಪಿಸಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಬಿಹಾರದಲ್ಲಿ 80 ಲಕ್ಷ ಹಾಗೂ ಹರಿಯಾಣದಲ್ಲಿ 25 ಲಕ್ಷ ಮತಗಳನ್ನು ಕಳವು ಮಾಡಲಾಗಿದೆ. ಇದು ಚುನಾವಣಾ ಆಯೋಗ ಮತ್ತು ಬಿಜೆಪಿ ನಡುವಿನ ನಿರ್ಲಜ್ಜ ಮೈತ್ರಿಗೆ ಸಾಕ್ಷಿ. ಈ ಅನೈತಿಕ ಗೆಲುವಿನ ವಿರುದ್ಧ ಯುವ ಕಾಂಗ್ರೆಸ್ ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಕುಂದಾಪುರ

ದೇಶದೆಲ್ಲೆಡೆ ಬಿಜೆಪಿ, ಚುನಾವಣಾ ವ್ಯವಸ್ಥೆಯನ್ನೇ ದುರ್ಬಲಗೊಳಿಸಿ, ಅಕ್ರಮವಾಗಿ ಅಧಿಕಾರ ಹಿಡಿಯಲು ಯತ್ನಿಸುತ್ತಿದೆ. ಹಿಟ್ಲರ್ ಕೂಡ ಜರ್ಮನಿಯ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ಹಲವು ಚುನಾವಣೆಗಳನ್ನು ಗೆದ್ದಿದ್ದ. ಇಂದು ನಮ್ಮ ದೇಶದಲ್ಲೂ ಅದೇ ರೀತಿಯ ಆಡಳಿತ ನಡೆಯುತ್ತಿದೆ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ ಆರೋಪಿಸಿದ್ದಾರೆ.

ಅವರು ಕೋಟದಲ್ಲಿ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.ಇತ್ತೀಚೆಗೆ ನಡೆದ ಬಿಹಾರ ಚುನಾವಣೆಯಲ್ಲಿ ಬಿಜೆಪಿ ವ್ಯಾಪಕ ಅಕ್ರಮ ಎಸಗಿದೆ ಎಂದು ಆರೋಪಿಸಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಬಿಹಾರದಲ್ಲಿ 80 ಲಕ್ಷ ಹಾಗೂ ಹರಿಯಾಣದಲ್ಲಿ 25 ಲಕ್ಷ ಮತಗಳನ್ನು ಕಳವು ಮಾಡಲಾಗಿದೆ. ಇದು ಚುನಾವಣಾ ಆಯೋಗ ಮತ್ತು ಬಿಜೆಪಿ ನಡುವಿನ ನಿರ್ಲಜ್ಜ ಮೈತ್ರಿಗೆ ಸಾಕ್ಷಿ. ಈ ಅನೈತಿಕ ಗೆಲುವಿನ ವಿರುದ್ಧ ಯುವ ಕಾಂಗ್ರೆಸ್ ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದರು.ಕುಂದಾಪುರದ ಶಾಸಕರು ಯಾವುದೇ ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಮುಂದಿನ ಸ್ಥಳೀಯ ಸಂಸ್ಥೆ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಬೆಂಬಲಿಸಿ, ಅವರಿಗೆ ತಕ್ಕ ಪಾಠ ಕಲಿಸಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಜ್ಞಾನಪೀಠ ಪುರಸ್ಕೃತ ಶಿವರಾಮ ಕಾರಂತರು, ಕಾಶಿನಾಥ್, ಉಪೇಂದ್ರರಂತಹ ಸಾಧಕರನ್ನು ನಾಡಿಗೆ ನೀಡಿದ ಕುಂದಾಪುರದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಅವರು ಇದೇ ವೇಳೆ ಕೊಂಡಾಡಿದರು.ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಧ್ಯಕ್ಷ ಕಿಶನ್‌ ಹೆಗ್ಡೆ ಕೊಳ‍್ಕೆಬೈಲು, ಪಕ್ಷದ ನಾಯಕರಾದ ದಿನೇಶ್‌ ಹೆಗ್ಡೆ ಮೊಳಹಳ್ಳಿ ಮುಂತಾದವರಿದದ್ದರು.