23ಕ್ಕೆ ಜಿಲ್ಲೆಗೆ ಬಿಜೆಪಿ ಜನಾಕ್ರೋಶ ಯಾತ್ರೆ ಆಗಮನ

| Published : Apr 21 2025, 12:55 AM IST

ಸಾರಾಂಶ

ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ನೇತೃತ್ವದಲ್ಲಿ ಯಾದಗಿರಿಯಲ್ಲಿ ಏ.23 ರಂದು ರಾಜ್ಯ ಸರ್ಕಾರ ವಿರುದ್ದ ಜನಾಕ್ರೋಶ ಪ್ರತಿಭಟನೆ ರ‍್ಯಾಲಿ ಹಮ್ಮಿಕೊಂಡಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಯಶಸ್ವಿಗೊಳಿಸಬೇಕೆಂದು ಯಾದಗಿರಿ ನಗರಸಭೆ ಅಧ್ಯಕ್ಷೆ ಲಲಿತಾ ಅನಪೂರ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಗುರುಮಠಕಲ್‌

ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ನೇತೃತ್ವದಲ್ಲಿ ಯಾದಗಿರಿಯಲ್ಲಿ ಏ.23 ರಂದು ರಾಜ್ಯ ಸರ್ಕಾರ ವಿರುದ್ದ ಜನಾಕ್ರೋಶ ಪ್ರತಿಭಟನೆ ರ‍್ಯಾಲಿ ಹಮ್ಮಿಕೊಂಡಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಯಶಸ್ವಿಗೊಳಿಸಬೇಕೆಂದು ಯಾದಗಿರಿ ನಗರಸಭೆ ಅಧ್ಯಕ್ಷೆ ಲಲಿತಾ ಅನಪೂರ ಕರೆ ನೀಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪಕ್ಷದ ಕಾರ್ಯಕರ್ತರ ಜತೆಗೆ ಜನಾಕ್ರೋಶ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಯಾದಗಿರಿ ಜಿಲ್ಲೆಯಲ್ಲಿ ಏ.23 ರಂದು ನಡೆಯಲಿರುವ ಜನಾಕ್ರೋಶ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ರಾಜ್ಯದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಆಶೋಕ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

ಬೆಳಿಗ್ಗೆ 10 ಗಂಟೆಗೆ ಜಿಲ್ಲೆಯ ತಹಸೀಲ್ದಾರ ಕಚೇರಿಯಿಂದ ಸುಭಾಶ್ಚಂದ್ರ ಭೋಸ್‌ ವೃತ್ತದವರೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಗುರುಮಠಕಲ್ ಮತಕ್ಷೇತ್ರದಿಂದ ಬಿಜೆಪಿ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕು ಎಂದರು.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗಾಗಿ ಹಾಲು, ಅಕ್ಕಿ ಮುಂತಾದ ಪದಾರ್ಥಗಳ ಬೆಲೆ ಏರಿಕೆ ಮತ್ತು ಸಬ್ ನೋಂದಣಿ ಕಚೇರಿಯಲ್ಲಿ ಜಮೀನು ಶುಲ್ಕ ಏರಿಕೆ ಮಾಡಿದ್ದಾರೆ. ಜನರ ಬದಕಲು ಬೆಲೆ ಏರಿಕೆ ಹೊರೆಯಾಗಿದೆ. ಇದರಿಂದ ಜನ ಸರ್ಕಾರ ವಿರುದ್ದ ಆಕ್ರೋಶಗೊಂಡಿರುವ ಹಿನ್ನೆಲೆ, ಜನಾಕ್ರೋಶ ರ‍್ಯಾಲಿ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪ ವಿಭೂತಿಹಳ್ಳಿ, ಜಿಲ್ಲಾ ಉಪಾಧ್ಯಕ್ಷ ವೆಂಕಟಪ್ಪ ಅವಂಗಪೂರ್, ಜಿಲ್ಲಾ ಕಾರ್ಯದರ್ಶಿ ಚಂಧುಲಾಲ್ ಚೌದ್ರಿ, ಮಂಡಲ ಅಧ್ಯಕ್ಷ ನರಸಿಂಹಲು ನಿರೇಟಿ ಮುಂತಾದವರು ಉಪಸ್ಥಿತರಿದ್ದರು.