ಮೋದಿಯನ್ನು ಮತ್ತೆ ಪ್ರಧಾನಿಯಾಗಿಸುವ ಉದ್ದೇಶದಿಂದ ಬಿಜೆಪಿ-ಜೆಡಿಎಸ್‌ ಮೈತ್ರಿ: ಅರುಣಕುಮಾರ್

| Published : Apr 06 2024, 12:49 AM IST

ಮೋದಿಯನ್ನು ಮತ್ತೆ ಪ್ರಧಾನಿಯಾಗಿಸುವ ಉದ್ದೇಶದಿಂದ ಬಿಜೆಪಿ-ಜೆಡಿಎಸ್‌ ಮೈತ್ರಿ: ಅರುಣಕುಮಾರ್
Share this Article
  • FB
  • TW
  • Linkdin
  • Email

ಸಾರಾಂಶ

ನರೇಂದ್ರಮೋದಿಯನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡಬೇಕು ಎಂದು ಬಿಜೆಪಿ- ಜೆಡಿಎಸ್‌ ಪಕ್ಷಗಳ ರಾಷ್ಟ್ರೀಯ ನಾಯಕರ ತೀರ್ಮಾನದಂತೆ ತಾಲೂಕಿನಲ್ಲೂ ಉಭಯ ಪಕ್ಷದವರು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಅರುಣಕುಮಾರ್ ತಿಳಿಸಿದರು.

ರಾಷ್ಟ್ರಮಟ್ಟದಲ್ಲಿ ಉಭಯ ಪಕ್ಷಗಳ ಸಮನ್ವಯ ಸಮಿತಿ ರಚನೆತಾಲೂಕು ಅಧ್ಯಕ್ಷರಿಂದ ಜಂಟಿ ಸುದ್ದಿಗೋಷ್ಠಿ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ನರೇಂದ್ರಮೋದಿಯನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡಬೇಕು ಎಂದು ಬಿಜೆಪಿ- ಜೆಡಿಎಸ್‌ ಪಕ್ಷಗಳ ರಾಷ್ಟ್ರೀಯ ನಾಯಕರ ತೀರ್ಮಾನದಂತೆ ತಾಲೂಕಿನಲ್ಲೂ ಉಭಯ ಪಕ್ಷದವರು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಅರುಣಕುಮಾರ್ ತಿಳಿಸಿದರು.

ಶುಕ್ರವಾರ ಪತ್ರಿಕಾ ಭವನದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ , ರಾಷ್ಟ್ರಮಟ್ಟದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳ ಸಮನ್ವಯ ಸಮಿತಿ ರಚನೆಯಾಗಿದೆ. ಎನ್‌.ಡಿ.ಎ.ಒಕ್ಕೂಟದಲ್ಲಿ ಎರಡೂ ಪಕ್ಷಗಳು ಮಿತ್ರರಾಗಿದ್ದು ಮುಂದೆ ಒಟ್ಟಾಗಿ ಕೆಲಸ ಮಾಡುತ್ತೇವೆ. ಮುಖ್ಯವಾಗಿ ನಮ್ಮ ಉದ್ದೇಶ ನರೇಂದ್ರ ಮೋದಿ ಮತ್ತೆ ಈ ದೇಶದ ಪ್ರಧಾನಿಯಾಗಬೇಕು. ಉಡುಪಿ-ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಅತ್ಯಧಿಕ ಬಹುಮತದಿಂದ ಗೆಲ್ಲಿಸಬೇಕು ಎಂದು ತೀರ್ಮಾಸಿದ್ದೇವೆ ಎಂದರು.

ಈಗಾಗಲೇ ತಾಲೂಕಿನಲ್ಲೂ ಬಿಜೆಪಿ ಹಾಗೂ ಜೆಡಿಎಸ್‌ ಮುಖಂಡರು ಸಭೆ ನಡೆಸಿದ್ದೇವೆ.ಎಲ್ಲರೂ ಒಟ್ಟಾಗಿ ಬಿಜೆಪಿ ಅಭ್ಯರ್ಥಿ ಪರವಾಗಿ ಮತ ಕೇಳಲಿದ್ದೇವೆ. ಇದೇ ರೀತಿ ಮುಂದೆ ಗ್ರಾಮ ಪಂಚಾಯಿತಿ ಹಾಗೂ ಬೂತ್ ಮಟ್ಟದಲ್ಲೂ ಸಭೆ ಕರೆದು ಒಟ್ಟಾಗಿ ಮತ ಕೇಳಲು ಸೂಚಿಸಲಿದ್ದೇವೆ ಎಂದರು.

ತಾಲೂಕು ಜೆಡಿಎಸ್‌ ಪಕ್ಷದ ಮುಖಂಡ ಚಂದ್ರಶೇಖರ್‌ ಮಾತನಾಡಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಹಾಗೂ ಬಿಜೆಪಿ ಒಟ್ಟಾಗಿ ಚುನಾವಣೆ ಎದುರಿಸಲಿದ್ದೇವೆ. ರಾಷ್ಟ್ರ, ರಾಜ್ಯಮಟ್ಟ, ಜಿಲ್ಲಾ ಮಟ್ಟದಲ್ಲೂ ಈಗಾಗಲೇ ಬಿಜೆಪಿ ಹಾಗೂ ಜೆಡಿಎಸ್‌ ನಡುವೆ ಸಭೆ ನಡೆದಿದೆ. ಜೆಡಿಎಸ್‌ ರಾಷ್ಟ್ರ ನಾಯಕ ದೇವೇಗೌಡ, ರಾಜ್ಯ ಜೆಡಿಎಸ್‌ ಅಧ್ಯಕ್ಷ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರಮೋದಿ, ಗೃಹ ಸಚಿವ ಅಮಿತ್‌ ಶಾ, ರಾಜ್ಯ ನಾಯಕ ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಮಾತುಕತೆ ನಡೆಸಿ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ನಮ್ಮ ಮೈತ್ರಿಯಲ್ಲಿ ಯಾವುದೇ ಗೊಂದಲವಿಲ್ಲ. ರಾಜ್ಯ ಜೆಡಿಎಸ್‌ ಮುಖಂಡರ ನಿರ್ದೇಶನದಂತೆ ಕೆಲಸ ಮಾಡುತ್ತೇವೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಸರಳವಾದ ವ್ಯಕ್ತಿತ್ವ ಹೊಂದಿದ್ದಾರೆ. ಅವರು ತಳಮಟ್ಟದಿಂದ ರಾಜಕಾರಣ ಮಾಡಿಕೊಂಡು ಈಗ ಉನ್ನತ ಸ್ಥಾನಕ್ಕೆ ತಲುಪಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೆಸವಿ ಮಂಜುನಾಥ್‌, ತಾಲೂಕು ವಕ್ತಾರ ಎನ್‌.ಎಂ. ಕಾಂತರಾಜ್, ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸೈಯ್ಯದ್ ಪರ್ವೀಜ್, ಜೆಡಿಎಸ್‌ ಪಕ್ಷದ ತಾಲೂಕು ಕಾರ್ಯಾಧ್ಯಕ್ಷ ಶಿವದಾಸ್‌, ಉಪಾಧ್ಯಕ್ಷ ಉಪೇಂದ್ರ, ನಗರ ಘಟಕದ ಉಸ್ತುವಾರಿ ಕೆ.ಟಿ.ಚಂದ್ರಶೇಖರ್ ಇದ್ದರು.