ಬಿಜೆಪಿ- ಜೆಡಿಎಸ್ ಮೈತ್ರಿಯಿಂದ ರಾಜ್ಯದಲ್ಲಿ 28 ಸ್ಥಾನ ಗೆಲುವು ಶತಸಿದ್ಧ

| Published : Apr 08 2024, 01:03 AM IST

ಬಿಜೆಪಿ- ಜೆಡಿಎಸ್ ಮೈತ್ರಿಯಿಂದ ರಾಜ್ಯದಲ್ಲಿ 28 ಸ್ಥಾನ ಗೆಲುವು ಶತಸಿದ್ಧ
Share this Article
  • FB
  • TW
  • Linkdin
  • Email

ಸಾರಾಂಶ

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದಾಗಿ ಉಡುಪಿ- ಚಿಕ್ಕಮಗಳೂರು ಸೇರಿದಂತೆ ರಾಜ್ಯದ 28 ಲೋಕಸಭೆ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಶತಸಿದ್ಧ. ಇದರಿಂದ ಕಾಂಗ್ರೆಸ್‌ಗೆ ಮುಖಭಂಗವಾಗಲಿದೆ ಎಂದು ವಿಧಾನಪರಿಷತ್‌ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು.

ಚುನಾವಣಾ ಪ್ರಚಾರ ಕಚೇರಿ ಉದ್ಘಾಟನೆಯಲ್ಲಿ ಎಂ.ಕೆ.ಪ್ರಾಣೇಶ್

ಕನ್ನಡಪ್ರಭ ವಾರ್ತೆ, ಮೂಡಿಗೆರೆ

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದಾಗಿ ಉಡುಪಿ- ಚಿಕ್ಕಮಗಳೂರು ಸೇರಿದಂತೆ ರಾಜ್ಯದ 28 ಲೋಕಸಭೆ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಶತಸಿದ್ಧ. ಇದರಿಂದ ಕಾಂಗ್ರೆಸ್‌ಗೆ ಮುಖಭಂಗವಾಗಲಿದೆ ಎಂದು ವಿಧಾನಪರಿಷತ್‌ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು. ಪಟ್ಟಣದಲ್ಲಿ ಪಕ್ಷದ ಚುನಾವಣಾ ಪ್ರಚಾರ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿ ಪಟ್ಟ ಅಲಂಕರಿಸುವುದನ್ನು ನೋಡಲು ದೇಶದ ಜನತೆ ಕಾಯುತ್ತಿದ್ದಾರೆ. ದೇಶದಲ್ಲಿ ಕಳೆದ 10 ವರ್ಷದಿಂದ ಭ್ರಷ್ಟಾಚಾರ ರಹಿತ ಆಡಳಿತ ನಡೆಸಲಾಗಿದೆ. ಕೇಂದ್ರದಿಂದ ಪ್ರತಿ ಮನೆಗೆ ಉಚಿತವಾಗಿ 5 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಉಜ್ವಲ ಗ್ಯಾಸ್‌ನಲ್ಲಿ ಸಬ್ಸಿಡಿ ನೀಡಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸ್ಥಿರತೆ ಕಾಪಾಡಿಕೊಳ್ಳಲಾಗಿದೆ ಎಂದರು.

ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಸರಕಾರ ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕುಂಠಿತಗೊಳಿಸಿದೆ. ರಾಷ್ಟ್ರೀಯ ಶಿಕ್ಷಣ ನೀತಿ ತಡೆದು ಬಡವರ ಮಕ್ಕಳ ಉನ್ನತ ಶಿಕ್ಷಣದ ಹಕ್ಕನ್ನು ಕಿತ್ತು ಕೊಳ್ಳಲಾಗಿದೆ. ನಿಮ್ಮ 10 ಕೆಜಿ ಅಕ್ಕಿ ಕೊಡುತ್ತೇವೆಂದು ಮಾತಿಗೆ ತಪ್ಪಿದ್ದಾರೆ.

ಬಿಜೆಪಿ ತಾಲೂಕು ಅಧ್ಯಕ್ಷ ಗಜೇಂದ್ರ ಕೊಟ್ಟಿಗೆಹಾರ, ಜಿಲ್ಲಾ ಕಾರ್ಯದರ್ಶಿ ಜೆ.ಎಸ್.ರಘು, ಮುಖಂಡರಾದ ಪ್ರಶಾಂತ್, ಧನಿಕ್, ಸುದರ್ಶನ್, ವಿನೋದ್ ಕಣಚೂರು, ಹೂವಪ್ಪ, ಲಕ್ಷ್ಮಣಗೌಡ ಬಾಳೂರು, ಶಶಿ ಜಾವಳಿ, ಪದ್ಮಣ್ಣ, ಬಾಲುಶೆಟ್ಟಿ ಇದ್ದರು.

7 ಕೆಸಿಕೆಎಂ 4ಮೂಡಿಗೆರೆ ಪಟ್ಟಣದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷದ ಚುನಾವಣಾ ಪ್ರಚಾರ ಕಚೇರಿಯನ್ನು ವಿಧಾನಪರಿಷತ್‌ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಉದ್ಘಾಟಿಸಿದರು.