ಸಾರಾಂಶ
ಕನ್ನಡಪ್ರಭ ವಾರ್ತೆ, ತುಮಕೂರುತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ತಮಗೆ ಎರಡು ಕಣ್ಣುಗಳಿದ್ದಂತೆ. ಎರಡೂ ಪಕ್ಷಗಳನ್ನು ಸಮಾನವಾಗಿ ತೆಗೆದುಕೊಂಡು ಹೋಗುತ್ತೇನೆ. ಎರಡೂ ಪಕ್ಷದ ಕಾರ್ಯಕರ್ತರನ್ನು ಸಮಾನವಾಗಿ ಗೌರವಿಸುತ್ತೇನೆ ಎಂದು ಶಾಸಕ ಬಿ.ಸುರೇಶ್‌ಗೌಡರು ಹೇಳಿದರು.ಗ್ರಾಮಾಂತರ ವಿಧಾನಸಭಾಕ್ಷೇತ್ರದ ಮುತ್ಸಂದ್ರ ಗ್ರಾಮದಲ್ಲಿ ಭಾನುವಾರ ಮುತ್ಸಂದ್ರಮ್ಮ ದೇವಿಯ ನೂತನ ದೇವಸ್ಥಾನ ನಿರ್ಮಾಣದ ವಾಸಕಲ್ಲು ಇಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೇ ಒಪ್ಪಿದ್ದಾರೆ. ಹಿರಿಯರ ನಿರ್ಧಾರವನ್ನು ನಾನೂ ಗೌರವಿಸಿ ನಡೆದುಕೊಳ್ಳುತ್ತೇನೆ. ಕ್ಷೇತ್ರದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ನಡುವೆ ಭೇದಭಾವ ಇರಬಾರದು ಎಂದರು.ದೇವಸ್ಥಾನ ಗ್ರಾಮದ ಶ್ರದ್ಧಾಕೇಂದ್ರ.ಶಕ್ತಿದೇವತೆ ಮುತ್ಸಂದ್ರಮ್ಮ ದೇವಿಯ ನೂತನ ದೇವಸ್ಥಾನ ನಿರ್ಮಾಣದಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೈ ಜೋಡಿಸಬೇಕು. ದೇವಸ್ಥಾನ ನಿರ್ಮಾಣಕ್ಕೆ ಶಾಸಕರ ಅನುದಾನದಲ್ಲಿ 20 ಲಕ್ಷ ರು.ನೀಡುವುದಾಗಿ ಹೇಳಿದ ಸುರೇಶ್‌ಗೌಡರು, ಮುಂದಿನ ವಿಜಯದಶಮಿಯಂದು ದೇವಸ್ಥಾನ ಉದ್ಘಾಟನೆಯಾಗಲು ಸಿದ್ಧಗೊಳಿಸಿ ಎಂದು ತಿಳಿಸಿದರು. ಈ ವೇಳೆ ಗ್ರಾಮದ ವಿವಿಧ ಮುಖಂಡರು ಭಾಗವಹಿಸಿದ್ದರು.
;Resize=(128,128))
;Resize=(128,128))