ಬಿಜೆಪಿ, ಜೆಡಿಎಸ್‌ ಮುಖಂಡರು ಬಾಲರಾಜುವನ್ನು ಗೆಲ್ಲಿಸಿ

| Published : Apr 08 2024, 01:04 AM IST

ಬಿಜೆಪಿ, ಜೆಡಿಎಸ್‌ ಮುಖಂಡರು ಬಾಲರಾಜುವನ್ನು ಗೆಲ್ಲಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಹನೂರು ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಎಲ್ಲರೂ ಒಗ್ಗಟ್ಟಿನಿಂದ ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜು ಅವರನ್ನು ಹೆಚ್ಚಿನ ಮತಗಳ ಅಂತರದಲ್ಲಿ ಜಯಶೀಲರನ್ನಾಗಿ ಮಾಡಲು ಶ್ರಮಿಸಬೇಕು ಎಂದು ಶಾಸಕ ಮಂಜುನಾಥ್ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಹನೂರು

ಹನೂರು ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಎಲ್ಲರೂ ಒಗ್ಗಟ್ಟಿನಿಂದ ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜು ಅವರನ್ನು ಹೆಚ್ಚಿನ ಮತಗಳ ಅಂತರದಲ್ಲಿ ಜಯಶೀಲರನ್ನಾಗಿ ಮಾಡಲು ಶ್ರಮಿಸಬೇಕು ಎಂದು ಶಾಸಕ ಮಂಜುನಾಥ್ ಮನವಿ ಮಾಡಿದರು.

ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ ಮುಖಂಡರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ದೇಶ ಮತ್ತು ರಾಜ್ಯದ ಹಿತ ದೃಷ್ಠಿಯಿಂದ ಜೆಡಿಎಸ್ ಪಕ್ಷದ ವರಿಷ್ಟರಾದ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಬಿಜೆಪಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ನರೇಂದ್ರ ಮೋದಿ ಅವರ ಜನಪರ ಕಾಳಜಿ ಮತ್ತು ದೂರದೃಷ್ಠಿಯನ್ನು ಮನದಲ್ಲಿಟ್ಟುಕೊಂಡು 2047 ರ ಹೊತ್ತಿಗೆ ಪ್ರಪಂಚದಲ್ಲಿಯೇ ಭಾರತ ನಂಬರ್ ಒನ್ ದೇಶವಾಗಬೇಕು ಎಂಬ ಕನಸು ಹೊತ್ತಿರುವ ಮೋದಿಯವರ ಕೈ ಬಲಪಡಿಸಬೇಕಾದರೆ ಚಾಮರಾಜನಗರ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜು ಅವರನ್ನು ಜಯಶೀಲಿರನ್ನಾಗಿ ಮಾಡಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು. ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜು ಮಾತನಾಡಿ, ಮೋದಿಯವರ 10 ವರ್ಷಗಳ ಆಡಳಿತದ ಅಭಿವೃದ್ಧಿ ಕಾರ್ಯಗಳು ಮತ್ತು ಅಭಿವೃದ್ಧಿ ಯೋಜನೆಗಳು ದೇಶವನ್ನು ಮುನ್ನಡೆಸುತ್ತಿದೆ. ಅವರ ಜನಪ್ರಿಯತೆಯನ್ನು ಸಹಿಸದ ಕಾಂಗ್ರೆಸ್ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದೆ ಎಂದರು. ಮೋದಿಯವರ 10 ವರ್ಷಗಳ ಆಡಳಿತವು, ಪ್ರಪಂಚದಲ್ಲಿ ಭಾರತವು ಅಭಿವೃದ್ಧಿಯಲ್ಲಿ ಮೂರನೇ ಸ್ಥಾನಕ್ಕೆ ನಿಂತಿರುವುದಕ್ಕೆ ಸಾಕ್ಷಿ. ಆದ್ದರಿಂದ ಈ ಚುನಾವಣೆಯಲ್ಲಿ ತಮ್ಮ ಅಮೂಲ್ಯ ಮತವನ್ನು ನನಗೆ ನೀಡಿ ಜಯಶೀಲರನ್ನಾಗಿ ಮಾಡುವ ಮೂಲಕ ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರ ಆಡಳಿತ ಬರಲು ಸಹಕಾರ ನೀಡಬೇಕು ಎಂದು ತಿಳಿಸಿದರು.ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ವೆಂಕಟೇಶ್ ಮಾತನಾಡಿ, ಪ್ರಧಾನಿ ಸ್ಥಾನದಲ್ಲಿ ನರೇಂದ್ರ ಮೋದಿಯವರಿಗೆ ಸರಿಸಾಟಿಯಾಗಬಲ್ಲ, ಹೋಲಿಕೆ ಮಾಡಬಹುದಾದ ಸಮರ್ಥ ನಾಯಕರು ಬೇರೆ ಪಕ್ಷಗಳಲ್ಲಿ ಇಲ್ಲ ಎಂಬುದು ಜನಸಾಮಾನ್ಯರಿಗೂ ತಿಳಿದಿದೆ. ಆದ್ದರಿಂದ ಜೆಡಿಎಸ್ ಹಾಗೂ ಬಿಜೆಪಿ ಎಲ್ಲಾ ಕಾರ್ಯಕರ್ತರು ಒಗ್ಗೂಡಿ ಮತ್ತೊಮ್ಮೆ ನರೇಂದ್ರ ಮೋದಿ ಸರ್ಕಾರ ರಚನೆ ಮಾಡಲು ಎಲ್ಲರೂ ಶ್ರಮಿಸಿ ಚಾಮರಾಜನಗರ ಬಿಜೆಪಿ ಅಭ್ಯರ್ಥಿ ಬಾಲರಾಜು ಅವರನ್ನು ಗೆಲ್ಲಿಸಲು ಬಿಜೆಪಿ ಪಕ್ಷಕ್ಕೆ ಮತ ನೀಡಿ ಎಂದು ಕಾರ್ಯಕರ್ತರ ಸಭೆಯಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಲೆ ಮಾದೇಶ್ವರ ಬೆಟ್ಟ ಬಿಜೆಪಿ ಮಂಡಲದ ಅಧ್ಯಕ್ಷ ರಾಜು ಮುಖಂಡರಾದ ಪ್ರೀತಂ ನಾಗಪ್ಪ. ದತ್ತೇಶ್ ಕುಮಾರ್, ನಿಶಾಂತ್, ಜಯಸಂದ್ರ, ಜೆಡಿಎಸ್ ಮುಖಂಡರಾದ ವಿಜಯ್, ಚಾಮುಲ್ ನಿರ್ದೇಶಕ ಉದ್ದನೂರು ಪ್ರಸಾದ್, ಮಂಜೇಶ್, ಹಾಗೂ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.