ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ, ಜೆಡಿಎಸ್‌ ಪ್ರತಿಭಟನೆ

| Published : May 20 2024, 01:30 AM IST

ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ, ಜೆಡಿಎಸ್‌ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರು, ಮುಖಂಡ ಬಿ. ಚಿದಾನಂದಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಮಲೇಬೆನ್ನೂರಲ್ಲಿ ನಾಡ ಕಚೇರಿ ಉಪ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

- ಮಹಿಳೆಯರ ರಕ್ಷಣೆಗೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ- - - ಮಲೇಬೆನ್ನೂರು: ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರು, ಮುಖಂಡ ಬಿ. ಚಿದಾನಂದಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ನಾಡ ಕಚೇರಿ ಉಪ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಹಿಂದೂ ರಾಷ್ಟ್ರವಾದ ಭಾರತದಲ್ಲಿ ಮಹಿಳೆಯರಿಗೆ ಗೌರವ, ರಕ್ಷಣೆಯೇ ಇಲ್ಲದಾಗಿದೆ. ಪ್ರಾಣ ಉಳಿಸಿಕೊಳ್ಳುವ ಭೀತಿ ಎದುರಾಗಿದೆ. ಕೆಲ ಕಿಡಿಗೇಡಿಗಳಿಂದ ಯುವತಿಯರಿಗೆ ಜೀವಭಯ ಉಂಟಾಗಿದೆ. ಹುಬ್ಬಳ್ಳಿಯಲ್ಲಿ ನಡೆದ ಹತ್ಯೆ ಘಟನೆಗಳಿಂದಾಗಿ ಮಹಿಳೆಯರನ್ನು ಹೊರಗೆ ಕಳುಹಿಸಲು ಆಗದಂಥ ವಾತಾವರಣ ನಿರ್ಮಾಣವಾಗಿದೆ. ಸರ್ಕಾರಗಳು ಮಹಿಳೆಯರ ರಕ್ಷಣೆಗೆ ಬಿಗಿ ಕ್ರಮ ಕೈಗೊಳ್ಳಬೇಕು. ಇಂಥ ಘಟನೆಗಳು ಮರುಕಳಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಬಿ.ಸಿದ್ದೇಶ್, ನಿರಂಜನ್, ದೊರೆಸ್ವಾಮಿ, ಸುರೇಶ್, ವಿಶ್ವ, ಪ್ರಭಾಕರ್, ರಂಗನಾಥ್, ರವಿಕುಮಾರ್, ಗೋವಿಂದಪ್ಪ ಸಾವಜ್ಜಿ, ರಾಮಚಂದ್ರಪ್ಪ, ಮಹೇಂದ್ರಪ್ಪ, ಮುದೇಗೌಡರ ತಿಪ್ಪೇಶ್, ಪುಟ್ಟಣ್ಣ. ಕೆ.ಜಿ. ಮಂಜುನಾಥ್ ಮತ್ತಿತರರು ಇದ್ದರು.

- - - -೧೯ಎಂಬಿಆರ್೪:

ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಮಲೇಬೆನ್ನೂರಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರು ಮುಖಂಡ ಬಿ. ಚಿದಾನಂದಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ನಾಡ ಕಚೇರಿ ಉಪ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಬಿ.ಸಿದ್ದೇಶ್, ನಿರಂಜನ್, ದೊರೆಸ್ವಾಮಿ, ಸುರೇಶ್, ವಿಶ್ವ ಇತರರು ಇದ್ದರು.