ಕಾರ್ಕಳ: ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ವರ್ಗ 2026ರ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲ ವತಿಯಿಂದ ಪಕ್ಷದ ಕಾರ್ಯಕರ್ತರಿಗಾಗಿ ಎರಡು ದಿನಗಳ ಪ್ರಶಿಕ್ಷಣ ವರ್ಗವು ಶುಕ್ರವಾರ ಸಾಣೂರು ರಾಧಾ ಫಾರ್ಮ್ಸ್ ಆವರಣದಲ್ಲಿ ಉದ್ಘಾಟನೆಗೊಂಡಿತು.ಕಾರ್ಯಕ್ರಮವನ್ನು ಬೋಳ ಪ್ರಭಾಕರ ಕಾಮತ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಕಳ ಬಿಜೆಪಿ ಮಂಡಲಾಧ್ಯಕ್ಷ ನವೀನ್ ನಾಯಕ್, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಪ್ರಶಿಕ್ಷಣ ವರ್ಗದ ಸಂಯೋಜಕ ರವೀಂದ್ರ ಕುಮಾರ್ ಹಾಗೂ ಪ್ರಮುಖ ನಾಯಕ ಮಣಿರಾಜ್ ಶೆಟ್ಟಿ ಉಪಸ್ಥಿತರಿದ್ದರು.

ಪಕ್ಷದ ಸಂಘಟನೆ ಬಲವರ್ಧನೆ, ಕಾರ್ಯಕರ್ತರ ಸಾಮರ್ಥ್ಯ ವೃದ್ಧಿ ಹಾಗೂ ತತ್ವಾಧಾರಿತ ರಾಜಕೀಯ ಅರಿವು ಮೂಡಿಸುವ ಉದ್ದೇಶದಿಂದ ಈ ಪ್ರಶಿಕ್ಷಣ ವರ್ಗವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ 400 ಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಿದ್ದು, ವಿವಿಧ ವಿಷಯಗಳ ಕುರಿತು ತಜ್ಞರಿಂದ ಉಪನ್ಯಾಸಗಳು ಮತ್ತು ಮಾರ್ಗದರ್ಶನ ನೀಡಲಾಗುತ್ತಿದೆ.