ಜಿಎಸ್ಟಿ ಕುರಿತು ಬಿಜೆಪಿಯಿಂದ ಜಾಗೃತಿ ಕಾರ್ಯಕ್ರಮ

| Published : Oct 10 2025, 01:00 AM IST

ಜಿಎಸ್ಟಿ ಕುರಿತು ಬಿಜೆಪಿಯಿಂದ ಜಾಗೃತಿ ಕಾರ್ಯಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಕೇಂದ್ರ ಸರ್ಕಾರ ಜಿಎಸ್‌ಟಿ ಕಡಿಮೆ ಮಾಡಿರುವ ಕುರಿತು ಗ್ರಾಹಕರ ಮತ್ತು ವ್ಯಾಪಾರಸ್ಥರ ಅಭಿಪ್ರಾಯ ಸಂಗ್ರಹ ಕಾರ್ಯಕ್ರಮಕ್ಕೆ ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಹಾಗೂ ವಕೀಲ ಹನುಮಂತರೆಡ್ಡಿ ಗುರುವಾರ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಮಧುಗಿರಿ

ಕೇಂದ್ರ ಸರ್ಕಾರ ಜಿಎಸ್‌ಟಿ ಕಡಿಮೆ ಮಾಡಿರುವ ಕುರಿತು ಗ್ರಾಹಕರ ಮತ್ತು ವ್ಯಾಪಾರಸ್ಥರ ಅಭಿಪ್ರಾಯ ಸಂಗ್ರಹ ಕಾರ್ಯಕ್ರಮಕ್ಕೆ ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಹಾಗೂ ವಕೀಲ ಹನುಮಂತರೆಡ್ಡಿ ಗುರುವಾರ ಚಾಲನೆ ನೀಡಿದರು.

ಇಲ್ಲಿನ ಡೂಂ ಲೈಟ್‌ ಸರ್ಕಲ್‌ನಲ್ಲಿ ಬಿಜೆಪಿ ಕಾರ್ಯಕರ್ತರು ಸಮಾವೇಶಗೊಂಡು ಜಿಎಸ್‌ಟಿ ದರ ಇಳಿಕೆ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕರ ಪತ್ರಗಳನ್ನು ಕೈಯಲ್ಲಿ ಹಿಡಿದು ವ್ಯಾಪಾರಸ್ಥರು ಮತ್ತು ಗ್ರಾಹಕರಿಗೆ ಅರಿವು ಮೂಡಿಸುವ ಸಂದರ್ಭದಲ್ಲಿ ಮಾತನಾಡಿದ ಅವರು, ಶೇ.18ರಷ್ಠಿದ್ದ ಜಿಎಸ್‌ಟಿಯನ್ನು ಶೇ. 5ಕ್ಕೆ ಇಳಿಸಿರುವ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಇಳಿಕೆಯಾಗಿ ಜನಸಾಮಾನ್ಯರ ಜೀವನ ನಿರ್ವಹಣೆಗೆ ಅನುಕೂಲವಾಗಿದೆ. ಇದನ್ನು ತಾಲೂಕಿನ ಪ್ರತಿ ಗ್ರಾಮಗಳಿಗೆ ತೆರಳಿ ಜನರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದರು.

ಮಾಜಿ ಅಧ್ಯಕ್ಷ ಕೆ.ಎಸ್‌.ಪಾಂಡುರಂಗಾರೆಡ್ಡಿ ಮಾತನಾಡಿ, ಕೇಂದ್ರ ಸರ್ಕಾರ ಜಿಎಸ್‌ಟಿಯನ್ನು ಇಳಿಸಿದ್ದು, ರಾಜ್ಯ ಸರ್ಕಾರ ನಾವು ಮಾಡಿದ್ದೇವೆಂದು ಹೇಳಿಕೊಳ್ಳುತ್ತಿರುವುದು ಹಾಸ್ಯಸ್ಪದ ಎಂದ ಅ‍ವರು,ಈ ಜಿಎಸ್ಟಿ ಪರಿಷ್ಕರಣೆ ಬಗ್ಗೆ ಜನ ಜಾಗೃತಿ ಮೂಡಿಸಲಾಗುವುದು ಎಂದರು.

ಬಿಜೆಪಿ ಮುಖಂಡ ರಮೇಶ್ ಮಾತನಾಡಿ, ಭಾರತ ದೇಶದ ಜನತೆಯ ಸ್ವದೇಶಿ ವಸ್ತುಗಳನ್ನು ಬಳಸುವಂತೆ ಕರೆ ನೀಡಿದರು.

ಈ ವೇಳೆ ಬಿಜೆಪಿ ಹಿರಿಯ ಮುಖಂಡ ಬಡವನಹಳ್ಳಿ ನಾಗರಾಜಪ್ಪ,ಇತರರಿದ್ದರು.