ವಾಲ್ಮೀಕಿ ಹಗರಣ ಸಿಬಿಐಗೆ ನೀಡಲು ಆಗ್ರಹಿಸಿ ಸೆ. 17ಕ್ಕೆ ಪಾದಯಾತ್ರೆ
2 Min read
Author : KannadaprabhaNewsNetwork
Published : Aug 15 2024, 01:50 AM IST
Share this Article
FB
TW
Linkdin
Whatsapp
ಫೋಟೋ | Kannada Prabha
Image Credit: KP
ಬೆಳಗಾವಿಯಲ್ಲಿ ಸಭೆ ನಡೆಸಲಾಗಿದೆ. ಇದು ಅತೃಪ್ತರ, ಬಂಡಾಯಗಾರರ ಸಭೆಯಲ್ಲ. ಬಿಜೆಪಿಯ ಜನಪ್ರಿಯ ನೇತಾರ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ನಡೆದ ಸಭೆ
ಕನ್ನಡಪ್ರ ವಾರ್ತೆ ಮೈಸೂರುಮಹರ್ಷಿ ವಾಲ್ಮೀಕಿ ಹಗರಣ ಸಂಬಂಧ ಸೂಕ್ತ ತನಿಖೆಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಸೆ.17ಕ್ಕೆ ಬಿಜೆಪಿ ನೇತಾರ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಹೇಳಿದರು.ಬುಧವಾರ ಸುದ್ದಿಗಾರರೊಡನೆ ಮಾತನಾಡಿದ ಅವರು, ಈ ಸಂಬಂಧ ಬೆಳಗಾವಿಯಲ್ಲಿ ಸಭೆ ನಡೆಸಲಾಗಿದೆ. ಇದು ಅತೃಪ್ತರ, ಬಂಡಾಯಗಾರರ ಸಭೆಯಲ್ಲ. ಬಿಜೆಪಿಯ ಜನಪ್ರಿಯ ನೇತಾರ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ನಡೆದ ಸಭೆಯದು. ನಾನು ಮೈಸೂರು ಚಲೋ ಪಾದಯಾತ್ರೆ ಅನುಭವ ಹಂಚಿಕೊಂಡಿದ್ದೇನೆ ಎಂದರು.ವಾಲ್ಮೀಕಿ ಹಗರಣದ ವಿರುದ್ಧ ಸರಿಯಾದ ಹೋರಾಟ ನಡೆದರೆ ಮುಖ್ಯಮಂತ್ರಿಗಳ ಕುರ್ಚಿ ಅಲ್ಲಾಡುತ್ತದೆ. ಬಸವನಗೌಡ ಯತ್ನಾಳ್ ಅವರಂಥ ಬಹು ದೊಡ್ಡ ನಾಯಕರು ಕರೆದ ಕಾರಣ ನಾನು ಹೋಗಿದ್ದೆ. ಈ ಪಾದಯಾತ್ರೆ ಯಾರ ಮೇಲಾಟದ ಕಾರ್ಯಕ್ರಮವಲ್ಲ. ಯಾರ ನಾಯಕತ್ವ ಪ್ರದರ್ಶನವೂ ಅಲ್ಲ. ಪಾದಯಾತ್ರೆಗೆ ಹೈಕಮಾಂಡ್ ಅನುಮತಿ ಕೊಡುತ್ತದೆ. ಅವರ ಅನುಮತಿಯೊಂದಿಗೆ ಪಾದಯಾತ್ರೆ ಮಾಡಲಾಗುವುದು. ಬಿಜೆಪಿ ರಾಜ್ಯಾಧ್ಯಕ್ಷರ ಆದಿಯಾಗಿ ಎಲ್ಲರನ್ನು ಪಾದಯಾತ್ರೆಗೆ ಕರೆಯುತ್ತಾರೆ ಎಂಬ ವಿಶ್ವಾಸವಿದೆ ಎಂದು ಅವರು ಹೇಳಿದರು.ರಾಜ್ಯದಲ್ಲೇ ಇರಲು ಹೇಳಿದ್ದಾರೆಕೇಂದ್ರಕ್ಕೆ ಹೋಗಬೇಡಿ ರಾಜ್ಯದಲ್ಲಿ ಇರಿ ಎಂಬ ಸಂದೇಶವನ್ನು ವರಿಷ್ಠರು ನೀಡಿದ್ದಾರೆ. ಅದಕ್ಕೆ ಇಲ್ಲೆ ಇದ್ದೇನೆ. ನಾನು ಅನ್ಯಾಯದ ವಿರುದ್ಧ ಅಷ್ಟೆ ರೆಬೆಲ್. ನಾನು ಪಕ್ಷದ ವಿರುದ್ಧ ರೆಬೆಲ್ ಅಲ್ಲ. ಬಿಜೆಪಿಯ ದೊಡ್ಡ ದೊಡ್ಡ ನಾಯಕರಿಗಿಂತ ನಾನು ಪಕ್ಷದಲ್ಲಿ ಹಿರಿಯ. ಏಕೆಂದರೆ ನನ್ನ ತಂದೆಯೆ ಆರ್.ಎಸ್.ಎಸ್ ನಲ್ಲಿದ್ದರು. ನಾನು ಪಕ್ಷಕ್ಕೆ ಬ್ಯಾನರ್, ಬಂಟಿಂಗ್ ಕಟ್ಟಿಲ್ಲದೆ ಇರಬಹುದು. ಯುವ ಸಮೂಹವನ್ನು ಪಕ್ಷಕ್ಕೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದೇನೆ ಎಂದು ಅವರು ಹೇಳಿದರು.ಯಡಿಯೂರಪ್ಪ ಅಂತವರು ನೇಪಥ್ಯಕ್ಕೆ ಸರಿಯುತ್ತಿರುವ ಕಾರಣ ನನ್ನಂಥ ಯುವ ರಕ್ತ ಬರಬೇಕಿದೆ. ಹೀಗಾಗಿ ನನ್ನ ರಾಜ್ಯದಲ್ಲೇ ಉಳಿಸಿದ್ದಾರೆ. ನಾನು ಯಾರನ್ನು ಓಲೈಸಲು ಮೆಚ್ಚಿಸಲು ರಾಜಕಾರಣ ಮಾಡಲ್ಲ. ಯಾರ ಮನೆಯ ಬಾಗಿಲೂ ತಟ್ಟಲ್ಲ. ನನಗೆ ಟಿಕೆಟ್ ಕೊಟ್ಟಿದ್ದು ಬಿಜೆಪಿ ಅಲ್ಲ. ರಾಷ್ಟ್ರೀಯ ಸ್ವಯಂ ಸೇವಾ ಸಂಘ ನನಗೆ ಟಿಕೆಟ್ ಕೊಟ್ಟಿದ್ದು ಎಂದು ಅವರು ತಿಳಿಸಿದರು.ಕ್ಷೇತ್ರ, ಜಾತಿ ಆಚೆಗೆ ಜನಪ್ರಿಯತೆ ಇರುವ ಬಸನಗೌಡ ಯತ್ನಾಳ್ ಅಂಥವರಲ್ಲಿ ನಾನು ಕೂಡ ಒಬ್ಬ. ಇದರ ಬಗ್ಗೆ ಯಾರಿಗಾದರೂ ಅನುಮಾನ ಇದೆಯಾ? ಮೈಸೂರು ನೆಲೆ, ಪ್ರೀತಿಸಿಕ್ಕಿದೆ ನಾನು ಮೈಸೂರಲ್ಲೆ ಇರುತ್ತೇನೆ ಎಂದು ಅವರು ಹೇಳಿದರು.
-- ಬಾಕ್ಸ್--
-- ಆರೋಪಿಯನ್ನು ಮಾತನಾಡಿಸುವುದೇ ತಪ್ಪಾ?-- ಗೌರಿ ಲಂಕೇಶ್ ಹತ್ಯೆಗೈದ ಆರೋಪಿಯನ್ನು ಭೇಟಿಯಾಗಿ ಮಾತನಾಡಿಸಿದೆ. ಆರೋಪಿಯನ್ನು ಮಾತನಾಡಿಸುವುದೇ ತಪ್ಪು ಎನ್ನುವುದಾದರೆ ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಆರೋಪಿಗಳಾದ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಕಾಲಿಗೇಕೆ ಬೀಳುತ್ತೀರಿ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಜರಿದರು.ಸಚಿವ ದಿನೇಶ್ ಗುಂಡೂರಾವ್ ಟ್ವೀಟ್ ಗೆ ತಿರುಗೇಟು ನೀಡಿದ ಅವರು, ರಾಜಕಾರಣಿಗಳ ಮಕ್ಕಳಿಗೆ ಅಪ್ಪಂದಿರ ಪ್ರತಿಭೆ ವರ್ಗಾವಣೆ ಆಗಲ್ಲ. ದಿನೇಶ್ ಗುಂಡೂರಾವ್ ವಿಚಾರದಲ್ಲೂ ಅದೇ ಆಗಿದೆ. ಪ್ರಕರಣದ ಆರೋಪಿಯನ್ನು ಮಾತಾಡಿಸುವುದೆ ತಪ್ಪಾ? ಹಾಗೆ ನೋಡಿದರೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹಗರಣದ ವಿಚಾರದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಇಬ್ಬರು ಆರೋಪಿಗಳೇ. ಅಂದ ಮೇಲೆ ಕಾಂಗ್ರೆಸ್ ನಾಯಕರು ಯಾಕೆ ಹೋಗಿ ಅವರ ಕಾಲಿಗೆ ಬೀಳುತ್ತಾರೆ ಎಂದು ಮೊದಲಿಸಿದರು.
ಅಧಿನಾಯಕ, ಅಧಿನಾಯಕಿ ಅಂತಾ ಕರೆಯುವ ಸೋನಿಯಾ, ರಾಹುಲ್ ಆರೋಪಿ ಸ್ಥಾನದಲ್ಲಿ ಇಲ್ವಾ? ದಿನೇಶ್ ಗುಂಡೂರಾವ್ ಅವರು ತಿಳಿಗೇಡಿತನದಲ್ಲಿ ಹೇಳಿಕೆ ಕೊಡುವುದನ್ನು ನಿಲ್ಲಿಸಲಿ ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.