ಸಾರಾಂಶ
ಇಡೀ ಪ್ರಪಂಚದ ಹಿಂದೂಗಳಿಗೆ ಇಂದು ಅತ್ಯಂತ ಶುಭದಾಯಕ ದಿನ. 500ರಿಂದ 600 ವರ್ಷದ ಹೋರಾಟಕ್ಕೆ ಈಗ ಫಲ ಸಿಕ್ಕಿದೆ. ಶ್ರೀರಾಮ ಮಂದಿರದಲ್ಲಿ ಶ್ರೀರಾಮನನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಯಜಮಾನನ ಸ್ಥಾನದಲ್ಲಿದ್ದು ಪೂಜೆ ನೆರವೇರಿಸಿದ್ದಾರೆ. ಹಿಂದೂಗಳಿಗೆ ಇದು ಸಂತೋಷದ ಕಾಲ.
ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಬಿಜೆಪಿ ಕಚೇರಿಯಲ್ಲಿ ಶ್ರೀರಾಮ ಪ್ರತಿಷ್ಠಾಪನೆ ಅಂಗವಾಗಿ ಶ್ರೀರಾಮನ ಭಾವಚಿತ್ರಕ್ಕೆ ಮುಖಂಡರು ಮತ್ತು ಕಾರ್ಯಕರ್ತರು ಪುಷ್ಪಾರ್ಚನೆ ಮಾಡಿ ಭಕ್ತಿ ಮೆರೆದರು.ನಂತರ ಮಾತನಾಡಿದ ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ, ಇಡೀ ಪ್ರಪಂಚದ ಹಿಂದೂಗಳಿಗೆ ಇಂದು ಅತ್ಯಂತ ಶುಭದಾಯಕ ದಿನ. 500ರಿಂದ 600 ವರ್ಷದ ಹೋರಾಟಕ್ಕೆ ಈಗ ಫಲ ಸಿಕ್ಕಿದೆ. ಶ್ರೀರಾಮ ಮಂದಿರದಲ್ಲಿ ಶ್ರೀರಾಮನನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಯಜಮಾನನ ಸ್ಥಾನದಲ್ಲಿದ್ದು ಪೂಜೆ ನೆರವೇರಿಸಿದ್ದಾರೆ. ಹಿಂದೂಗಳಿಗೆ ಇದು ಸಂತೋಷದ ಕಾಲ ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ.ನಾ.ಸುರೇಶ್, ಮುಖಂಡರಾದ ವಿವೇಕ್, ಸಿ.ಟಿ.ಮಂಜುನಾಥ್, ಸಿದ್ದರಾಜುಗೌಡ, ಶಿವಲಿಂಗು, ನಾಗಾನಂದ್ ಇತರರು ಭಾಗವಹಿಸಿದ್ದರು.ಮಕ್ಕಳಿಂದ ಶ್ರೀರಾಮ, ಲಕ್ಷಣ, ಸೀತೆ, ಆಂಜನೇಯ ವೇಷ ಧರಿಸಿ ಮೆರವಣಿಗೆ
ದೇವಲಾಪುರ:ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾನ ಅಂಗವಾಗಿ ದೇವಲಾಪುರದಲ್ಲಿ ರಾಮೋತ್ಸವ ಅದ್ಧೂರಿಯಾಗಿ ಜರುಗಿತು.ಹೋಬಳಿ ಕೇಂದ್ರದಲ್ಲಿ ಎರಡು ದಿನಗಳ ಕಾಲ ವಿವಿಧ ಸ್ಪರ್ಧೆ ಆಯೋಜಿಸಿ ಬಹುಮಾನ ವಿತರಿಸಲಾಯಿತು. ರಾಮಮಂದಿರದಲ್ಲಿ ವಿಶೇಷ ಪೂಜೆ ಮಹಾ ಮಂಗಳಾರತಿ ನಡೆಯಿತು.ಚಿಕ್ಕ ಮಕ್ಕಳಿಗೆ ಶ್ರೀರಾಮ ಲಕ್ಷ್ಮಣ ಸೀತೆ ಆಂಜನೇಯ ಸ್ವಾಮಿ ಅವರ ಪಾತ್ರಗಳನ್ನು ಸೃಷ್ಟಿಸಿ ಮಂಗಳವಾದ್ಯದೊಂದಿಗೆ ಪ್ರಮುಖ ಬೀದಿಗಳಲ್ಲಿ ರಾಮ ಘೋಷಣೆಗಳೊಂದಿಗೆ ಮೆರವಣಿಗೆ ನಡೆಯಿತು. ಮಹಾ ಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ಅನ್ನ ಸಂತರ್ಪಣೆ ಜರುಗಿತು. ಸಂಜೆ ದೀಪೋತ್ಸವ ಹಾಗೂ ಸಂಪೂರ್ಣ ರಾಮಾಯಣ ಹರಿಕಥೆ ನಡೆಸಲಾಯಿತು.