ರಾಜ್ಯದಲ್ಲಿ ಹೂಡಿಕೆ ಹೆಚ್ಚಳ ಬಗ್ಗೆ ದಾಖಲೆ ಸಮೇತ ಉತ್ತರ: ಡಿಕೆಶಿ

| Published : May 25 2024, 12:48 AM IST / Updated: May 25 2024, 09:52 AM IST

DK shivakumar
ರಾಜ್ಯದಲ್ಲಿ ಹೂಡಿಕೆ ಹೆಚ್ಚಳ ಬಗ್ಗೆ ದಾಖಲೆ ಸಮೇತ ಉತ್ತರ: ಡಿಕೆಶಿ
Share this Article
  • FB
  • TW
  • Linkdin
  • Email

ಸಾರಾಂಶ

 ಕಾಂಗ್ರೆಸ್‌ ಸರ್ಕಾರ ಬಂದ ಬಳಿಕ ರಾಜ್ಯದಲ್ಲಿ ಹೂಡಿಕೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದು, ಈ ಬಗ್ಗೆ ದಾಖಲೆ ಸಮೇತ ಬಿಜೆಪಿ ನಾಯಕರಿಗೆ ಉತ್ತರ ನೀಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

 ಬೆಂಗಳೂರು :  ‘ಬಂಡವಾಳ ಹೂಡಿಕೆದಾರರು ನೆರೆ ರಾಜ್ಯಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ ಎನ್ನುವ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು. ಕಾಂಗ್ರೆಸ್‌ ಸರ್ಕಾರ ಬಂದ ಬಳಿಕ ರಾಜ್ಯದಲ್ಲಿ ಹೂಡಿಕೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದು, ಈ ಬಗ್ಗೆ ದಾಖಲೆ ಸಮೇತ ಬಿಜೆಪಿ ನಾಯಕರಿಗೆ ಉತ್ತರ ನೀಡುತ್ತೇವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದರು.ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು. ಅವರು ದಾಖಲೆಗಳನ್ನು ಪರಿಶೀಲಿಸದೆ ಸುಳ್ಳು ಹೇಳಿದ್ದಾರೆ. ಬಿಜೆಪಿಯ ದುರಾಡಳಿತ, ಕಿರುಕುಳಕ್ಕೆ ಬೇಸತ್ತು ಲಕ್ಷಾಂತರ ಉದ್ದಿಮೆದಾರರು, ವ್ಯಾಪಾರಿಗಳು ದೇಶ ಬಿಟ್ಟು ಹೋಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಂಡವಾಳ ಹೂಡಿಕೆದಾರರು ನಮ್ಮ ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಪ್ರಜ್ವಲ್‌ ಬಗ್ಗೆ ಪ್ರತಿಕ್ರಿಯಿಸಲ್ಲ:

ಡಿಕೆಶಿ ಪ್ರಜ್ವಲ್ ರೇವಣ್ಣ ಅವರ ವಿಚಾರವಾಗಿ ದೇವೇಗೌಡರ ಪತ್ರದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಶಿವಕುಮಾರ್, ‘ಐ ಯಮ್ ಸಾರಿ, ಇದು ಅವರ ಕುಟುಂಬದ ವಿಚಾರ. ಈ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಈ ಬಗ್ಗೆ ನನ್ನ ಪ್ರತಿಕ್ರಿಯೆ ಇಲ್ಲ’ ಎಂದು ಸ್ಪಷ್ಟಪಡಿಸಿದರು.