ಭಾರತದ ಯೋಧರ ಶ್ರೇಯಸ್ಸಿಗೆ ಬಿಜೆಪಿ ಮಹಿಳಾ ಮೋರ್ಚಾ ಪೂಜೆ

| Published : May 09 2025, 12:36 AM IST

ಸಾರಾಂಶ

ಯಶಸ್ವಿಯಾಗಿ ‘ಆಪರೇಶನ್ ಸಿಂದೂರ್’ ಕಾರ್ಯಾಚರಣೆ ನಡೆಸಿ, ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಅಮಾಯಕ ಹಿಂದೂಗಳ ಮಾರಣಹೋಮಗೈದು ಅವರ ಪತ್ನಿಯರ ಸಿಂದೂರ ಅಳಿಸಿದ ದುರುಳ ಉಗ್ರರ ಸಂಹಾರ ಮಾಡಿದ ಭಾರತೀಯ ವೀರ ಯೋಧರ ಶ್ರೇಯಸ್ಸಿಗಾಗಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಉಡುಪಿಯ ಜಗದ್ಗುರು ಶ್ರೀ ನಿತ್ಯಾನಂದ ಮಂದಿರದಲ್ಲಿ ವಿಶೇಷ ಪೂಜೆಯನ್ನು ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಯಶಸ್ವಿಯಾಗಿ ‘ಆಪರೇಶನ್ ಸಿಂದೂರ್’ ಕಾರ್ಯಾಚರಣೆ ನಡೆಸಿ, ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಅಮಾಯಕ ಹಿಂದೂಗಳ ಮಾರಣಹೋಮಗೈದು ಅವರ ಪತ್ನಿಯರ ಸಿಂದೂರ ಅಳಿಸಿದ ದುರುಳ ಉಗ್ರರ ಸಂಹಾರ ಮಾಡಿದ ಭಾರತೀಯ ವೀರ ಯೋಧರ ಹಾಗೂ ಪ್ರಧಾನಿ ನರೇಂದ್ರ ಮೋದಿ, ಸರ್ಕಾರದ ಶ್ರೇಯಸ್ಸಿಗಾಗಿ, ಸಮಸ್ತ ಭಾರತೀಯರ ನೆಮ್ಮದಿಯ ಬದುಕಿಗಾಗಿ ಪ್ರಾರ್ಥಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಉಡುಪಿಯ ಜಗದ್ಗುರು ಶ್ರೀ ನಿತ್ಯಾನಂದ ಮಂದಿರದಲ್ಲಿ ವಿಶೇಷ ಪೂಜೆಯನ್ನು ನಡೆಸಲಾಯಿತು.ಪೂಜೆಯಲ್ಲಿ ಭಾಗವಹಿಸಿದ ಎಲ್ಲ ಮಾತಾ ಭಗಿನಿಯರಿಗೆ ಸಿಂದೂರದ ಪ್ರತೀಕವಾಗಿ ಅರಿಶಿನ ಕುಂಕುಮವನ್ನು ವಿತರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಉಪಾಧ್ಯಕ್ಷೆ ಸುಜಾಲಾ ಸತೀಶ್, ಉಡುಪಿ ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸರೋಜಾ ಶೆಣೈ, ಶಾಂತಿ ಮನೋಜ್ ಹಾಗೂ ಮಹಿಳಾ ಮೋರ್ಚಾ ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳು ಉಪಸ್ಥಿತರಿದ್ದರು.