ಸಾರಾಂಶ
ರಾಜ್ಯದ ಕಾಂಗ್ರೆಸ್ ಸರ್ಕಾರದಿಂದ ಶಿಕ್ಷಣ ಕ್ಷೇತ್ರದ ಬಗ್ಗೆ ನಿರ್ಲಕ್ಷ್ಯದ ವಿರುದ್ಧ ಬಿಜೆಪಿ ನಾಯಕರು ಗುರುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಚಿಂತನಾ ಸಭೆ ನಡೆಸಿದರು.
ಕನ್ನಡಪ್ರಭ ವಾರ್ತೆ ಬೆಂಗಳೂರು
ರಾಜ್ಯದ ಕಾಂಗ್ರೆಸ್ ಸರ್ಕಾರದಿಂದ ಶಿಕ್ಷಣ ಕ್ಷೇತ್ರದ ಬಗ್ಗೆ ನಿರ್ಲಕ್ಷ್ಯದ ವಿರುದ್ಧ ಬಿಜೆಪಿ ನಾಯಕರು ಗುರುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಚಿಂತನಾ ಸಭೆ ನಡೆಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಶಿಕ್ಷಣ ವಿರೋಧಿ ನೀತಿಯನ್ನು ನಿರಂತರವಾಗಿ ಅಳವಡಿಸಿಕೊಂಡಿದೆ ಎಂದು ತೀವ್ರ ಆಕ್ಷೇಪ ವ್ಯಕ್ತವಾಯಿತು. ಸರ್ಕಾರವು ತನ್ನ ನೀತಿಯನ್ನು ಬದಲಿಸಿ ಶಿಕ್ಷಣವನ್ನು ಪ್ರೋತ್ಸಾಹಿಸುವ ನೀತಿಯನ್ನು ಅಳವಡಿಸಿಕೊಳ್ಳಬೇಕೆಂದು ಆಗ್ರಹಿಸಲಾಯಿತು.
ಈ ಸಭೆಯಲ್ಲಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಎನ್. ರವಿಕುಮಾರ್ , ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ, ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರು, ಶಿಕ್ಷಣ ತಜ್ಞರು, ಬಿಜೆಪಿ ಶಿಕ್ಷಣ ಪ್ರಕೋಷ್ಠದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.